Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಡಿಪ್ಲೊಮಾ ಇನ್ ಕೋ-ಆಪರೇಟಿವ್‌ ಮ್ಯಾನೇಜ್‌ಮೆಂಟ್‌ ತರಬೇತಿ: ಅರ್ಜಿ ಆಹ್ವಾನ
    ಉಡುಪಿ ಜಿಲ್ಲೆ

    ಡಿಪ್ಲೊಮಾ ಇನ್ ಕೋ-ಆಪರೇಟಿವ್‌ ಮ್ಯಾನೇಜ್‌ಮೆಂಟ್‌ ತರಬೇತಿ: ಅರ್ಜಿ ಆಹ್ವಾನ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಉಡುಪಿ:
    ಕರ್ನಾಟಕ ಇನ್‌ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೆಜ್‌ಮೆಂಟ್, ಮೂಡುಬಿದಿರೆ ಇವರ ವತಿಯಿಂದ ಜನವರಿ ಮಾಹೆಯಿಂದ ಪ್ರಾರಂಭವಾಗುವ 6 ತಿಂಗಳ ಅವಧಿಯ ರೆಗ್ಯೂಲರ್ ಮತ್ತು ದೂರಶಿಕ್ಷಣ ಡಿಪ್ಲೊಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‌ಮೆಂಟ್ ಕೋರ್ಸ್ ತರಬೇತಿಗೆ ಉಡುಪಿ ಜಿಲ್ಲೆಯ ಸಾಮಾನ್ಯ ಹಾಗೂ ಪ.ಜಾತಿ/ಪ.ಪಂಗಡದ ಅಭ್ಯರ್ಥಿಗಳಿಂದ ಮತ್ತು ಎಲ್ಲಾ ವಿವಿಧ ಸಹಕಾರ ಸಂಘ/ಬ್ಯಾಂಕ್‌ಗಳ ಉದ್ಯೋಗಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

    Click Here

    Call us

    Click Here

    ಅರ್ಜಿ ಸಲ್ಲಿಸಲು ಜನವರಿ 15 ಕೊನೆಯ ದಿನ. ಕನಿಷ್ಠ ವಿದ್ಯಾರ್ಹತೆ ಎಸ್.ಎಸ್.ಎಲ್.ಸಿಯಾಗಿದ್ದು, ಪ್ರವೇಶ ಪಡೆದ ಪ.ಜಾತಿ ಹಾಗೂ ಪ.ಪಂಗಡದ ಅಭ್ಯರ್ಥಿಗಳಿಗೆ ಮಾಸಿಕ ರೂ.600 ಹಾಗೂ ಇತರೆ ಎಲ್ಲಾ ಅಭ್ಯರ್ಥಿಗಳಿಗೆ ರೂ.500 ಶಿಷ್ಯ ವೇತನ ನೀಡಲಾಗುವುದು.

    ಸಹಕಾರ, ಸಹಕಾರ ಪತ್ತು ಮತ್ತು ಬ್ಯಾಂಕಿಂಗ್, ಸಹಕಾರ ಸಂಘಗಳ ನಿರ್ವಹಣೆ, ಸಹಕಾರ ಸಂಘಗಳ ಕಾಯಿದೆ ಅಂಶಗಳು, ಸಹಕಾರ ಲೆಕ್ಕಪತ್ರಗಳು ಮತ್ತು ಲೆಕ್ಕಪರಿಶೋಧನೆ ಹಾಗೂ ಕಂಪ್ಯೂಟರ್ ಅಪರೇಷನ್ ಬಗ್ಗೆ ಪಠ್ಯಕ್ರಮವಿದ್ದು, ಸಹಕಾರ ಡಿಪ್ಲೊಮಾ ಕೋರ್ಸ್ ಪಡೆದ ಅಭ್ಯರ್ಥಿಗಳಿಗೆ ಡಿಸಿಸಿ ಬ್ಯಾಂಕ್, ಅಪೆಕ್ಸ್ ಬ್ಯಾಂಕ್, ಜಿಲ್ಲಾ ಸಹಕಾರಿ ಹಾಲು ಒಕ್ಕೂಟ ಮತ್ತು ಇತರೆ ಎಲ್ಲಾ ರೀತಿಯ ಸಹಕಾರ ಸಂಘ/ಸಂಸ್ಥೆಗಳು ಮತ್ತು ಬ್ಯಾಂಕ್‌ಗಳ ಉದ್ಯೋಗ ಅವಕಾಶಗಳಲ್ಲಿನ ನೇಮಕಾತಿಗೆ ಸಹಕಾರ ಕಾಯಿದೆ ಮತ್ತು ನಿಯಮಗಳಿಗೆ ಅನುಸಾರವಾಗಿ ಆದ್ಯತೆ ಕಲ್ಪಿಸಲಾಗುವುದು. ಜೊತೆಗೆ ಈ ಪಠ್ಯಕ್ರಮವು ಕೆ.ಎ.ಎಸ್ ಪರೀಕ್ಷೆಯ ಸಹಕಾರ ಮತ್ತು ಗ್ರಾಮೀಣ ಅಭಿವೃದ್ಧಿ ವಿಷಯ ಮತ್ತು ಸಹಕಾರ ಇಲಾಖೆಯ ಕೋ-ಆಪರೇಟಿವ್ ಇನ್‌ಸ್ಪೆಕ್ಟರ್ ಹುದ್ದೆ ಹಾಗೂ ಎಲ್ಲಾ ಸಹಕಾರ ಸಂಘ/ಸಂಸ್ಥೆಗಳ ಹುದ್ದೆಗಳ ನೇಮಕಾತಿ ಪರೀಕ್ಷೆಗೆ ಪೂರಕವಾಗಿದೆ.

    ಸಹಕಾರ ಕಾಯ್ದೆ ನಿಯಮಗಳ ಅನ್ವಯ ಸಹಕಾರ ಸಂಘಗಳ ಅಧಿಕಾರಿ/ ಸಿಬ್ಬಂದಿಗಳಿಗೆ ಡಿ.ಸಿ.ಎಂ. ಕೋರ್ಸ್ ಕಡ್ಡಾಯವಾಗಿದ್ದು, ಸಹಕಾರ ಸಂಘ/ಸಂಸ್ಥೆಗಳಲ್ಲಿನ ಖಾಯಂ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ದೂರ ಶಿಕ್ಷಣ ಕೊರ್ಸ್ಗೆ ಪ್ರವೇಶ ನೀಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂ:08258-236561,  ಮೊ:7022429440, 8971361396 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    21/05/2026

    ಜೂ.1 ರಿಂದ 61 ದಿನಗಳ ಕಾಲ ಯಾಂತ್ರೀಕೃತ ಮೀನುಗಾರಿಕೆ ನಿಷೇಧ

    21/05/2026

    ಉಡುಪಿ: ಮಹಾತ್ಮ ಗಾಂಧಿ ಮೆಮೋರಿಯಲ್‌ ಸಂಧ್ಯಾ ಕಾಲೇಜಿನಲ್ಲಿ ವಿದ್ಯಾರ್ಥಿ ಕ್ಷೇಮಪಾಲನಾ ಮಂಡಳಿ ದಿನಾಚರಣೆ

    20/05/2026
    Leave A Reply Cancel Reply

    10 + 7 =

    Call us

    Click Here

    Call us

    Call us

    Call us
    Highest Viewed Recently
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.