ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇಂದು ಸರಕಾರಿ ಶಾಲೆಗಳಲ್ಲಿ ಮಕ್ಕಳ ಸಂಖ್ಯೆಯನ್ನು ಗಣನೀಯವಾಗಿ ಹೆಚ್ಚಿಸಿಕೊಳ್ಳುವ ಪ್ರಯತ್ನ ಆಗಬೇಕು. ಪ್ರತೀ ಗ್ರಾಮ ಪಂಚಾಯತ್ ವ್ಯಾಪ್ತಿಗಳಲ್ಲಿ ಮಕ್ಕಳಿಲ್ಲದೆ ಅನೇಕ ಸರಕಾರಿ ಶಾಲೆಗಳನ್ನು ಇಂದು ಮುಚ್ಚುವಂತಹ ಪರಿಸ್ಥಿತಿ ಬಂದೊದಗುತ್ತಿದೆ. ಸರಕಾರ ಇಂದು ಎಲ್ಲಾ ಸೌಲಭ್ಯಗಳನ್ನು ನೀಡುತ್ತಿದೆ ಆದರೂ ಸಹ ಮಕ್ಕಳ ಸಂಖ್ಯೆಯನ್ನು ಹೆಚ್ಚಿಸಿಕೊಳ್ಳುವುದು ಕಷ್ಟವಾಗುತ್ತಿದೆ ಎಂದು ಕೊಲ್ಲೂರು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೆ. ಬಾಬು ಶೆಟ್ಟಿ ಹೇಳಿದರು
ಅವರು ಇಲ್ಲಿನ ಕರ್ಕುಂಜೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವ 2025-26 ಹೊಂಗಿರಣ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಇಂದು ಸರಕಾರಿ ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಕಡಿಮೆಯಾಗಲು ಕಾರಣ ಗ್ರಾಮಸ್ಥರು. ತಮ್ಮ ಜವಾಬ್ದಾರಿಯನ್ನು ಸರಿಯಾಗಿ ನಿಭಾಯಿಸುತ್ತಿಲ್ಲ. ಇಂದು ಆಂಗ್ಲ ಮಾಧ್ಯಮ ಶಾಲೆಗಳಿಗೆ ನಾವೇ ಹಣವನ್ನು ಕೊಟ್ಟು, ಶಿಕ್ಷಕರಿಗೆ ಸಂಬಳವನ್ನು ಕೊಟ್ಟು ಶಾಲೆಗಳನ್ನು ನಡೆಸುವಂತೆ ಮಾಡಿ ನಮ್ಮ ಮಕ್ಕಳನ್ನು ಅವರ ಶಾಲೆಗೆ ಕಳುಸುತ್ತೇವೆ, ಆದರೆ ಇಂದು ಸರಕಾರಿ ಶಾಲೆಗಳಿಗೆ ಕೌನ್ಸಿಲಿಂಗ್ ಮೂಲಕ ಬಹಳಷ್ಟು ಮೆರಿಟ್‌ನ ಶಿಕ್ಷಕರು ಬರುತ್ತಿದ್ದಾರೆ. ಆದರೆ ನಾವು ಅದರ ಉಪಯೋಗವನ್ನು ಪಡೆದುಕೊಳ್ಳುತ್ತಿಲ್ಲ, ಮುಂದಿನ ದಿನಗಳಲ್ಲಿ ಗ್ರಾಮಸ್ಥರೆಲ್ಲರೂ ಪ್ರಯತ್ನವನ್ನು ಮಾಡಿ ಸರಕಾರಿ ಶಾಲೆಗಳನ್ನು ಉಳಿಸಿಕೊಳ್ಳಬೇಕು ಎಂದರು.
ಕರ್ಕುಂಜೆ ಗ್ರಾಮ ಪಂಚಾಯತ್ ಅಧ್ಯಕ್ಷ ಬಿಜ್ರಿ ರಾಜೀವ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಸೌಕೂರು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯ ಅಶೋಕ ಕುಮಾರ್ ಶೆಟ್ಟಿ ಜಾಡ್ಕಟ್ಟು, ಹಿರಿಯರಾದ ನಾರಾಯಣ ನಾಯಕ್ ನೇರಳಕಟ್ಟೆ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಅಶೋಕ ಶೆಟ್ಟಿ ಹಂದಕುಂದ ವಕೀಲರು, ಕರ್ಕುಂಜೆ ಸಹಕಾರಿ ವ್ಯವಸಾಯಿಕ ಸಂಘ ಕರ್ಕುಂಜೆ ಇದರ ಅಧ್ಯಕ್ಷ ಸುಧಾಕರ ಶೆಟ್ಟಿ ಬಾಂಡ್ಯ, ಕರ್ಕುಂಜೆ ಗ್ರಾಮ ಪಂಚಾಯತ್ ಸದಸ್ಯ ನಾಗರಾಜ ಶೆಟ್ಟಿ ಜೆಡ್ಡಿನಕೊಡ್ಲು, ಕರ್ಕುಂಜೆ ಗ್ರಾಮ ಪಂಚಾಯತ್ ಸದಸ್ಯ ಸಂತೋಷ ಪೂಜಾರಿ, ಕರ್ಕುಂಜೆ ಗ್ರಾಮ ಪಂಚಾಯತ್ ಸದಸ್ಯ ಸತೀಶ ಪೂಜಾರಿ, ಉಧ್ಯಮಿ ಜಯಸೂರ್ಯ ಪೂಜಾರಿ, ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಉಡುಪಿ ಜಿಲ್ಲಾ ಗೌರವ ಅಧ್ಯಕ್ಷ ವಿಶ್ವನಾಥ ಪೂಜಾರಿ, ಶಾಲಾ ಎಸ್‌ಡಿಎಮ್‌ಸಿ ಅಧ್ಯಕ್ಷ ಚಂದ್ರಶೇಖರ ಆಚಾರ್ಯ, ವಿದ್ಯಾರ್ಥಿ ನಾಯಕಿ ಶ್ರೇಯಾ ವಿ. ಪೂಜಾರಿ ಉಪಸ್ಥಿತರಿದ್ದರು.
ಪರ್ತಕರ್ತ ಎ. ಭಾಸ್ಕರ ಶೆಟ್ಟಿ ಸ್ವಸ್ತಿ ವಾಚನ ಮಾಡಿ, ಮುಖ್ಯ ಶಿಕ್ಷಕ ಚಂದ್ರ ಶೆಟ್ಟಿ ವರದಿ ವಾಚನ ಮಾಡಿ, ಸಹ ಶಿಕ್ಷಕಿ ಮಮತಾ ಶೆಟ್ಟಿ ಕಾರ್ಯಕ್ರಮ ನಿರೂಪಿಸಿ, ಶಾಲಾ ಮುಖ್ಯ ಶಿಕ್ಷಕ ನಾರಾಯಣ ಕೋಠಾರಿ ಪ್ರಾಸ್ತಾವಿಕ ಮಾತುಗಳನ್ನಾಡಿ, ಧನ್ಯವಾದ ಮಾಡಿದರು.
















