Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕೊಲ್ಲೂರು ಗ್ರಾಮದಲ್ಲಿ ಯಶಸ್ವಿ ಗ್ರಾಮೋತ್ಸವ ಆಯೋಜನೆ
    ಊರ್ಮನೆ ಸಮಾಚಾರ

    ಕೊಲ್ಲೂರು ಗ್ರಾಮದಲ್ಲಿ ಯಶಸ್ವಿ ಗ್ರಾಮೋತ್ಸವ ಆಯೋಜನೆ

    Updated:19/01/2026No Comments
    Facebook Twitter Pinterest LinkedIn WhatsApp Reddit Tumblr Email
    ??????????????
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಬೈಂದೂರು:
    ಕ್ಷೇತ್ರದ ಎಲ್ಲಾ ಗ್ರಾಮಗಳಲ್ಲಿ ಗ್ರಾಮೋತ್ಸವಗಳನ್ನು ಆಯೋಜಿಸಬೇಕೆಂಬ ಕಲ್ಪನೆ ಸಾಕಾರಗೊಂಡಿದ್ದು, ಪ್ರತೀ ಗ್ರಾಮಗಳಲ್ಲಿಯೂ ಇದು ಯಶಸ್ವಿಯಾಗಿ ನಡೆಯುತ್ತಿದೆ. ಎಲ್ಲಾ ಇಲಾಖೆಗಳು ಗ್ರಾಮಮಟ್ಟಕ್ಕೆ ಬಂದು ಜನರನ್ನು ಸ್ಪಂದಿಸುತ್ತಿದ್ದು, ಗ್ರಾಮದ ಜನರು ಎಲ್ಲವನ್ನೂ ಒಂದೇ ಸೂರಿನಡಿ ನೋಡುವಂತಹ ಸಾರ್ಥಕತೆ ಕಾಣುತ್ತಿದ್ದಾರೆ ಎಂದು ಶಾಸಕ ಗುರುರಾಜ ಗಂಟಿಹೊಳೆ ಹೇಳಿದರು.

    Click Here

    Call us

    Click Here

    ಅವರು ಇಲ್ಲಿನ ಕೊಲ್ಲೂರು ಗ್ರಾಮ ಪಂಚಾಯತ್ ನೇತೃತ್ವದಲ್ಲಿ ಸರ್ಕಾರದ ವಿವಿಧ ಇಲಾಖೆಗಳ ಸಹಭಾಗಿತ್ವದಲ್ಲಿ ಬುಧವಾರ ಇಲ್ಲಿನ ಸ.ಹಿ.ಪ್ರಾ ಶಾಲಾ ಆವರಣದಲ್ಲಿ ನಡೆದ ಕೊಲ್ಲೂರು ಗ್ರಾಮೋತ್ಸವದಲ್ಲಿ ಮಾತನಾಡಿದರು. ಸಂಜೀವಿನಿ ಸಂಘ ಎನ್ನುವುದು ಮುಂದಿನ ದಿನಗಳಲ್ಲಿ ಒಂದು ಹೊಸ ಕ್ರಾಂತಿಯನ್ನು ಸೃಷ್ಠಿಸಲಿದೆ. ರಾಮ್‌ಜೀ ಯೋಜನೆಯಲ್ಲಿ ಬರುವ ಅತೀ ಹೆಚ್ಚು ವ್ಯವಸ್ಥೆಗಳನ್ನು ಸಂಜೀವಿನಿ ಹೆಸರಿನಲ್ಲಿ ನೀಡಲಾಗುತ್ತಿದೆ. ಸಂಜೀವಿನಿ ಕೇವಲ ಹಣಕಾಸಿನ ವ್ಯವಹಾರ ಎಂದು ಕೆಲವರು ತಿಳಿದುಕೊಂಡಿರಬಹುದು ಆದರೆ ಇದೊಂದು ಇತರೇ ಆದಾಯದ ಸ್ವರೂಪವಾಗಿದ್ದು, ಗ್ರಾಮೀಣ ಜೀವನೋಪಾಯ ಇಲಾಖೆಯಾಗಿದೆ. ಮುಂದಿನ ದಿನಗಳಲ್ಲಿ ಸಂಜೀವಿನಿ ಸಂಘದವರೇ ಗ್ರಾಮೋತ್ಸವವನ್ನು ಆಯೋಜಿಸಬೇಕು ಎಂದರು.

    ಗ್ರಾಪಂ ಅಧ್ಯಕ್ಷೆ ಪ್ರಸನ್ನಾ ಶರ್ಮಾ ಉದ್ಘಾಟಿಸಿದರು. ಇಬ್ಬರು ಸಾಧಕ ಮಹಿಳೆಯರನ್ನು ಸನ್ಮಾನಿಸಲಾಯಿತು. ಶಿಕ್ಷಕಿ ಸಂಗೀತಾ ಶೆಟ್ಟಿ ಮಹಿಳಾ ಸಬಲೀಕರಣದ ಬಗ್ಗೆ ಉಪನ್ಯಾಸ ನೀಡಿದರು.

