Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ರಾ.ಹೆ. 66ರಲ್ಲಿ ಹಾನಿಗೊಳಗಾದ ನೀರಿನ ಪೈಪ್‌ಲೈನ್ ದುರಸ್ಥಿ ಕಾರ್ಯವನ್ನು ಆದ್ಯತೆಯ ಮೇಲೆ ಕೈಗೊಳ್ಳಿ: ಸಂಸದ ಕೋಟ
    ಉಡುಪಿ ಜಿಲ್ಲೆ

    ರಾ.ಹೆ. 66ರಲ್ಲಿ ಹಾನಿಗೊಳಗಾದ ನೀರಿನ ಪೈಪ್‌ಲೈನ್ ದುರಸ್ಥಿ ಕಾರ್ಯವನ್ನು ಆದ್ಯತೆಯ ಮೇಲೆ ಕೈಗೊಳ್ಳಿ: ಸಂಸದ ಕೋಟ

    Updated:03/01/2026No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಉಡುಪಿ
    : ರಾಷ್ಟ್ರೀಯ ಹೆದ್ದಾರಿ ಸರ್ವೀಸ್ ರಸ್ತೆ ನಿರ್ಮಾಣ ಕಾಮಗಾರಿಯ ಹಿನ್ನೆಲೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಕುಡಿಯುವ ನೀರು ಸರಬರಾಜಿನ ಪೈಪ್‌ಲೈನ್ ಹಾನಿಗೊಳಗಾಗಿದ್ದು, ದುರಸ್ಥಿ ಹಾಗೂ ಮರುಅಳವಡಿಕೆ ಕಾರ್ಯವನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವತಿಯಿಂದ ಕೈಗೊಳ್ಳಬೇಕೆಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.

    Click Here

    Call us

    Click Here

    ಅವರು ಶುಕ್ರವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕುಂದಾಪುರ ವಿಧಾನಸಭಾ ಕ್ಷೇತ್ರದ ಗ್ರಾಮ ಪಂಚಾಯತ್‌ಗಳ ವ್ಯಾಪ್ತಿಯಲ್ಲಿನ ಕುಡಿಯುವ ನೀರಿನ ಪೈಪ್‌ಲೈನ್ ಅಳವಡಿಕೆಯಲ್ಲಿ ಆದ ಸಮಸ್ಯೆಯ ಬಗ್ಗೆ ಚರ್ಚಿಸುವ ಸಲುವಾಗಿ ಆಯೋಜಿಸಲಾದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

    ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವತಿಯಿಂದ ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಕಾಮಗಾರಿಗಳನ್ನು ಕುಂದಾಪುರ ತಾಲೂಕಿನ ಕೋಟೇಶ್ವರ, ಗೋಪಾಡಿ, ಕುಂಭಾಶಿ, ತೆಕ್ಕಟ್ಟೆ ಹಾಗೂ ಬ್ರಹ್ಮಾವರದ ಸಾಲಿಗ್ರಾಮ, ಕೋಟತಟ್ಟು, ಕೋಟ, ಮಣೂರು, ಪಾಂಡೇಶ್ವರ ಹಾಗೂ ಸಾಸ್ತಾನ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ವಿವಿಧ ಯೋಜನೆಯಡಿ ಕೈಗೊಂಡಿರುವ ಸಾರ್ವಜನಿಕ ಕುಡಿಯುವ ನೀರು ಸರಬರಾಜಿನ ಪೈಪ್‌ಲೈನ್‌ಗಳು ಹಾನಿಗೊಂಡು ಸಾರ್ವಜನಿಕರ ಕುಡಿಯುವ ನೀರಿಗೆ ತೊಂದರೆ ಉಂಟಾಗುತ್ತಿದೆ. ಇವುಗಳ ದುರಸ್ಥಿ ಕಾರ್ಯಗಳನ್ನು ಆದ್ಯತೆಯ ಮೇಲೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವತಿಯಿಂದ ಕೈಗೊಳ್ಳಬೇಕೆಂದರು.

    ಅಗಲೀಕರಣ ಕಾಮಗಾರಿಯಿಂದ ಮುಂಬರುವ ದಿನಗಳಲ್ಲಿ ಪೈಪ್‌ಲೈನ್ ಹಾನಿಗೊಳಗಾಗುವ ಸಾಧ್ಯತೆಗಳಿವೆ. ಅಲ್ಲದೇ ಪೈಪ್‌ಲೈನ್‌ಗಳು ರಸ್ತೆ ಕ್ಯಾರೇಜ್ ವೇ ಮಧ್ಯದಲ್ಲಿ ಬರುತ್ತಿರುವುದರಿಂದ ಪ್ರತ್ಯೇಕ ಪೈಪ್‌ಲೈನ್ ಅಳವಡಿಕೆ ಅವಶ್ಯಕತೆ ಇದೆ. ದುರಸ್ಥಿ ಹಾಗೂ ಪ್ರತ್ಯೇಕ ಪೈಪ್‌ಲೈನ್ ಅಳವಡಿಕೆಗೆ ಗ್ರಾಮ ಪಂಚಾಯತ್ ಗಳಲ್ಲಾಗಲಿ, ಗ್ರಾಮೀಣಾಭೀವೃದ್ಧಿ ಇಲಾಖೆಯಿಂದ ಅನುದಾನದ ಲಭ್ಯತೆ ಇಲ್ಲದೇ ಇರುವುದರಿಂದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ದುರಸ್ಥಿ ಸೇರಿದಂತೆ ಮತ್ತಿತರ ಕಾರ್ಯಗಳನ್ನು ಕೈಗೊಳ್ಳಬೇಕಿದೆ. ಹಾಲಿ ರಸ್ತೆ ಮಧ್ಯ ಭಾಗದಲ್ಲಿರುವ ಪೈಪ್‌ಲೈನ್‌ಗಳ ಬದಲಿಯಾಗಿ ಹೊಸದಾಗಿ ಪೈಪ್‌ಲೈನ್ ಕಾಮಗಾರಿಗಳನ್ನು ಸರ್ವೀಸ್ ರಸ್ತೆಯಲ್ಲಿ ಬಾಕಿ ಉಳಿದಿರುವ 2.5 ಮೀಟರ್ ಜಾಗದಲ್ಲಿ ಅಳವಡಿಸುವುದು ಸೂಕ್ತ ಎಂದರು.

