ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಪ್ರಸಕ್ತ ಸಾಲಿನಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಬಿ.ಎಡ್‌ನಲ್ಲಿ ವ್ಯಾಸಾಂಗ ಮಾಡುತ್ತಿರುವ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ವಿಶೇಷ ಪ್ರೋತ್ಸಾಹ ಧನ ನೀಡಲು ಸೇವಾಸಿಂಧು ಪೋರ್ಟಲ್ https://sevasindhu.karnataka.gov.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು 2026ರ ಜನವರಿ 15ರ ವರೆಗೆ ವಿಸ್ತರಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ: 8277799990 ಅಥವಾ ಉಡುಪಿ ದೂ.ಸಂಖ್ಯೆ: 0820-2574596, ಕುಂದಾಪುರ ದೂ.ಸಂಖ್ಯೆ: 08254-23070 ಹಾಗೂ ಕಾರ್ಕಳ ದೂ.ಸಂಖ್ಯೆ: 08258-231101 ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿಗಳ ಕಛೇರಿ ಪ್ರಕಟಣೆ ತಿಳಿಸಿದೆ.










