Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕ್ರೀಡಾ ಪತ್ರಿಕೋದ್ಯಮದಲ್ಲಿ ನೈತಿಕತೆ ಮತ್ತು ಪ್ರಾಮಾಣಿಕತೆಯೇ ವರದಿಯ ಮೂಲ ತತ್ವವಾಗಬೇಕು: ಸ್ಟಾನ್ ರಾಯನ್
    alvas nudisiri

    ಕ್ರೀಡಾ ಪತ್ರಿಕೋದ್ಯಮದಲ್ಲಿ ನೈತಿಕತೆ ಮತ್ತು ಪ್ರಾಮಾಣಿಕತೆಯೇ ವರದಿಯ ಮೂಲ ತತ್ವವಾಗಬೇಕು: ಸ್ಟಾನ್ ರಾಯನ್

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಮೂಡುಬಿದಿರೆ
    : ಇಲ್ಲಿನ ಸ್ವರಾಜ್ಯ ಮೈದಾನದಲ್ಲಿ ನಡೆಯುತ್ತಿರುವ 85ನೇ ಅಖಿಲ ಭಾರತ ಅಂತರ ವಿಶ್ವವಿದ್ಯಾಲಯ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ಗೆ ಪ್ರಚಾರದ ನೆಲೆಯಲ್ಲಿ ಸಹಕರಿಸುತ್ತಿರುವ ಆಳ್ವಾಸ್ ಪತ್ರಿಕೋದ್ಯಮ ವಿದ್ಯಾರ್ಥಿಗಳನ್ನು ಉದ್ದೇಶಿಸಿ ನಿವೃತ್ತ ಹಿರಿಯ ಕ್ರೀಡಾ ಸಂಪಾದಕ ಸ್ಟಾನ್ ರಾಯನ್ ವಿಶೇಷ ಉಪನ್ಯಾಸ ನೀಡಿದರು.

    Click Here

    Call us

    Click Here

    ವಿಶ್ವದ ಅನೇಕ ದೇಶಗಳಿಗೆ ಪ್ರವಾಸ ಮಾಡಿ ಒಲಿಂಪಿಕ್ಸ್ ಸೇರಿದಂತೆ ಹಲವು ಅಂತರರಾಷ್ಟ್ರೀಯ ಕ್ರೀಡಾಕೂಟಗಳನ್ನು ವರದಿ ಮಾಡಿದ ಅನುಭವವನ್ನು ಹಂಚಿಕೊಂಡ ಅವರು, ಕ್ರೀಡಾ ಪತ್ರಿಕೋದ್ಯಮದಲ್ಲಿ ನೈತಿಕತೆ ಮತ್ತು ಪ್ರಾಮಾಣಿಕತೆಯೇ ವರದಿಯ ಮೂಲ ತತ್ವವಾಗಬೇಕು ಎಂದು ಹೇಳಿದರು.

    ಕ್ರೀಡಾ ವರದಿಗಾರರು ಸ್ಥಳೀಯ ಕ್ರೀಡಾ ಪಂದ್ಯಗಳಿಗೆ ಹಾಜರಾಗುವ ಮೂಲಕ ಕ್ರೀಡೆಯ ನೈಜ ಸ್ವರೂಪವನ್ನು ಅರ್ಥಮಾಡಿಕೊಳ್ಳಬೇಕು. ಸಮಯದ ಪರಿಧಿಯೊಳಗೆ ಕೆಲಸ ನಿರ್ವಹಿಸುವ ಕಲೆಯನ್ನು ಮೊದಲು ಅರಿಯಬೇಕು. ಸರಳ ಹಾಗೂ ಸ್ಪಷ್ಟ ಬರವಣಿಗೆಗೆ ಆದ್ಯತೆ ನೀಡಬೇಕು. ಕ್ರೀಡಾ ವರದಿಗಳು ಜನರಿಗಾಗಿಯೇ ಹೊರತು ಯಾರನ್ನೂ ಮೆಚ್ಚಿಸಲು ಅಲ್ಲ ಎಂದು ತಿಳಿಸಿದರು.

