Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕಂಪ್ಯೂಟರೈಸ್ಡ್ ಅಕೌಂಟಿಂಗ್‌ ತರಬೇತಿ ಉದ್ಘಾಟನೆ
    ಊರ್ಮನೆ ಸಮಾಚಾರ

    ಕಂಪ್ಯೂಟರೈಸ್ಡ್ ಅಕೌಂಟಿಂಗ್‌ ತರಬೇತಿ ಉದ್ಘಾಟನೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಬ್ರಹ್ಮಾವರ
    : ಗ್ರಾಮಾಭಿವೃದ್ಧಿ ಮತ್ತು ಸ್ವ ಉದ್ಯೋಗ ತರಬೇತಿ (ರುಡ್ ಸೆಟ್) ಸಂಸ್ಥೆ ಬ್ರಹ್ಮಾವರ ಇವರ ಆಶ್ರಯದಲ್ಲಿ ಕಂಪ್ಯೂಟರೈಸ್ಡ್ ಅಕೌಂಟಿಂಗ್ ತರಬೇತಿಯ ಉದ್ಘಾಟನಾ ಸಮಾರಂಭವು ಸಂಸ್ಥೆಯ ಸಭಾಂಗಣದಲ್ಲಿ ನಡೆಯಿತು.

    Click Here

    Call us

    Click Here

    ಮುಖ್ಯ ಅತಿಥಿಗಳಾಗಿ ಮಾತನಾಡಿದ ಬ್ರಹ್ಮಾವರ ಎಸ್ ಎಂ ಎಸ್ ಕಾಲೇಜಿನ ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಭರತ್ ರಾಜ್ ಅವರು, ರುಡ್ ಸೆಟ್ ಸಂಸ್ಥೆಯ ಅಭೂತ ಪೂರ್ವ ಕಾರ್ಯ ಚಟುವಟಿಕೆಯನ್ನು ಶ್ಲಾಘಿಸಿಕೊಂಡು, ಸಂಸ್ಥೆಯ ಮುಖಾಂತರ ಅವರು ಪಡೆದ ಅನುಭವವನ್ನು ಕೂಡ ಶಿಬಿರಾರ್ಥಿಗಳೊಂದಿಗೆ ಹಂಚಿಕೊಂಡರು. ಹಾಗೆಯೇ ಸ್ವಂತ ದುಡಿಮೆಯ ಮಹತ್ವವನ್ನು, ಸ್ವಾವಲಂಬಿ ಬದುಕಿನ ಮೌಲ್ಯವನ್ನು, ಅದರ ಅಗತ್ಯತೆಯನ್ನು ತನ್ನ ಸ್ವಂತ  ಜೀವನದ ಅನುಭವವನ್ನು ಹಂಚಿಕೊಳ್ಳುವ ಮುಖಾಂತರ ಶಿಬಿರಾರ್ಥಿಗಳನ್ನು ಹುರಿದುಂಬಿಸಿದರು. ಕಂಪ್ಯೂಟರ್ ಕೌಶಲ್ಯವನ್ನು ಕರಗತ ಮಾಡಿಕೊಳ್ಳುವುದು ಈಗಿನ ಹಾಗೂ ಮುಂದಿನ ವಿದ್ಯಮಾನದಲ್ಲಿ ಬಹು ಅಗತ್ಯವಾಗಿ ಅರಿತುಕೊಳ್ಳಬೇಕಾಗಿರುವಂತಹ ವಿಷಯ. ಹಾಗಾಗಿ ಛಲದಿಂದ ಹಿಡಿದ ಕೆಲಸವನ್ನು ಬಿಡದೆ, ಮುಂದುವರಿಯಿರಿ. ಸಮಾಜದಲ್ಲಿ ಯಶಸ್ವಿ ವ್ಯಕ್ತಿಗಳಾಗಿ ಎಂದು ಹೇಳಿ  ಶಿಬಿರಾರ್ಥಿಗಳಿಗೆ  ಶುಭ ಹಾರೈಸಿದರು.

    ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದ ರುಡ್ ಸೆಟ್ ಸಂಸ್ಥೆಯ ನಿರ್ದೇಶಕರಾದ ಡಾ. ಬೊಮ್ಮಯ್ಯ ಎಂ. ಶಿಬಿರಾರ್ಥಿಗಳನ್ನುದ್ದೇಶಿಸಿ ಮಾತನಾಡಿ, ತರಬೇತಿಯನ್ನು ಶ್ರದ್ಧೆಯಿಂದ ಪಡೆದುಕೊಂಡು ಇಲ್ಲಿಂದ ಮುಂದುವರಿಯಬೇಕು. ತರಬೇತಿ ಅವಧಿಯಲ್ಲಿ ಯಾವುದೇ ಅನುಮಾನಗಳಿದ್ದರೂ ಬಗೆಹರಿಸಿಕೊಂಡು, ಕಂಪ್ಯೂಟರ್ ಜ್ಞಾನವನ್ನು ಹೆಚ್ಚಿಸಿಕೊಳ್ಳಿ ಹಾಗೆಯೇ ಟ್ಯಾಲಿ, GST, ಟೈಪಿಂಗ್ ಮುಂತಾದ ವಿಷಯಗಳು ನಿಮಗೆ ಹೆಚ್ಚು ಅಗತ್ಯವಿರುವ ವಿಷಯಗಳು. ಹಾಗಾಗಿ ಯಾವುದೇ ಅಂಜಿಕೆಯಿಲ್ಲದೆ ಆಸಕ್ತಿಯಿಂದ ತರಬೇತಿಯನ್ನು ಪಡೆದುಕೊಂಡು ಸ್ವಉದ್ಯೋಗದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ಆರ್ಥಿಕವಾಗಿ ಸಧೃಢರಾಗಿ. ಮುಂದಿನ ದಿನಗಳಲ್ಲಿ ಸಂಸ್ಥೆಯಲ್ಲಿ ಹೆಚ್ಚಿನ ತರಬೇತಿಗಳು ನಡೆಯುತ್ತವೆ. ಅವುಗಳ ಬಗೆ ನಿಮ್ಮ ಪ್ರೀತಿ ಪಾತ್ರರಲ್ಲಿ ವಿಷಯವನ್ನು ಹಂಚಿಕೊಳ್ಳಿ ಎಂದು ಹೇಳಿ ಶಿಬಿರಾರ್ಥಿಗಳಿಗೆ ಶುಭ ಹಾರೈಸಿದರು. 

    ಈ ಸಂದರ್ಭದಲ್ಲಿ ಬ್ಯೂಟಿ ಪಾರ್ಲರ್ ತರಬೇತಿಯ ಅತಿಥಿ ಉಪನ್ಯಾಸಕರು ರಾಜಲಕ್ಷ್ಮಿ ಹಾಗೂ ಶಿಬಿರಾರ್ಥಿಗಳು ಉಪಸ್ಥಿತರಿದ್ದರು. ಉಪನ್ಯಾಸಕಿ ಚೈತ್ರ. ಕೆ ಕಾರ್ಯಕ್ರಮವನ್ನು ನಿರೂಪಿಸಿ, ಹಿರಿಯ ಉಪನ್ಯಾಸಕರಾದ ಸಂತೋಷ್ ಶೆಟ್ಟಿ ಸ್ವಾಗತಿಸಿದರು. ಕಛೇರಿ ಸಹಾಯಕರಾದ ಶಾಂತಪ್ಪ ವಂದಿಸಿದರು.

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಬ್ರಹ್ಮಾವರ: ಮಟಪಾಡಿ ದಿ. ಶಿವರಾಮ ಶೆಟ್ಟಿ ಅವರ 10ನೇ ವರ್ಷದ ಪುಣ್ಯಸ್ಮರಣೆ

    04/02/2026

    ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಸಾಫ್ಟ್ ಸ್ಕಿಲ್ಸ್ ತರಬೇತಿ

    04/02/2026

    ತ್ರಾಸಿ: ವಾಕಿಂಗ್‌ ವೇಳೆ ವೃದ್ಧೆಯ ಕುತ್ತಿಗೆಯಿಂದ ಚಿನ್ನದ ಸರ ಎಳೆದುಕೊಂಡು ಪರಾರಿಯಾದ ಕಳ್ಳ

    04/02/2026
    Leave A Reply Cancel Reply

    seventeen + fifteen =

    Call us

    Click Here

    Call us

    Call us

    Call us
    Highest Viewed Recently
    • ಬ್ರಹ್ಮಾವರ: ಮಟಪಾಡಿ ದಿ. ಶಿವರಾಮ ಶೆಟ್ಟಿ ಅವರ 10ನೇ ವರ್ಷದ ಪುಣ್ಯಸ್ಮರಣೆ
    • ಜೀವನದಲ್ಲಿ ಉಚ್ಚ ಆದರ್ಶಗಳನ್ನು ಮತ್ತು ಉನ್ನತ ಗುರಿಯನ್ನಿಟ್ಟುಕೊಳ್ಳಿ: ಸ್ವಾಮಿ ಯುಗೇಶಾನಂದ
    • 70ನೇ ರಾಷ್ಟ್ರೀಯ ಜೂನಿಯರ್ ಬಾಲ್ ಬ್ಯಾಡ್ಮಿಂಟನ್: ಆಳ್ವಾಸ್ ಕಾಲೇಜಿನ ಬಾಲಕಿಯರು ಚಾಂಪಿಯನ್ಸ್
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಸಾಫ್ಟ್ ಸ್ಕಿಲ್ಸ್ ತರಬೇತಿ
    • ತ್ರಾಸಿ: ವಾಕಿಂಗ್‌ ವೇಳೆ ವೃದ್ಧೆಯ ಕುತ್ತಿಗೆಯಿಂದ ಚಿನ್ನದ ಸರ ಎಳೆದುಕೊಂಡು ಪರಾರಿಯಾದ ಕಳ್ಳ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.