ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಜಿಲ್ಲೆಯೊಳಗೆ ಗಣಿ ಮತ್ತು ಖನಿಜಗಳನ್ನು ಸಾಗಿಸುವ ಎಲ್ಲಾ 6 ಚಕ್ರ ಮತ್ತು ಅದಕ್ಕಿಂತ ಹೆಚ್ಚಿನ ವಾಹನಗಳು 60 ಕಿ.ಮೀ ಮಿತಿಯೊಂದಿಗೆ ಸ್ಪೀಡ್ ಗವರ್ನರ್‌ಗಳನ್ನು ಕಡ್ಡಾಯವಾಗಿ ಅಳವಡಿಸಲು ರಸ್ತೆ ಸುರಕ್ಷತಾ ಪ್ರಾಧಿಕಾರದ ನಿರ್ಧರಿಸಿದೆ.
ಈ ಹಿಂದೆ ನಡೆದ ರಸ್ತೆ ಸುರಕ್ಷತಾ ಪ್ರಾಧಿಕಾರದ ಸಭೆಯಲ್ಲಿ ಟಿಪ್ಪರ್ ವಾಹನಗಳನ್ನು ವೇಗವಾಗಿ ಓಡಿಸುವುದಕ್ಕೆ ಕಡಿವಾಣ ಹಾಕುವುದು ಒಂದು ಕಾರ್ಯಸೂಚಿಯಾಗಿತ್ತು. ಅದರಂತೆ ಗಣಿ ಮತ್ತು ಖನಿಜಗಳನ್ನು ಸಾಗಿಸುವ ಎಲ್ಲಾ 6 ಚಕ್ರ ಮತ್ತು ಅದಕ್ಕಿಂತ ಹೆಚ್ಚಿನ ವಾಹನಗಳು 60 ಕಿ.ಮೀ ಮಿತಿಯೊಂದಿಗೆ ಸ್ಪೀಡ್ ಗವರ್ನರ್‌ಗಳನ್ನು ಕಡ್ಡಾಯವಾಗಿ ಅಳವಡಿಸುವ ನಿರ್ಧಾರವನ್ನು ಅಂತಿಮಗೊಳಿಸಲಾಗಿದೆ. ಈ ಬಗ್ಗೆ ಎಲ್ಲಾ ಲಾರಿ ಚಾಲಕರಿಗೆ 10 ದಿನಗಳ ಕಾಲಾವಕಾಶ ನೀಡಲಾಗುವುದು. ಕುಂದಾಪ್ರ ಡಾಟ್ ಕಾಂ.
ಮುಂದಿನ ದಿನಗಳಲ್ಲಿ ಮಾಹಿತಿ ಹಂಚುವ ಉದ್ದೇಶದಿಂದ ಎಲ್ಲಾ ಲಾರಿ ಚಾಲಕರಿಗೆ ಕರಪತ್ರಗಳನ್ನು ವಿತರಿಸಲಾಗುವುದು ಎಂದು ಉಡುಪಿ ಎಸ್ಪಿ ಹರಿರಾಂ ಶಂಕರ್ ಅವರು ತಿಳಿಸಿದ್ದಾರೆ.
ಬಸ್‌ಗಳಿಗೆ ಬಾಗಿಲು ಕಡ್ಡಾಯ:
ಜನವರಿ 20ರ ಒಳಗಡ ಬಸ್‌ಗಳಲ್ಲಿ ಬಾಗಿಲುಗಳನ್ನು ಅಳವಡಿಸುವುದು ಕಡ್ಡಾಯ. ಆ ದಿನದ ನಂತರ, ಬಾಗಿಲುಗಳನ್ನು ಅಳವಡಿಸದಿದ್ದರೆ, ಬಸ್‌ಗಳಿಗೆ ದಂಡ ವಿಧಿಸಲಾಗುತ್ತದೆ/ ವಶಪಡಿಸಿಕೊಳ್ಳಲಾಗುತ್ತದೆ ಎಂದು ತಿಳಿಸಲಾಗಿದೆ.
ಸರಣಿ ಟಿಪ್ಪರ್ ದುರಂತ ಬೆನ್ನಲ್ಲೇ ಸಾರ್ವಜನಿಕರಿಂದ ಜಾಲತಾಣಗಳಲ್ಲಿ ತೀವ್ರ ಅಸಮಾಧಾನ ವ್ಯಕ್ತವಾಗಿತ್ತು. ಈ ನಡುವೆ ಜಿಲ್ಲಾಡಳಿತ ಲಾರಿಗಳ ವೇಗಕ್ಕೆ ಕಡಿವಾಣ ಹಾಕುವ ನಿರ್ಣಯ ಕೈಗೊಂಡಿದೆ. ಸದದಲ್ಲೇ ಆದೇಶ ಹೊರಬೀಳಲಿದೆ.