    ಭಾರತದಲ್ಲಿ ಡೋಪಿಂಗ್ ಪ್ರಕರಣಗಳು ಹೆಚ್ಚುತ್ತಿರುವುದು ಕಳವಳಕಾರಿ ಬೆಳವಣಿಗೆಯಾಗಿದೆ ಎಂದು ವಿಷಾದ ವ್ಯಕ್ತಪಡಿಸಿದ ಅವರು, ಪರಿಶುದ್ಧ ಕ್ರೀಡೆಯ ಪರವಾಗಿ ಪತ್ರಕರ್ತರು ಧ್ವನಿ ಎತ್ತಬೇಕು ಎಂದರು.

    ಡೋಪಿಂಗ್ ಪ್ರಕರಣ ಕುರಿತು ವಿದ್ಯಾರ್ಥಿನಿ ಸಾಕ್ಷಿ ಶೆಟ್ಟಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಸಾಮಾನ್ಯವಾಗಿ ಅಥ್ಲೆಟಿಕ್ಸ್ ದೀರ್ಘಾವಧಿಯ ಶ್ರಮ, ನಿರಂತರ ಅಭ್ಯಾಸ, ದೈಹಿಕ-ಮಾನಸಿಕ ಶಿಸ್ತು ಮತ್ತು ಸಹನಶೀಲತೆಯಿಂದ ಮಾತ್ರ ಫಲ ನೀಡುವ ಕ್ರೀಡೆ. ಒಬ್ಬ ಕ್ರೀಡಾಪಟು ವರ್ಷಗಳ ಕಾಲ ತರಬೇತಿ ಪಡೆದು, ಅನೇಕ ಸೋಲು-ಸವಾಲುಗಳನ್ನು ಎದುರಿಸಿ, ದೇಹವನ್ನು ಹಂತ ಹಂತವಾಗಿ ಬೆಳೆಸಿಕೊಂಡು ಉನ್ನತ ಮಟ್ಟ ತಲುಪುತ್ತಾನೆ. ಪ್ರದರ್ಶನದ ಸುಧಾರಣೆಯೂ ಸಹ ಕ್ರಮೇಣವಾಗಿರುತ್ತದೆ. ಸೆಕೆಂಡುಗಳ ಅಂತರದಲ್ಲಿ ವೇಗ ಹೆಚ್ಚುವುದು, ದೂರ ಎಸೆಯುವಲ್ಲಿ ಅಚ್ಚರಿಯಷ್ಟು ಬದಲಾವಣೆ ಕಾಣುವುದು ಅಥವಾ ಸ್ವಲ್ಪ ಅವಧಿಯಲ್ಲಿ ಅಸಾಧಾರಣ ಸಾಧನೆ ಮಾಡುವುದು ಸಹಜವಲ್ಲ. ಅಥ್ಲೆಟಿಕ್ಸ್ನಲ್ಲಿ ನಿಧಾನ, ಆದರೆ ನೈಸರ್ಗಿಕ ಪ್ರಗತಿಯೇ ವಿಶ್ವಾಸಾರ್ಹ. ಅತೀ ವೇಗದ ಸಾಧನೆಗಳು ಸಂಶಯಕ್ಕೆ ಕಾರಣವಾಗಬಲ್ಲದು ಎಂದು ತಿಳಿಸಿದರು.

    Click here

    Click here

    Click here

    Call us

    Call us

    ಈ ಸಂದರ್ಭದಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು 85ನೇ ಅಖಿಲ ಭಾರತ ಅಂತರ ವಿಶ್ವವಿದ್ಯಾಲಯ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನ್ನು ಅತ್ಯಂತ ಶಿಸ್ತುಬದ್ಧ ಹಾಗೂ ಮಾದರಿಯ ರೀತಿಯಲ್ಲಿ ಆಯೋಜಿಸಿರುವುದಕ್ಕೆ ಕಂಠದಿಂದ ಮೆಚ್ಚುಗೆ ವ್ಯಕ್ತಪಡಿಸಿದರು. ಕ್ರೀಡಾಪಟುಗಳು, ಅಧಿಕಾರಿಗಳು ಮತ್ತು ಅತಿಥಿಗಳಿಗೆ ಉಚಿತ ಊಟ ಹಾಗೂ ವಸತಿ ವ್ಯವಸ್ಥೆಯನ್ನು ಅತ್ಯುತ್ತಮವಾಗಿ ಒದಗಿಸಿರುವುದು ಅಪರೂಪದ ವ್ಯವಸ್ಥೆಯಾಗಿದೆ ಎಂದು ಪ್ರಶಂಸಿಸಿ, ಇಂತಹ ಆತಿಥ್ಯವೇ ರಾಷ್ಟ್ರಮಟ್ಟದ ಕ್ರೀಡಾಕೂಟಗಳ ಯಶಸ್ಸಿಗೆ ಕಾರಣವಾಗುತ್ತದೆ ಎಂದರು.  