    ಕೊಲ್ಲೂರು ಗ್ರಾಮ ಪಂಚಾಯತ್ ನೇತೃತ್ವದಲ್ಲಿ ಬುಧವಾರ ನಡೆದ ಕೊಲ್ಲೂರು ಗ್ರಾಮೋತ್ಸವದಲ್ಲಿ ಸ್ವಾವಲಂಭಿ ಮಹಿಳೆ ಪೂರ್ಣಿಮಾ ಹಾಗೂ ಪಶುಸಖಿ ಸುಷ್ಮಾ ಶೇರುಗಾರ್ ಅವರನ್ನು ಸನ್ಮಾನಿಸಲಾಯಿತು.

    ಗ್ರಾಪಂ ಉಪಾಧ್ಯಕ್ಷ ನಾಗೇಶ ದಳಿ ಹಾಗೂ ಸರ್ವ ಸದಸ್ಯರು, ಕೆಡಿಪಿ ಸದಸ್ಯೆ ಗ್ರೀಷ್ಮಾ ಭಿಡೆ, ಎಸ್‌ಡಿಎಂಸಿ ಅಧ್ಯಕ್ಷ ಯೋಗೀಶ ಭಟ್, ಮುಖ್ಯಶಿಕ್ಷಕಿ ಸುಮಿತ್ರಾ ಶೆಟ್ಟಿ, ಗ್ರಾಮಲೆಕ್ಕಿಗ ವೀರೇಶ್, ಸಂಜೀವಿನಿ ಅಧ್ಯಕ್ಷೆ ಅಂಬಿಕಾ ಬಾಳಿಗ ಇದ್ದರು. ಗ್ರಾಪಂ ಸದಸ್ಯ ಶಿವರಾಮಕೃಷ್ಣ ಭಟ್ ಸ್ವಾಗತಿಸಿ, ಪಿಡಿಒ ಸತೀಶ ತೋಳಾರ್ ವಂದಿಸಿದರು. ಶಿಕ್ಷಕ ಎನ್. ಚಂದ್ರ ಕೊಠಾರಿ ನಿರೂಪಿಸಿದರು. 

    Click here

    Click here

    Click here

    Click Here

    Call us

    Call us

    ಸಾರ್ವಜನಿಕರಿಗೆ ಕೆಎಂಸಿ ಆಸ್ಪತ್ರೆಯ ವಿವಿಧ ವಿಭಾಗಗಳ ತಜ್ಞ ವೈದರಿಂದ ಉಚಿತ ಆರೋಗ್ಯ ತಪಾಸಣೆ ನಡೆಯಿತು. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ತೋಟಗಾರಿಕೆ ಇಲಾಖೆಗಳು ತಮ್ಮ ಯೋಜನೆಗಳ ಬಗ್ಗೆ ಮಾಹಿತಿ ನೀಡಿದರು. ಅರ್ಹ ಫಲಾನುಭವಿಗಳಿಗೆ ಕೃಷಿ ಸಲಕರಣೆಗಳನ್ನು ವಿತರಿಸಲಾಯಿತು. ಪಶು ಮತ್ತು ಹೈನುಗಾರಿಕೆ ಇಲಾಖೆಯಿಂದ ಜಾನುವಾರು ಪ್ರದರ್ಶನ ನಡೆಯಿತು. ಮೆಸ್ಕಾಂ ಅಧಿಕಾರಿಗಳು ಪ್ರಧಾನ ಮಂತ್ರಿ ಸೂರ್ಯ ಘರ್ ಯೋಜನೆ ಬಗ್ಗೆ ಮಾಹಿತಿ ನೀಡಿದರು.

    Byndoor
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ

    20/05/2026

    ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ

    20/05/2026

    ಮಕ್ಕಳ ಸಾಹಿತ್ಯ ಉತ್ಸವದ ಆಶುಲೇಖನ ಸ್ಪರ್ಧೆಯಲ್ಲಿ ಸಮೃದ್ಧಿ ವಿ. ಪೂಜಾರಿ ದ್ವಿತೀಯ ಸ್ಥಾನ

    20/05/2026
    Leave A Reply Cancel Reply

    5 × 5 =

    Call us

    Click Here

    Call us

    Call us

    Call us
    Highest Viewed Recently
    • ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ
    • ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ
    • ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ
    • ಆಳ್ವಾಸ್‌ನ ‘ಲಿಪಿ’ ಮುದ್ರಣಾಲಯ ಲೋಕಾರ್ಪಣೆ
    • ಮಕ್ಕಳ ಸಾಹಿತ್ಯ ಉತ್ಸವದ ಆಶುಲೇಖನ ಸ್ಪರ್ಧೆಯಲ್ಲಿ ಸಮೃದ್ಧಿ ವಿ. ಪೂಜಾರಿ ದ್ವಿತೀಯ ಸ್ಥಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.