ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಉಡುಪಿ ನಗರಸಭೆಯ 2025-26ನೇ ಸಾಲಿನ ಎಸ್.ಎಫ್.ಸಿ ಮುಕ್ತ ನಿಧಿಯ ಶೇ.7.25ರ ಇತರೆ ಹಿಂದುಳಿದ ವರ್ಗಗಳ ಕಲ್ಯಾಣ ಕಾರ್ಯಕ್ರಮದಡಿ ಸಣ್ಣ ಉದ್ದಿಮೆಗೆ ಸಹಾಯಧನ ನೀಡಲು ಆಸಕ್ತ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು ನಿಗದಿತ ಅರ್ಜಿಯೊಂದಿಗೆ ಪೂರಕ ದಾಖಲಾತಿಗಳನ್ನು ಜನವರಿ 16ರ ಒಳಗಾಗಿ ನಗರಸಭೆ ಕಚೇರಿಗೆ ಸಲ್ಲಿಸುವಂತೆ ಉಡುಪಿ ನಗರಸಭೆ ಪೌರಾಯುಕ್ತರ ಕಚೇರಿ ಪ್ರಕಟಣೆ ತಿಳಿಸಿದೆ.










