Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಶ್ರೀರಾಮ ಸೌಹಾರ್ದ ಕ್ರೆಡಿಟ್ ಕೋ-ಆಪರೇಟೀವ್ ಸೊಸೈಟಿ: ವತಿಯಿಂದ ಸೌಹಾರ್ದ ಸಹಕಾರಿ ದಿನಾಚರಣೆ, ಗ್ರಾಹಕರ ಸಭೆ
    ಊರ್ಮನೆ ಸಮಾಚಾರ

    ಶ್ರೀರಾಮ ಸೌಹಾರ್ದ ಕ್ರೆಡಿಟ್ ಕೋ-ಆಪರೇಟೀವ್ ಸೊಸೈಟಿ: ವತಿಯಿಂದ ಸೌಹಾರ್ದ ಸಹಕಾರಿ ದಿನಾಚರಣೆ, ಗ್ರಾಹಕರ ಸಭೆ

    No Comments
    Facebook Twitter Pinterest LinkedIn WhatsApp Reddit Tumblr Email
    Oplus_16908288
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಬೈಂದೂರು:
    ಸಹಕಾರಿ ಸಂಘಗಳು ಗ್ರಾಮ ಕೇಂದ್ರಿಕೃತವಾಗಿದ್ದು, ಗ್ರಾಮದ ಜನರು ಇದನ್ನು ಸಮರ್ಪಕವಾಗಿ ಸದುಪಯೋಗಿಸಿಕೊಂಡಾಗ ಗ್ರಾಮದ ಸರ್ವಾಂಗೀಣ ಅಭಿವೃದ್ಧಿ ಸಾಧ್ಯ. ಇಂತಹ ಸಹಕಾರಿ ರಂಗವನ್ನು ಬಲಪಡಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ. ಇಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿಗಳು ಹಾಗೂ ಆಡಳಿತ ಮಂಡಳಿ ಜ್ಞಾನ, ಕೌಶಲ್ಯ ಹಾಗೂ ಮಾನವೀಯತೆ ದೃಷ್ಟಿಕೋನವನ್ನು ಅಳವಡಿಸಿಕೊಂಡಾಗ ಯಶಸ್ಸನ್ನು ಕಾಣಲು ಸಾಧ್ಯವಾಗುತ್ತದೆ ಎಂದ ಡಾ. ಶಿವರಾಮ ಕಾರಂತ್ ಟ್ರಸ್ಟ್ ಅಧ್ಯಕ್ಷ ಡಾ. ಗಣಮಾಥ ಎಕ್ಕಾರ್ ಹೇಳಿದರು.

    Click Here

    Call us

    Click Here

    ಅವರು ಶ್ರೀರಾಮ ಸೌಹಾರ್ದ ಕ್ರೆಡಿಟ್ ಕೋ-ಆಪರೇಟೀವ್ ಸೊಸೈಟಿಯ ಗೋಳಿಹೊಳೆ ಶಾಖೆಯಲ್ಲಿ ಗುರುವಾರ ನಡೆದ ಸೌಹಾರ್ದ ಸಹಕಾರಿ ದಿನಾಚರಣೆ ಹಾಗೂ ಗ್ರಾಹಕರ ಸಭೆ ಉದ್ಘಾಟಿಸಿ ಮಾತನಾಡಿದರು. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸಹಕಾರಿ ರಂಗಕ್ಕೆ ಹೆಚ್ಚಿನ ಉತ್ತೇಜನ ನೀಡುತ್ತಿರುವ ಹಿನ್ನೆಲೆಯಲ್ಲಿ ಇಂದು ಸಹಕಾರಿ ಸಂಘಗಳಿಗೆ ಹೆಚ್ಚಿನ ಮಹತ್ವವಿದೆ. ಪ್ರಜಾಪ್ರಭುತ್ವದ ನಾಲ್ಕು ತತ್ವಗಳಾದ ಸಮಾನತೆ, ಸ್ವಾತಂತ್ರ್ಯ, ಭಾತೃತ್ವ ಹಾಗೂ ಸಾಮಾಜಿಕ ನ್ಯಾಯ ಎನ್ನುವುದನ್ನು ಕೇವಲ ಸಹಕಾರಿ ರಂಗದಲ್ಲಿ ಮಾತ್ರ ಕಾಣಲು ಸಾಧ್ಯವಿದೆ ಎಂದರು.

