Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಗಣರಾಜ್ಯೋತ್ಸವ ಕಾರ್ಯಕ್ರಮವನ್ನು ವಿಜೃಂಭಣೆಯಿಂದ ಆಯೋಜಿಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳಿ: ಜಿಲ್ಲಾಧಿಕಾರಿ
    ಉಡುಪಿ ಜಿಲ್ಲೆ

    ಗಣರಾಜ್ಯೋತ್ಸವ ಕಾರ್ಯಕ್ರಮವನ್ನು ವಿಜೃಂಭಣೆಯಿಂದ ಆಯೋಜಿಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳಿ: ಜಿಲ್ಲಾಧಿಕಾರಿ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಉಡುಪಿ:
    ಪ್ರತೀ ವರ್ಷದಂತೆ ಈ ಬಾರಿಯೂ ಜನವರಿ 26 ರಂದು ನಡೆಯಲಿರುವ ಭಾರತದ ಗಣರಾಜ್ಯೋತ್ಸವ ಕಾರ್ಯಕ್ರಮವನ್ನು ವಿಜೃಂಭಣೆಯಿಂದ ಅರ್ಥಪೂರ್ಣವಾಗಿ ಆಯೋಜಿಸಲು ಸಕಲ ಸಿದ್ಧತೆ ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಸೂಚನೆ ನೀಡಿದರು.

    Click Here

    Call us

    Click Here

    ಅವರು ಸೋಮವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಗಣರಾಜ್ಯೋತ್ಸವ ಆಚರಣೆಯ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲಾ ಮಟ್ಟದ ಗಣರಾಜ್ಯೋತ್ಸವ ದಿನಾಚರಣೆ ಕಾರ್ಯಕ್ರಮವು ಜನವರಿ 26ರಂದು ನಗರದ ಅಜ್ಜರಕಾಡು ಮಹಾತ್ಮ ಗಾಂಧೀ ಜಿಲ್ಲಾ ಕ್ರೀಡಾಂಗಣದಲ್ಲಿ ಬೆಳಗ್ಗೆ 8.30ಕ್ಕೆ ಆರಂಭವಾಗಲಿದ್ದು, 8.30 ರಿಂದ 8.50 ರ ವರೆಗೆ ದೇಶ ಭಕ್ತಿಗೀತೆ ಕಾರ್ಯಕ್ರಮ, ನಂತರ ಹುತಾತ್ಮ ಯೋಧರಿಗೆ ಗೌರವ ಸಮರ್ಪಣೆ ನಡೆಯಲಿದೆ. ಬೆ. 9 ಕ್ಕೆ ಜಿಲ್ಲಾ ಉಸ್ತುವಾರಿ ಸಚಿವರು ಧ್ವಜಾರೋಹಣ ನೆರವೇರಿಸಿ, ಗೌರವ ರಕ್ಷೆ ಸ್ವೀಕಾರ ಮಾಡಿ ಗಣರಾಜ್ಯೋತ್ಸವ ಸಂದೇಶ ನೀಡಲಿದ್ದಾರೆ. ನಂತರ ಶಾಲಾ – ಕಾಲೇಜು ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ ಎಂದರು.

    ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಪೊಲೀಸ್, ಅರಣ್ಯ, ಗೃಹ ರಕ್ಷಕ, ಎನ್.ಸಿ.ಸಿ. ಸ್ಕೌಟ್ ಮತ್ತು ಗೈಡ್ಸ್, ಸೇವಾದಳ ಸೇರಿದಂತೆ ವಿವಿಧ ಶಾಲಾ ವಿದ್ಯಾರ್ಥಿಗಳಿಂದ ಪಥಸಂಚಲನ ನಡೆಯಲಿದ್ದು, ಈ ಬಗ್ಗೆ ಮೂರು ದಿನಗಳ ಮುಂಚಿತವಾಗಿ ಪೂರ್ವ ತಯಾರಿ ಮಾಡಿಕೊಳ್ಳಬೇಕು. ವೇದಿಕೆಯ ಸಿದ್ಧತೆ, ಸ್ವಾತಂತ್ರ‍್ಯ ಹೋರಾಟಗಾರರು, ಗಣ್ಯರು, ಅಧಿಕಾರಿಗಳು, ಮಾಧ್ಯಮದವರು ಆಸೀನರಾಗಲು ಪ್ರತ್ಯೇಕ ಆಸನ ವ್ಯವಸ್ಥೆ, ಧ್ವನಿವರ್ಧಕ, ಕುಡಿಯುವ ನೀರಿನ ವ್ಯವಸ್ಥೆ, ಸಿಹಿ ವಿತರಣೆ, ಆಂಬುಲೆನ್ಸ್ ನಿಯೋಜನೆ ಸೇರಿದಂತೆ ಮತ್ತಿತರ ಮೂಲಸೌಕರ್ಯವನ್ನು ಒದಗಿಸಲು ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ಅಗತ್ಯ ಕ್ರಮ ವಹಿಸಬೇಕು. ಶಿಷ್ಟಾಚಾರದ ನಿಯಮಗಳಂತೆ ಗಣರಾಜ್ಯೋತ್ಸವ ಸಮಾರಂಭದ ಆಹ್ವಾನ ಪತ್ರಿಕೆ ಮುದ್ರಿಸಿ, ಮುದ್ರಿತ ಆಹ್ವಾನ ಪತ್ರಿಕೆಗಳನ್ನು ಜನಪ್ರತಿನಿಧಿಗಳಿಗೆ, ಗಣ್ಯರಿಗೆ, ಸ್ವಾತಂತ್ರ್ಯ ಹೋರಾಟಗಾರರು ಹಾಗೂ ಅವರ ಕುಟುಂಬದವರಿಗೆ ವಿತರಿಸಿ, ಕಾರ್ಯಕ್ರಮಕ್ಕೆ ಆಹ್ವಾನಿಸಲು ಅಗತ್ಯ ಕ್ರಮವಹಿಸಬೇಕು ಎಂದರು,

