Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕಿರಿಮಂಜೇಶ್ವರದಲ್ಲಿ ಗ್ರಾಮೋತ್ಸವ – ಬೈಂದೂರು ಉತ್ಸವದ ಪೂರ್ವಭಾವಿ ಸಂಭ್ರಮ
    ಊರ್ಮನೆ ಸಮಾಚಾರ

    ಕಿರಿಮಂಜೇಶ್ವರದಲ್ಲಿ ಗ್ರಾಮೋತ್ಸವ – ಬೈಂದೂರು ಉತ್ಸವದ ಪೂರ್ವಭಾವಿ ಸಂಭ್ರಮ

    Updated:19/01/2026No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಬೈಂದೂರು:
    ಶಾಸಕ ಗುರುರಾಜ್ ಗಂಟಿಹೊಳೆ ಕ್ಷೇತ್ರದ ಜನರಿಗೆ ಸರ್ಕಾರದ ವಿವಿಧ ಸೌಲಭ್ಯಗಳನ್ನು ತಲುಪಿಸಿ, ಇನ್ನಷ್ಟು ಯೋಜನೆಗಳ ಮಾಹಿತಿ ಒದಗಿಸುವ ನಿಟ್ಟಿನಲ್ಲಿ ವಿಶೇಷ ಅಭಿವೃದ್ಧಿಯ ಪರಿಕಲ್ಪನೆಯನ್ನು ಹೊಂದಿದ್ದು, ಪ್ರತೀ ಗ್ರಾಮಗಳಲ್ಲಿ ಉತ್ಸವದ ಮೂಲಕ ಗ್ರಾಮದ ಭೌತಿಕ ಬೆಳವಣಿಗೆ ಜತೆಗೆ ಸಂಜೀವಿನಿ ಸಂಘಗಳಿಗೆ ಸ್ವಾವಲಂಬನೆ ನೀಡಬೇಕು ಹಾಗೂ ಕ್ಷೇತ್ರದ ಪ್ರತಿಯೊಬ್ಬರೂ ಉತ್ಸವದ ಭಾಗವಾಗಬೇಕು ಎಂಬ ಉದ್ದೇಶದಿಂದ ಗ್ರಾಮೋತ್ಸವಗಳನ್ನು ಆಯೋಜಿಸಿದ್ದಾರೆ. ಈ ಅಭಿಯಾನ ದೇಶದಲ್ಲಿ ಪ್ರಥಮ ಎಂದು ಕಿರಿಮಂಜೇಶ್ವರ ಗ್ರಾಪಂ ಅಧ್ಯಕ್ಷ ಶೇಖರ ಖಾರ್ವಿ ಹೇಳಿದರು.

    Click Here

    Call us

    Click Here

    ಅವರು ಕಿರಿಮಂಜೇಶ್ವರ ಗ್ರಾಮ ಪಂಚಾಯತ್ ನೇತೃತ್ವದಲ್ಲಿ ಆರೋಗ್ಯ, ಕೃಷಿ, ಪಶು ಸಂಗೋಪನಾ, ಅರಣ್ಯ, ಮಹಿಳಾ ಮತ್ತು ಮಕ್ಕಳ ಕಲ್ಯಾಣ, ತೋಟಗಾರಿಕೆ ಹಾಗೂ ಬ್ಯಾಂಕಿಂಗ್ ಇಲಾಖೆಯ ಸಹಭಾಗಿತ್ವದಲ್ಲಿ ಸೋಮವಾರ ನಡೆದ ಕಿರಿಮಂಜೇಶ್ವರ ಗ್ರಾಮೋತ್ಸವ ಉದ್ಘಾಟಿಸಿ ಮಾತನಾಡಿದರು. 

    ಕ್ರೀಡಾ ಸಾಧಕರು ಮತ್ತು ಆರು ವಿಕಲಚೇತನರನ್ನು ಸನ್ಮಾನಿಸಲಾಯಿತು. ಪುರುಷ ಹಾಗೂ ಮಹಿಳೆಯರಿಗಾಗಿ ನಡೆದ ವಿವಿಧ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಿಸಲಾಯಿತು.

