ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಪ್ರಸಕ್ತ ಸಾಲಿನಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಹಾಗೂ ನಮ್ಮ ಕ್ಲಿನಿಕ್‌ಗಳಲ್ಲಿ ಖಾಲಿ ಇರುವ ಶುಶ್ರೂಷಕ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಪರಿಶಿಷ್ಟ ಜಾತಿಗಳಿಗೆ ಸಂಬಂಧಿಸಿದ ಒಳಮೀಸಲಾತಿಯ ವರ್ಗೀಕರಣದಿಂದ ತಡಹಿಡಿಯಲಾಗಿದ್ದ ನೇಮಕಾತಿ ಪ್ರಕ್ರಿಯೆಗೆ ಪರಿಷ್ಕೃತ ರೋಸ್ಟರ್ ಗಳನ್ನು ಅಳವಡಿಸಿ ಮರು ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಜನವರಿ 16 ಕೊನೆಯ ದಿನವಾಗಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ udupi.nic.in ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಆರೋಗ್ಯ ಇಲಾಖೆಯ ಕಚೇರಿ ಪ್ರಕಟಣೆ ತಿಳಿಸಿದೆ.










