ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಸರಕಾರಿ ಪದವಿ ಪೂರ್ವ ಕಾಲೇಜು ಹೆಬ್ರಿಯಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿಯ ಕನ್ನಡ ಕಂಠಪಾಠ ಸ್ಪರ್ಧೆಯಲ್ಲಿ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಯ 7ನೇ ತರಗತಿಯ ವಿದ್ಯಾರ್ಥಿನಿ ಷಷ್ಟಿ ಎ. ಭಟ್ ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ.
ಅವರಿಗೆ, ಶಾಲಾ ಆಡಳಿತ ಮಂಡಳಿ, ಮುಖ್ಯ ಶಿಕ್ಷಕರು, ಬೋಧಕ-ಬೋಧಕೇತರ ವರ್ಗದವರು ಅಭಿನಂದನೆ ಸಲ್ಲಿಸಿರುತ್ತಾರೆ.