    ನೋಡೆಲ್ ಅಧಿಕಾರಿ ರಮೇಶ ಕುಲಾಲ್, ಬೈಂದೂರು ಉತ್ಸವ ಸಂಚಾಲಕ ಗಣೇಶ ಗಾಣಿಗ, ಉಪಾಧ್ಯಕ್ಷೆ ಅನಿತಾ ಆರ್. ಕೆ., ತಾಪಂ ಮಾಜಿ ಅಧ್ಯಕ್ಷರಾದ ಮಹೇಂದ್ರ ಪೂಜಾರಿ, ಶ್ಯಾಮಲಾ ಕುಂದರ್, ತಾಲೂಕು ವೈದ್ಯಾಧಿಕಾರಿ ಡಾ. ಪ್ರೇಮಾನಂದ, ಲಯನ್ಸ್ ಕ್ಲಬ್ ಅಧ್ಯಕ್ಷ ನಿತ್ಯಾನಂದ ಆಚಾರ್ಯ ಹಾಗೂ ಗ್ರಾಪಂ ಸದಸ್ಯರು ಇದ್ದರು.

    ಪಿಡಿಒ ರಾಜೇಶ್ ಸ್ವಾಗತಿಸಿ, ಗ್ರಾಪಂ ಸದಸ್ಯ ಈಶ್ವರ ದೇವಾಡಿಗ ವಂದಿಸಿದರು. ದೀಪಕ್ ನಿರೂಪಿಸಿದರು. 

    Click here

    Click here

    Click here

    Click Here

    Call us

    Call us

    ಸಾರ್ವಜನಿಕರಿಗೆ ಎ.ಜೆ. ಆಸ್ಪತ್ರೆಯ, ಕಿರಿಮಂಜೇಶ್ವರ ಪ್ರಾಥಮಿಕ ಆರೋಗ್ಯ ಕೇಂದ್ರದ, ಶಿರೂರು ಮುದ್ದುಮನೆ ಕಣ್ಣಿನ ಆಸ್ಪತ್ರೆಯ ತಜ್ಞ ವೈದ್ಯರಿಂದ ಉಚಿತ ಆರೋಗ್ಯ ತಪಾಸಣೆ ನಡೆಯಿತು. ತೋಟಗಾರಿಕೆ ಬಗ್ಗೆ ಮಾಹಿತಿ ಮತ್ತು ಕೆಲವು ಆಯ್ದ ಫಲಾನುಭವಿಗಳಿಗೆ ತರಕಾರಿ ಬೀಜಗಳನ್ನು ವಿತರಿಸಲಾಯಿತು. ಕೃಷಿ ಸಲಕರಣೆಗಳ ಪ್ರದರ್ಶನ, ಅರಣ್ಯ ಇಲಾಖೆಯಿಂದ ಸಸ್ಯಗಳ ಪೋಷಣೆ ಮತ್ತು ಸಂರಕ್ಷಣೆ ಕುರಿತು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವತಿಯಿಂದ ಮಹಿಳೆಯರ ಸಬಲೀಕರಣದ ಬಗ್ಗೆ ಹಾಗೂ ಮೆಸ್ಕಾಂನಿಂದ ಪ್ರಧಾನ ಮಂತ್ರಿ ಸೂರ್ಯ ಘರ್ ಯೋಜನೆ ಬಗ್ಗೆ ತಜ್ಞರಿಂದ ಮಾಹಿತಿ ನೀಡಲಾಯಿತು.

    Byndoor
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ

    20/05/2026

    ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ

    20/05/2026

    ಮಕ್ಕಳ ಸಾಹಿತ್ಯ ಉತ್ಸವದ ಆಶುಲೇಖನ ಸ್ಪರ್ಧೆಯಲ್ಲಿ ಸಮೃದ್ಧಿ ವಿ. ಪೂಜಾರಿ ದ್ವಿತೀಯ ಸ್ಥಾನ

    20/05/2026
    Leave A Reply Cancel Reply

    13 + 18 =

    Call us

    Click Here

    Call us

    Call us

    Call us
    Highest Viewed Recently
    • ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ
    • ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ
    • ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ
    • ಆಳ್ವಾಸ್‌ನ ‘ಲಿಪಿ’ ಮುದ್ರಣಾಲಯ ಲೋಕಾರ್ಪಣೆ
    • ಮಕ್ಕಳ ಸಾಹಿತ್ಯ ಉತ್ಸವದ ಆಶುಲೇಖನ ಸ್ಪರ್ಧೆಯಲ್ಲಿ ಸಮೃದ್ಧಿ ವಿ. ಪೂಜಾರಿ ದ್ವಿತೀಯ ಸ್ಥಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.