    ಗಣರಾಜ್ಯೋತ್ಸವ ಆಚರಣೆಗೆ ಸಂಬಂಧಪಟ್ಟಂತೆ ಸ್ವಾಗತ, ನಿರೂಪಣೆ, ಶಿಷ್ಟಾಚಾರ ಹಾಗೂ ವೇದಿಕೆ ಸಮಿತಿ, ಪೆರೇಡ್ ಸಮಿತಿ, ಸಾಂಸ್ಕೃತಿಕ ಕಾರ್ಯಕ್ರಮಗಳ ಸಮಿತಿ ಸೇರಿದಂತೆ ವಿವಿಧ ಸಮಿತಿಗಳನ್ನು ರಚಿಸಲಾಗಿದ್ದು, ಆಯಾ ಸಮಿತಿಯಲ್ಲಿರುವ ಅಧಿಕಾರಿಗಳು ತಮಗೆ ವಹಿಸಿದ ಕಾರ್ಯಗಳನ್ನು ಉತ್ತಮವಾಗಿ ನಿರ್ವಹಿಸಬೇಕು ಎಂದು ತಿಳಿಸಿದರು.

    ಭಾರತದ ಸಂವಿಧಾನ ಆಚರಣೆಯ ಪ್ರತೀಕವಾಗಿರುವ ಭಾರತದ ಗಣರಾಜ್ಯೋತ್ಸವ ದಿನಾಚರಣೆಯ ಜಿಲ್ಲಾ ಮಟ್ಟದ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಲು ವಿವಿಧ ಇಲಾಖೆಗಳು ಸಮನ್ವಯತೆಯಿಂದ ಉತ್ತಮ ರೀತಿಯಲ್ಲಿ ಕಾರ್ಯನಿರ್ವಹಿಸಿ ಗಣರಾಜ್ಯೋತ್ಸವವನ್ನು ಆಚರಿಸಬೇಕು. ಇಲಾಖೆಯ ಅಧಿಕಾರಿಗಳಿಗೆ ವಹಿಸಿರುವ ಜವಾಬ್ದಾರಿಯನ್ನು ಅಚ್ಚುಕಟ್ಟುನಿಟ್ಟಾಗಿ ಪಾಲಿಸಿ, ಕಾರ್ಯಕ್ರಮದಲ್ಲಿ ಯಾವುದೇ ಲೋಪವಾಗದಂತೆ ಎಚ್ಚರ ವಹಿಸಬೇಕು ಎಂದರು.

    Click here

    Click here

    Click here

    Click Here

    Call us

    Call us

    ಕಾರ್ಯಕ್ರಮದಲ್ಲಿ ಎಲ್ಲ ಅಧಿಕಾರಿಗಳು, ನಗರದ ಎಲ್ಲಾ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು, ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿ ಹಾಗೂ ಸಿಬ್ಬಂದಿಗಳು ತಪ್ಪದೇ ಭಾಗವಹಿಸಬೇಕು ಎಂದ ಅವರು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಬೇಕು ಎಂದರು.

    ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸುಧಾಕರ್ ನಾಯಕ್, ನಗರಸಭೆ ಪೌರಾಯುಕ್ತ ಮಹಾಂತೇಶ ಹಂಗರಗಿ, ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಜೂ.1 ರಿಂದ 61 ದಿನಗಳ ಕಾಲ ಯಾಂತ್ರೀಕೃತ ಮೀನುಗಾರಿಕೆ ನಿಷೇಧ

    21/05/2026

    ಉಡುಪಿ: ಮಹಾತ್ಮ ಗಾಂಧಿ ಮೆಮೋರಿಯಲ್‌ ಸಂಧ್ಯಾ ಕಾಲೇಜಿನಲ್ಲಿ ವಿದ್ಯಾರ್ಥಿ ಕ್ಷೇಮಪಾಲನಾ ಮಂಡಳಿ ದಿನಾಚರಣೆ

    20/05/2026

    ಕೆಎಂಡಿಸಿ ಸಾಲ: ಒಟಿಎಸ್ ಮೂಲಕ ಬಡ್ಡಿ ಮನ್ನಾ

    20/05/2026
    Leave A Reply Cancel Reply

    17 − 11 =

    Call us

    Click Here

    Call us

    Call us

    Call us
    Highest Viewed Recently
    • ಜೂ.1 ರಿಂದ 61 ದಿನಗಳ ಕಾಲ ಯಾಂತ್ರೀಕೃತ ಮೀನುಗಾರಿಕೆ ನಿಷೇಧ
    • ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ
    • ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ
    • ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ
    • ಆಳ್ವಾಸ್‌ನ ‘ಲಿಪಿ’ ಮುದ್ರಣಾಲಯ ಲೋಕಾರ್ಪಣೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.