Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಹೊಸ ಮೆರುಗಿನೊಂದಿಗೆ ಉಡುಪಿ ರೈಲು ನಿಲ್ದಾಣ ಪ್ರಯಾಣಿಕರಿಗೆ ಲಭ್ಯ: ಸಂಸದ ಕೋಟ
    ಉಡುಪಿ ಜಿಲ್ಲೆ

    ಹೊಸ ಮೆರುಗಿನೊಂದಿಗೆ ಉಡುಪಿ ರೈಲು ನಿಲ್ದಾಣ ಪ್ರಯಾಣಿಕರಿಗೆ ಲಭ್ಯ: ಸಂಸದ ಕೋಟ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಉಡುಪಿ
    : ಉಡುಪಿ ರೈಲು ನಿಲ್ದಾಣದ ಪ್ರಯಾಣಿಕರ ಬಹು ದಿನಗಳ ಬೇಡಿಕೆ ಈಡೇರಿದೆ. ಸುಮಾರು 2.40 ಕೋಟಿ ರೂ ವೆಚ್ಚದಲ್ಲಿ ನಿರ್ಮಿಸಿರುವ ಪ್ರಯಾಣಿಕರ ಸೌಲಭ್ಯಗಳು ಜಿಲ್ಲಾಡಳಿತದ ಸಹಕಾರದೊಂದಿಗೆ ಲೋಕಾರ್ಪಣೆಗೊಂಡಿದೆ. ಅಮೃತ ಭಾರತ ರೈಲು ನಿಲ್ದಾಣ ಯೋಜನೆಯಡಿ ಉಡುಪಿ ರೈಲ್ವೆ ನಿಲ್ದಾಣಕ್ಕೆ ಹೊಸ ಕಾಯಕಲ್ಪ ನೀಡಿ ಹೊಸ ಮೆರುಗಿನೊಂದಿಗೆ ಕರಾವಳಿ ಭಾಗದ ಜನರಿಗೆ ಲಭ್ಯವಾಗಲಿದೆ ಎಂದು ಉಡುಪಿ- ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

    Click Here

    Call us

    Click Here

    ಅವರು ಉಡುಪಿ ರೈಲು ನಿಲ್ದಾಣ ಪರಿಸರದಲ್ಲಿ ಕೊಂಕಣ ರೈಲ್ವೆ ಕಾರ್ಪೊರೇಷನ್ ಲಿ. ನಿರ್ಮಿಸಿದ ಪ್ರಯಾಣಿಕರ ಸೌಲಭ್ಯಗಳ ಉದ್ಘಾಟನೆ ನೆರವೇರಿಸಿ ಮಾತನಾಡಿದರು. ಕರಾವಳಿ ಜಿಲ್ಲೆಗಳ ಎಲ್ಲ ರೈಲು ನಿಲ್ದಾಣಗಳ ಮೇಲ್ದರ್ಜೆಗಾಗಿ 100 ಕೋಟಿ ರೂ ಗಳ ಕಾಮಗಾರಿಗೆ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅನುಮೋದನೆ ನೀಡಿದ್ದಾರೆ. ಮುಂದಿನ ದಿನಗಳಲ್ಲಿ ಪ್ರಥಮ ಹಂತದ ಕಾಮಗಾರಿಗಳಲ್ಲಿ ಪ್ಲಾಟ್ ಫಾರ್ಮ್ 2 ಅನ್ನು 2.6 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುವುದು. ಹಿರಿಯ ನಾಗರಿಕರ ಅನುಕೂಲಕ್ಕಾಗಿ 3 ಲಿಫ್ಟ್ಗಳನ್ನು ಅಳವಡಿಸಲಾಗುವುದು. ಬಾರಕೂರು-ಮುಲ್ಕಿ ರೈಲ್ವೆ ಪ್ಲಾಟ್ ಫಾರ್ಮ್ಗಳನ್ನು 4.28 ಕೋಟಿ ವೆಚ್ಚದಲ್ಲಿ ಅಭಿವೃದ್ಧಿ ಪಡಿಸಲಾಗುವುದು. ಪ್ರಸಕ್ತ ಆರ್ಥಿಕ ಸಾಲಿನಲ್ಲಿ 105 ಕೋಟಿ ರೂ. ವೆಚ್ಚದಲ್ಲಿ 10 ರೈಲು ನಿಲ್ದಾಣಗಳ ಅಭಿವೃದ್ಧಿ ಕಾಮಗಾರಿಗೆ ಕೇಂದ್ರದಿಂದ ಅನುಮೋದನೆ ದೊರೆಯಲಿದೆ ಎಂದರು.

