Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಭವಿಷ್ಯದ ಎಲ್ಲಾ ಕಾರ್ಯಕ್ರಮಗಳಿಗೆ ಸಂಜೀವಿನಿ ಮಾದರಿಯಾಗಬೇಕು: ಗುರುರಾಜ್ ಶೆಟ್ಟಿ ಗಂಟಿಹೊಳೆ
    ಊರ್ಮನೆ ಸಮಾಚಾರ

    ಭವಿಷ್ಯದ ಎಲ್ಲಾ ಕಾರ್ಯಕ್ರಮಗಳಿಗೆ ಸಂಜೀವಿನಿ ಮಾದರಿಯಾಗಬೇಕು: ಗುರುರಾಜ್ ಶೆಟ್ಟಿ ಗಂಟಿಹೊಳೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಉಡುಪಿ ಜಿಲ್ಲಾ ಪಂಚಾಯತ್ ನ ವಿಎಸ್ ಆಚಾರ್ಯ ಸಭಾಂಗಣದಲ್ಲಿ ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರುರಾಜ್ ಶೆಟ್ಟಿ ಗಂಟಿಹೊಳೆ ಅವರ ಅಧ್ಯಕ್ಷತೆಯಲ್ಲಿ ಸಂಜೀವಿನಿ ಯೋಜನೆಯ ಪ್ರಗತಿ ಸಭೆ ನೆಡೆಯಿತು.

    Click Here

    Call us

    Click Here

    ನಂತರ ಅವರು ಮಾತನಾಡಿ, ಗ್ರಾಮೀಣ ಮಹಿಳೆಯರ ಸಾಮಾಜಿಕ ಸಬಲೀಕರಣಕ್ಕಾಗಿ ಸಂಜೀವಿನಿ ಸ್ವ ಸಹಾಯ ಗುಂಪುಗಳನ್ನು ರಚಿಸಲಾಗಿದೆ. ಈಗಾಗಲೇ ಮಹಿಳೆಯರು ಸಮುದಾಯ ಬಂಡವಾಳ ನಿಧಿ, ಬ್ಯಾಂಕ್ ಸಾಲ, ಇಲಾಖೆಗಳ ಸಾಲ ಸೌಲಭ್ಯ ಪಡೆದು ಸ್ವ ಉದ್ಯೋಗ ಚಟುವಟಿಕೆ ನೆಡೆಸುತ್ತಿದ್ದಾರೆ. ಈ ಮಹಿಳೆಯರನ್ನು ಮಾದರಿಯಾಗಿಸಿ ಪ್ರತಿ ಗ್ರಾಮದ ಸಂಜೀವಿನಿ ಮಹಿಳೆಯರು ಸ್ಥಳೀಯ ಸಂಪನ್ಮೂಲಗಳನ್ನು ಬಳಸಿಕೊಂಡು ಉದ್ಯಮಿಗಳನ್ನಾಗಿಸಲು ಸಿಬ್ಬಂದಿಗಳು ಕ್ರಮ ಕೈಗೊಳ್ಳಬೇಕು. ಕೃಷಿ, ಕೃಷಿಯೇತರ, ಪ್ರವಾಸೋದ್ಯಮ ಹಾಗೂ ಎಲ್ಲಾ ಕ್ಷೇತ್ರಗಳಲ್ಲೂ ಮಹಿಳೆಯರು ಪ್ರತಿನಿಧಿಸಬೇಕು. ಇಂದು ಗ್ರಾಮೀಣ ಜನರು ನಿರುದ್ಯೋಗದ ಸಮಸ್ಯೆಯಿಂದ ಬೇರೆ ಕಡೆಗೆ ವಲಸೆ ಹೋಗುತ್ತಿದ್ದಾರೆ. ಸ್ಥಳೀಯವಾಗಿ ಮಹಿಳೆಯರಿಗೆ ಉದ್ಯೋಗ ಕಲ್ಪಿಸುವ ವ್ಯವಸ್ಥೆ ನಿರ್ಮಾಣವಾಗಬೇಕು ಎಂದು ತಿಳಿಸಿದರು.

    ಪ್ರತಿ ಗ್ರಾಮ ಪಂಚಾಯತ್ ನಲ್ಲಿ ಗ್ರಾಮೋತ್ಸವ ನಡೆಸಲಾಗುತ್ತಿದ್ದು ಸಂಜೀವಿನಿ ಸ್ವ ಸಹಾಯ ಗುಂಪಿನ ಮಹಿಳೆಯರು ಆಸಕ್ತಿಯಿಂದ  ಭಾಗವಹಿಸಿ ಇಲ್ಲಿ ದೊರಕುವ ಪ್ರಯೋಜನ ಪಡೆಯಬೇಕು. ಬೈಂದೂರು ಉತ್ಸವದಲ್ಲಿ ಸಂಜೀವಿನಿ ಉತ್ಪನ್ನಗಳಿಗೆ ಸೂಕ್ತ ಮಾರುಕಟ್ಟೆ ವ್ಯವಸ್ಥೆ ಕಲ್ಪಿಸುವ ಉದ್ದೇಶದಿಂದ ನೂರು ಮಾರಾಟ ಮಳಿಗೆ ಸ್ಥಾಪಿಸುವ ಉರಿಯನ್ನು ಹೊಂದಲಾಗಿದೆ. ಈ ಎಲ್ಲಾ ಕಾರ್ಯಕ್ರಮಗಳಲ್ಲಿ ಮಹಿಳೆಯರು ಆಸಕ್ತಿ ಇಂದ ಭಾಗವಹಿಸುವುದರ ಮೂಲಕ ಭವಿಷ್ಯದಲ್ಲಿ ಎಲ್ಲಾ ಕಾರ್ಯಕ್ರಮಗಳನ್ನು ಸಂಜೀವಿನಿ ಸ್ವ ಸಹಾಯ ಗುಂಪಿನ ಮಹಿಳೆಯರೇ ನಡೆಸಿಕೊಂಡು ಹೋಗುವಷ್ಟು ಸಬಲೀಕರಣರಾಗಬೇಕೆಂದು ತಿಳಿಸಿದರು.

