ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ತಾಲೂಕಿನ ಕುಂಭಾಸಿ ಆನೆಗುಡ್ಡೆ ಶ್ರೀವಿನಾಯಕ ದೇವಸ್ಥಾನದಲ್ಲಿ ಜ.6 ಮಂಗಳವಾರದಂದು ಅಂಗಾರಕ ಸಂಕಷ್ಟಹರ ಚತುರ್ಥಿ ಪ್ರಯುಕ್ತ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ.
ಈ ಪ್ರಯುಕ್ತ ದೇವಳದಲ್ಲಿ ಲೋಕಕಲ್ಯಾಣಾರ್ಥ ಸಹಸ್ರ ನಾರಿಕೇಳ ಗಣಯಾಗ ನಡೆಯಲಿದ್ದು ಮಹಾ ಅನ್ನಸಂತರ್ಪಣೆ ಹಾಗೂ ರಾತ್ರಿ 8ಕ್ಕೆ ರಜತ ರಥೋತ್ಸವ ನಡೆಯಲಿದೆ. ಅಂಗಾರಕ ಸಂಕಷ್ಟಹರ ಚತುರ್ಥಿ ಪ್ರಯುಕ್ತ ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಸಂಜೆ 4.30ರಿಂದ 6ರತನಕ ಕುಂಭಾಸಿ ಶ್ರೀವಿಶ್ವೇಶ್ವರ ಮಹಿಳಾ ಭಜನಾ ಮಂಡಳಿ ಆನೆಗುಡ್ಡೆ ಕುಂಭಾಸಿ ಅವರಿಂದ ಭಜನಾ ಕಾರ್ಯಕ್ರಮ, ಉಡುಪಿ ನಾಗರಾಜ ಶೇಟ್ ಹಾಗೂ ಬಳಗದವರಿಂದ ಭಕ್ತಿ ಸಂಗೀತ ಕಾರ್ಯಕ್ರಮ ಜರುಗಲಿದೆ ಎಂದು ದೇವಳದ ಆಡಳಿತ ಅನುವಂಶಿಕ ಧರ್ಮದರ್ಶಿ ಕೆ. ಶ್ರೀರಮಣ ಉಪಧ್ಯಾಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.