    ಸಂಘದ ಅಧ್ಯಕ್ಷ ಎಸ್. ರಾಜು ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ಕೊಲ್ಲೂರು ದೇವಳದ ವ್ಯವಸ್ಥಾಪನಾ ಸಮಿತಿ ಸದಸ್ಯ, ಯುವ ಉದ್ಯಮಿ ಮಹಾಲಿಂಗ ನಾಯ್ಕ್ ಜೋಗಿಜೆಡ್ಡು ಅವರನ್ನು ಸನ್ಮಾನಿಸಲಾಯಿತು. ವಿವಿಧ ಕ್ಷೇತ್ರದ ಸಾಧಕರನ್ನು ಗೌರವಿಸಲಾಯಿತು. ಸಂಘದ ವ್ಯಾಪ್ತಿಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪರಿಕರಗಳನ್ನು ವಿತರಿಸಲಾಯಿತು.

    ಜಿಲ್ಲಾ ಸೌಹಾರ್ದ ಸಹಕಾರಿ ಒಕ್ಕೂಟದ ಅಧ್ಯಕ್ಷ ಅಂಪಾರು ಜಗನ್ನಾಥ ಶೆಟ್ಟಿ, ಗ್ರಾಪಂ ಅಧ್ಯಕ್ಷ ವಸಂತ್ ಹೆಗ್ಡೆ, ಕೊಲ್ಲೂರು ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೆ. ಬಾಬು ಶೆಟ್ಟಿ, ನಿವೃತ್ತ ಮುಖ್ಯಶಿಕ್ಷಕ ರತ್ನಾಕರ ಶೆಟ್ಟಿ, ತಾಪಂ ಮಾಜಿ ಸದಸ್ಯ ಚುಚ್ಚಿ ನಾರಾಯಣ ಶೆಟ್ಟಿ, ಗೌತಮ್ ಶೆಟ್ಟಿ, ಸಂಘದ ಉಪಾಧ್ಯಕ್ಷ ಎಂ. ವಿನಾಯಕ ರಾವ್, ನಿರ್ದೇಶಕರಾದ ಸೀತಾರಾಮ ಮಡಿವಾಳ, ಅಣ್ಣಪ್ಪ ಪೂಜಾರಿ, ರಾಮಕೃಷ್ಣ ಖಾರ್ವಿ, ಸಿಇಒ ಕಿಟ್ಟಣ್ಣ ರೈ ಇದ್ದರು. ಸುಬ್ರಹ್ಮಣ್ಯ ಪಡುಕೋಣೆ ಕಾರ್ಯಕ್ರಮ ನಿರ್ವಹಿಸಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕೋಟ: ಮಹಿಳಾ ಮಂಡಲದ 61ನೇ ವಾರ್ಷಿಕೋತ್ಸವ

    14/01/2026

    ಫುಲ್ ಮ್ಯಾರಥಾನ್ 42 ಕಿಲೋಮೀಟರ್ ಓಟ: ಎ.ಆರ್.ಎಸ್.ಐ ಶಂಕರ್ ಅವರಿಗೆ ಕಂಚು

    13/01/2026

    ಪೆರಂಪಳ್ಳಿ ಸುಬ್ರಮಣ್ಯ ಹೆಬ್ಬಾರ್ ಅವರಿಗೆ ʼವಿಶ್ವೇಶ ಸೇವಾ ಪ್ರಶಸ್ತಿʼ

    13/01/2026
    Leave A Reply Cancel Reply

    1 × 2 =

    Call us

    Click Here

    Call us

    Call us

    Call us
    Highest Viewed Recently
    • ಕೋಟ: ಮಹಿಳಾ ಮಂಡಲದ 61ನೇ ವಾರ್ಷಿಕೋತ್ಸವ
    • ಕಚ್ಚಾತೈಲ ಸಂಗ್ರಹಣಾ ಘಟಕದ ಕಾಮಗಾರಿ ಕೈಗೊಳ್ಳುವಾಗ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ವಹಿಸಿ: ಜಿಲ್ಲಾಧಿಕಾರಿ
    • ಅಂತಾರಾಷ್ಟ್ರೀಯ ಮಟ್ಟದಲ್ಲಿ ಎಂಐಟಿಕೆ ವಿದ್ಯಾರ್ಥಿನಿ ಗೀತಾಂಜಲಿ ಸಾಧನೆ
    • ಫುಲ್ ಮ್ಯಾರಥಾನ್ 42 ಕಿಲೋಮೀಟರ್ ಓಟ: ಎ.ಆರ್.ಎಸ್.ಐ ಶಂಕರ್ ಅವರಿಗೆ ಕಂಚು
    • ಪೆರಂಪಳ್ಳಿ ಸುಬ್ರಮಣ್ಯ ಹೆಬ್ಬಾರ್ ಅವರಿಗೆ ʼವಿಶ್ವೇಶ ಸೇವಾ ಪ್ರಶಸ್ತಿʼ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.