    ನಂತರ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು. ಕಾರ್ಯಕ್ರಮದಲ್ಲಿ ವಿಭಾಗದ 25 ವಿದ್ಯಾರ್ಥಿಗಳು ಭಾಗವಹಿಸಿದ್ದರು. ಆಳ್ವಾಸ್ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ಪ್ರಸಾದ ಶೆಟ್ಟಿ, ಅನಿಮೇಶನ್ ವಿಭಾಗದ ಮುಖ್ಯಸ್ಥ ರವಿ ಮೂಡುಕೊಣಾಜೆ, ಉಪನ್ಯಾಸಕರಾದ ಅಕ್ಷಯ, ಹನ, ವಿನೀತ, ಆಕಾಶ ಇದ್ದರು.   

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಆಳ್ವಾಸ್‌ನಿಂದ ರಾಜ್ಯ ಮಟ್ಟದ ಮಹಿಳಾ ಮಧ್ಯವರ್ಜನ ಶಿಬಿರ

    04/07/2026

    ಜುಲೈ 6ರಂದು ಯಡಾಡಿ – ಮತ್ಯಾಡಿಯಲ್ಲಿ ಕುಂದಾಪ್ರ ಕನ್ನಡ ʼವಾಲ್ಬೆಲ್ಲʼ ಕಾರ್ಯಕ್ರಮ

    04/07/2026

    ಸಿಎ ಫೌಂಡೇಶನ್ ಫಲಿತಾಂಶ ಪ್ರಕಟ: ಕಾರ್ಕಳದ ಕ್ರಿಯೇಟಿವ್  ಕಾಲೇಜಿನ 14 ವಿದ್ಯಾರ್ಥಿಗಳು ತೇರ್ಗಡೆ

    04/07/2026
    Leave A Reply Cancel Reply

    eighteen − one =

    Call us

    Click Here

    Call us

    Call us

    Call us
    Highest Viewed Recently
    • ಉಡುಪಿ: ವಿದ್ಯಾರ್ಥಿವೇತನ ಸೌಲಭ್ಯಕ್ಕೆ ಅರ್ಜಿ ಆಹ್ವಾನ
    • ಕೋಟ ಶ್ರೀ ಅಮೃತೇಶ್ವರಿ ದೇವಸ್ಥಾನದಲ್ಲಿ ನಾಥಪಂಥದ ಪೀರ್‌ ಯೋಗಿ ಜಗದೀಶ್‌ನಾಥ್ ಜೀ ಭೇಟಿ
    • ಆಳ್ವಾಸ್‌ನಿಂದ ರಾಜ್ಯ ಮಟ್ಟದ ಮಹಿಳಾ ಮಧ್ಯವರ್ಜನ ಶಿಬಿರ
    • ನಿವೃತ್ತ ಮುಖ್ಯೋಪಾಧ್ಯಾಯಿನಿ ನಿರ್ಮಲಾ ಕೆ.ಎಸ್. ಅವರಿಗೆ ಅಭಿನಂದನೆ
    • ಕುಂದಾಪುರ: ಮೂಡ್ಲಕಟ್ಟೆ ನರ್ಸಿಂಗ್ ಕಾಲೇಜಿನಲ್ಲಿ ಕ್ಯಾಂಪಸ್ ಪ್ಲೇಸ್ಮೆಂಟ್

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.