    ಮಂಗಳೂರಿನಿಂದ ಕಾರವಾರದವರೆಗೆ ದ್ವಿಪಥ ರೈಲ್ವೆ ಹಳಿಗಳು ಈಗಿನ ಅವಶ್ಯಕತೆಯಾಗಿದ್ದು, ಇದಕ್ಕಾಗಿ ವಿಸ್ತೃತ ಯೋಜನಾ ವರದಿಯನ್ನು ಕೇಂದ್ರ ಸಚಿವರಿಗೆ ಸಲ್ಲಿಸಲಾಗುವುದು. ಇದರ ಜೊತೆಗೆ ಮಡಗಾಂವ್ – ಮಂಗಳೂರು ವಂದೇ ಭಾರತ್ ರೈಲನ್ನು ಮುಂಬೈವರೆಗೆ ಮತ್ತು ಬೆಂಗಳೂರು-ಮಂಗಳೂರು ರೈಲನ್ನು ಕಾರವಾರದವರೆಗೆ ವಿಸ್ತರಣೆ ಮಾಡಿದಲ್ಲಿ ಕರಾವಳಿಯ ಜನರಿಗೆ ಬಹಳ ಅನುಕೂಲವಾಗಲಿದ್ದು, ಈ ನಿಟ್ಟಿನಲ್ಲಿ ಕೊಂಕಣ ರೈಲ್ವೆಯೊಂದಿಗೆ ಸಮಾಲೋಚಿಸಿ ಅಡಚಣೆಗಳನ್ನು ನಿವಾರಿಸುವ ಹಾಗೂ ಉಡುಪಿ ರೈಲು ನಿಲ್ದಾಣಕ್ಕೆ ಶ್ರೀಕೃಷ್ಣ ರೈಲು ನಿಲ್ದಾಣ ಎಂದು ಹೆಸರಿಸಲು ಪ್ರಯತ್ನ ನಡೆಸಲಾಗುವುದು ಎಂದರು.

    ಕಾರ್ಯಕ್ರಮದಲ್ಲಿ ಶಾಸಕರಾದ ಯಶ್‌ಪಾಲ್ ಎ. ಸುವರ್ಣ, ಗುರ್ಮೆ ಸುರೇಶ್ ಶೆಟ್ಟಿ, ಕೊಂಕಣ ರೈಲ್ವೆ ಮುಖ್ಯ ವ್ಯವಸ್ಥಾಪಕ ನಿರ್ದೇಶಕ ಸಂತೋಷ್ ಕುಮಾರ್ ಝಾ, ಕಾರವಾರ ವಲಯ ರೈಲ್ವೆ ವ್ಯವಸ್ಥಾಪಕಿ ಆಶಾ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಜೂ.1 ರಿಂದ 61 ದಿನಗಳ ಕಾಲ ಯಾಂತ್ರೀಕೃತ ಮೀನುಗಾರಿಕೆ ನಿಷೇಧ

    21/05/2026

    ಉಡುಪಿ: ಮಹಾತ್ಮ ಗಾಂಧಿ ಮೆಮೋರಿಯಲ್‌ ಸಂಧ್ಯಾ ಕಾಲೇಜಿನಲ್ಲಿ ವಿದ್ಯಾರ್ಥಿ ಕ್ಷೇಮಪಾಲನಾ ಮಂಡಳಿ ದಿನಾಚರಣೆ

    20/05/2026

    ಕೆಎಂಡಿಸಿ ಸಾಲ: ಒಟಿಎಸ್ ಮೂಲಕ ಬಡ್ಡಿ ಮನ್ನಾ

    20/05/2026
    Leave A Reply Cancel Reply

    17 − seven =

    Call us

    Click Here

    Call us

    Call us

    Call us
    Highest Viewed Recently
    • ಜೂ.1 ರಿಂದ 61 ದಿನಗಳ ಕಾಲ ಯಾಂತ್ರೀಕೃತ ಮೀನುಗಾರಿಕೆ ನಿಷೇಧ
    • ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ
    • ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ
    • ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ
    • ಆಳ್ವಾಸ್‌ನ ‘ಲಿಪಿ’ ಮುದ್ರಣಾಲಯ ಲೋಕಾರ್ಪಣೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.