    ಸಭೆಯಲ್ಲಿ ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪ್ರತೀಕ್ ಭಾಯಲ್, ಉಪ ಕಾರ್ಯದರ್ಶಿ ಶ್ಯಾಮ್ ಎಸ್ ಕದ್ರೊಳ್ಳಿ, ಯೋಜನಾ ನಿರ್ದೇಶಕರಾದ ವಿಜಯ್ ಕುಮಾರ್, ನಿವೃತ್ತ ರಾಜ್ಯ ಕಾರ್ಯಕ್ರಮ ವ್ಯವಸ್ಥಾಪಕರದ ಅಲಿ, ಲೀಡ್ ಬ್ಯಾಂಕ್ ವ್ಯವಸ್ಥಾಪಕರಾದ ಹರೀಶ್,ಕೃಷಿ ಇಲಾಖೆಯ ಸಹಾಯಕ ನಿರ್ದೇಶಕರಾದ ಸತೀಶ್, ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕರಾದ ಹೇಮಂತ್ ಕುಮಾರ್, ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕರಾದ ನವ್ಯ, ಜಿಲ್ಲಾ ವ್ಯವಸ್ಥಾಪಕರಾದ  ಅವಿನಾಶ್, ಸೌಮ್ಯ, ಜಿಲ್ಲಾ, ತಾಲೂಕು ಅಭಿಯಾನ ನಿರ್ವಹಣಾ ಘಟಕದ ಸಿಬ್ಬಂದಿ, ಬೈಂದೂರು ಉತ್ಸವ ಸಮಿತಿಯ ಪದಾಧಿಕಾರಿಗಳು ಹಾಗೂ ಗ್ರಾಮ ಪಂಚಾಯತ್ ಮಟ್ಟದ ಸಂಜೀವಿನಿ ಒಕ್ಕೂಟ ಅಧ್ಯಕ್ಷರು, ಮುಖ್ಯ ಪುಸ್ತಕ ಬರಹಗಾರರು, ಕೃಷಿ ಸಖಿ, ಪಶು ಸಖಿ ಉಪಸ್ಥಿತರಿದ್ದರು.

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಬ್ರಹ್ಮಾವರ: ಮಟಪಾಡಿ ದಿ. ಶಿವರಾಮ ಶೆಟ್ಟಿ ಅವರ 10ನೇ ವರ್ಷದ ಪುಣ್ಯಸ್ಮರಣೆ

    04/02/2026

    ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಸಾಫ್ಟ್ ಸ್ಕಿಲ್ಸ್ ತರಬೇತಿ

    04/02/2026

    ತ್ರಾಸಿ: ವಾಕಿಂಗ್‌ ವೇಳೆ ವೃದ್ಧೆಯ ಕುತ್ತಿಗೆಯಿಂದ ಚಿನ್ನದ ಸರ ಎಳೆದುಕೊಂಡು ಪರಾರಿಯಾದ ಕಳ್ಳ

    04/02/2026
    Leave A Reply Cancel Reply

    one × 5 =

    Call us

    Click Here

    Call us

    Call us

    Call us
    Highest Viewed Recently
    • ಬ್ರಹ್ಮಾವರ: ಮಟಪಾಡಿ ದಿ. ಶಿವರಾಮ ಶೆಟ್ಟಿ ಅವರ 10ನೇ ವರ್ಷದ ಪುಣ್ಯಸ್ಮರಣೆ
    • ಜೀವನದಲ್ಲಿ ಉಚ್ಚ ಆದರ್ಶಗಳನ್ನು ಮತ್ತು ಉನ್ನತ ಗುರಿಯನ್ನಿಟ್ಟುಕೊಳ್ಳಿ: ಸ್ವಾಮಿ ಯುಗೇಶಾನಂದ
    • 70ನೇ ರಾಷ್ಟ್ರೀಯ ಜೂನಿಯರ್ ಬಾಲ್ ಬ್ಯಾಡ್ಮಿಂಟನ್: ಆಳ್ವಾಸ್ ಕಾಲೇಜಿನ ಬಾಲಕಿಯರು ಚಾಂಪಿಯನ್ಸ್
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಸಾಫ್ಟ್ ಸ್ಕಿಲ್ಸ್ ತರಬೇತಿ
    • ತ್ರಾಸಿ: ವಾಕಿಂಗ್‌ ವೇಳೆ ವೃದ್ಧೆಯ ಕುತ್ತಿಗೆಯಿಂದ ಚಿನ್ನದ ಸರ ಎಳೆದುಕೊಂಡು ಪರಾರಿಯಾದ ಕಳ್ಳ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.