    ಪ್ರಸ್ತುತ ದುರಸ್ಥಿ ಸೇರಿದಂತೆ ಹೊಸ ಪೈಪ್‌ಲೈನ್‌ಗಳನ್ನು ಅಳವಡಿಸಲು ತಯಾರಿಸಿರುವ ಅಂದಾಜು ಪಟ್ಟಿಯ ವೆಚ್ಚ ಹೆಚ್ಚಿದ್ದು, ಈ ಬಗ್ಗೆ ಮರು ಪರಿಶೀಲಿಸಿ, ಸರಿಯಾಗಿ ಅಂದಾಜು ವೆಚ್ಚ ತಯಾರಿಸಿ ನೀಡಬೇಕೆಂದು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಅಭಿಯಂತರುಗಳಿಗೆ ತಿಳಿಸಿದ ಅವರು, ಇಂದು ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಕೈಗೊಂಡ ನಿರ್ಣಯದ ನಡವಳಿಯನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವಿಭಾಗೀಯ ಕಚೇರಿಗೆ ಕಳುಹಿಸುವಂತೆ ಸೂಚನೆ ನೀಡಿದರು.

    Click here

    Click here

    Click here

    Call us

    Call us

    ಸಭೆಯಲ್ಲಿ ಶಾಸಕರುಗಳಾದ ಯಶ್‌ಪಾಲ್ ಎ ಸುವರ್ಣ ಹಾಗೂ ಎ. ಕಿರಣ್ ಕುಮಾರ್ ಕೊಡ್ಗಿ, ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ, ಸಹಾಯಕ ಕಮೀಷನರ್ ರಶ್ಮಿ, ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಯೋಜನೆಯ ಅಭಿಯಂತರರುಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಜಿಲ್ಲಾ ಕಾರ್ಯನಿರತ ಪತ್ರಕರ್ತ ಸಂಘ: ಕಾರ್ಯಕಾರಿ ಸಮಿತಿ ಸದಸ್ಯರಾಗಿ ಉದಯ ಪಡಿಯಾರ್‌, ಅಜಿತ್ ಆರಾಡಿ ಆಯ್ಕೆ

    03/02/2026

    ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಅರ್ಜಿ ಸಲ್ಲಿಕೆ: ಅವಧಿ ವಿಸ್ತರಣೆ

    03/02/2026

    ಜಿಲ್ಲೆಯಲ್ಲಿ ಸಿ.ಎನ್.ಜಿ ಗ್ಯಾಸ್ ವಿತರಣಾ ಸಮಸ್ಯೆಗಳನ್ನು ಕೂಡಲೇ ಪರಿಹರಿಸಿ: ಸ್ವರೂಪ ಟಿ.ಕೆ

    31/01/2026
    Leave A Reply Cancel Reply

    12 − nine =

    Call us

    Click Here

    Call us

    Call us

    Call us
    Highest Viewed Recently
    • ಬ್ರಹ್ಮಾವರ: ಮಟಪಾಡಿ ದಿ. ಶಿವರಾಮ ಶೆಟ್ಟಿ ಅವರ 10ನೇ ವರ್ಷದ ಪುಣ್ಯಸ್ಮರಣೆ
    • ಜೀವನದಲ್ಲಿ ಉಚ್ಚ ಆದರ್ಶಗಳನ್ನು ಮತ್ತು ಉನ್ನತ ಗುರಿಯನ್ನಿಟ್ಟುಕೊಳ್ಳಿ: ಸ್ವಾಮಿ ಯುಗೇಶಾನಂದ
    • 70ನೇ ರಾಷ್ಟ್ರೀಯ ಜೂನಿಯರ್ ಬಾಲ್ ಬ್ಯಾಡ್ಮಿಂಟನ್: ಆಳ್ವಾಸ್ ಕಾಲೇಜಿನ ಬಾಲಕಿಯರು ಚಾಂಪಿಯನ್ಸ್
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಸಾಫ್ಟ್ ಸ್ಕಿಲ್ಸ್ ತರಬೇತಿ
    • ತ್ರಾಸಿ: ವಾಕಿಂಗ್‌ ವೇಳೆ ವೃದ್ಧೆಯ ಕುತ್ತಿಗೆಯಿಂದ ಚಿನ್ನದ ಸರ ಎಳೆದುಕೊಂಡು ಪರಾರಿಯಾದ ಕಳ್ಳ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.