ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ ಇನ್‌ಸ್ಟಿಟ್ಯೂಟ್ ಆಫ್ ಕಾಸ್ಟ್ ಅಕೌಂಟಿಂಗ್ ಆಫ್ ಇಂಡಿಯಾ ನಡೆಸುವ ಸಿಎಂಎ ಫೌಂಡೇಶನ್, ಡಿಸೆಂಬರ್ 2025ರಲ್ಲಿ ನಡೆದ ಪರೀಕ್ಷೆಯಲ್ಲಿ ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ಉತ್ಕೃಷ್ಟ ಸಾಧನೆಗೈದಿದ್ದಾರೆ.
ಪ್ರಗತಿ, ದೀಕ್ಷಿತಾ, ಐಶ್ವರ್ಯ, ತಿಲಕ್ ಹಾಗೂ ಶಬ್ದಿಕಾ ಪೂಜಾರಿ ಉತ್ತೀರ್ಣರಾಗಿದ್ದಾರೆ. ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು ಹಾಗೂ ವಿ-ರೀಚ್ ಸಂಸ್ಥೆಯ ಪಠ್ಯ ಪ್ರವಚನ, ಮಧ್ಯಂತರ ಮಾದರಿ ಪರೀಕ್ಷೆ ಹಾಗೂ ನುರಿತ ತರಬೇತುದಾರರಿಂದ ತರಬೇತಿ, ಸಲಹೆ ಮತ್ತು ಮಾರ್ಗದರ್ಶನ ಪಡೆದು ವಿದ್ಯಾರ್ಥಿಗಳು ಈ ಸಾಧನೆಗೈದಿದ್ದಾರೆ.
ಸಾಧಕ ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ-ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.










