Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಯುವ ವೇದಿಕೆ ಕೂಟ ಮಹಾಜಗತ್ತು ಸಾಲಿಗ್ರಾಮ ಅಂಗಸಂಸ್ಥೆ 9ನೇ ವರ್ಷದ ವಾರ್ಷಿಕೋತ್ಸವ
    ಊರ್ಮನೆ ಸಮಾಚಾರ

    ಯುವ ವೇದಿಕೆ ಕೂಟ ಮಹಾಜಗತ್ತು ಸಾಲಿಗ್ರಾಮ ಅಂಗಸಂಸ್ಥೆ 9ನೇ ವರ್ಷದ ವಾರ್ಷಿಕೋತ್ಸವ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕೋಟ:
    ಸಂಘಟನೆಗಳು ಸಮಾಜ ಹಾಗೂ ಸಮುದಾಯದ ಆಸ್ತಿಯಾಗಿ ಕಾರ್ಯನಿರ್ವಹಿಸಬೇಕು. ಇದಕ್ಕೆ ಯುವ ವೇದಿಕೆಯ ಒಂಭತ್ತು ವರ್ಷಗಳ ಸಾಮಾಜಿಕ ಕಾರ್ಯಗಳೇ ಸಾಕ್ಷಿ ಎಂದು ಸಾಲಿಗ್ರಾಮ ಶ್ರೀ ಗುರುನರಸಿಂಹ ದೇಗುಲದ ಆಡಳಿತ ಮಂಡಳಿಯ ಅಧ್ಯಕ್ಷ ಡಾ. ಕೆ.ಎಸ್ ಕಾರಂತ್ ಅಭಿಪ್ರಾಯಪಟ್ಟರು.

    Click Here

    Call us

    Click Here

    ಅವರು ಶುಕ್ರವಾರ ಸಾಲಿಗ್ರಾಮದ ಶ್ರೀ ಗುರುನರಸಿಂಹ ಬಯಲು ರಂಗಮಂದಿರದಲ್ಲಿ ಯುವ ವೇದಿಕೆ ಕೂಟ ಮಹಾಜಗತ್ತು ಸಾಲಿಗ್ರಾಮ ಅಂಗಸಂಸ್ಥೆ ಇದರ 9ನೇ ವರ್ಷದ ವಾರ್ಷಿಕೋತ್ಸವ, ಗೌರವ ಸನ್ಮಾನ, ವಿದ್ಯಾನಿಧಿ ವಿತರಣೆ ಮತ್ತು ಸಾಂಸ್ಕೃತಿಕದ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ದಶಮಾನೋತ್ಸವ ಹೊಸ್ತಿಲ್ಲಲ್ಲಿರುವ ಈ ಸಂಸ್ಥೆ ಇನ್ನಷ್ಟು ಸಾಮಾಜಿಕ ಯೋಜನೆಗಳನ್ನು ನೀಡಲಿ ಎಂದು ಹಾರೈಸಿದರು.

    ಸಭೆಯ ಅಧ್ಯಕ್ಷತೆಯನ್ನು ಯುವ ವೇದಿಕೆಯ ಅಧ್ಯಕ್ಷ ಗಿರೀಶ್ ಮಯ್ಯ ವಹಿಸಿ ಅತಿಥಿಗಳನ್ನು ಸ್ವಾಗತಿಸಿದರು. ಸಾಲಿಗ್ರಾಮ ಕೂಟ ಮಹಾಜಗತ್ತು ಕೇಂದ್ರ ಸಂಸ್ಥೆಯ ಅಧ್ಯಕ್ಷ ಸತೀಶ್ ಹಂದೆ ಶುಭಶಂಸನೆಯನ್ನು ಗೈದರು.

    ಪೊಂಪೈ ಕಾಲೇಜು ಐಕಳ ಇದರ ನಿವೃತ್ತ ಪ್ರಾಂಶುಪಾಲ ಡಾ| ಕೆ. ಜಗದೀಶ್ ಹೊಳ್ಳ, ಸಮಾಜಸೇವಕ  ಬಿ. ಸುರೇಶ್ ಅಡಿಗ ಬಾಳ್ಳುದ್ರು ಅವರನ್ನು ಸನ್ಮಾನಿಸಲಾಯಿತು.

    ಮುಖ್ಯ ಅಭ್ಯಾಗತರಾಗಿ ಬೆಂಗಳೂರಿನ ಶೇಖರ್ ಆಸ್ಪತ್ರೆಯ ಮುಖ್ಯಸ್ಥ ಡಾ| ಪಿ. ವಿಷ್ಣುಮೂರ್ತಿ ಐತಾಳ್, ಹೋಟೆಲ್, ಅಘೋರೇಶ್ವರ ದೇಗುಲದ ಧರ್ಮದರ್ಶಿ ಚಂದ್ರಶೇಖರ ಕಾರಂತ, ಕೊಲ್ಲೂರು ಮೂಕಾಂಬಿಕಾ ದೇವಸ್ಥಾನ ಸಮಿತಿಯ ಸದಸ್ಯ ರಾಜೇಶ ಕಾರಂತ, ಕೂಟ ಮಹಾಜಗತ್ತು ಸಾಲಿಗ್ರಾಮ ಕೇಂದ್ರ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಸುರೇಶ್ ತುಂಗ, ಕೂಟಮಹಾಜಗತ್ತು ಅಂಗಸಂಸ್ಥೆಯ ಅಧ್ಯಕ್ಷ  ಪಿ. ಚಂದ್ರಶೇಖರ ಹೊಳ್ಳ, ಕೃಷಿಕ  ಪಿ. ರಘು ಮಧ್ಯಸ್ಥ ಪಾರಂಪಳ್ಳಿ, ಯುವ ವೇದಿಕೆಯ ಗೌರವ ಸಲಹೆಗಾರ ಕೆ. ತಾರನಾಥ ಹೊಳ್ಳ, ಸಂಸ್ಥೆಯ ಮಾರ್ಗದರ್ಶಕ ಪಿ. ಮಂಜುನಾಥ ಉಪಾಧ್ಯ, ಕೂಟ ಮಹಾಜಗತ್ತು ಕೇಂದ್ರಿಯ ವಲಯ-1ರ ಸಂಘಟನಾ ಕಾರ್ಯದರ್ಶಿ ಶ್ರೀಪತಿ ಅಧಿಕಾರಿ, ಯುವ ವೇದಿಕೆಯ ನಿಯೋಜಿತ ಅಧ್ಯಕ್ಷ  ಪಿ. ಸಚಿನ್ ಹೇರ್ಳೆ, ಕೋಶಾಧಿಕಾರಿ ರವಿರಾಜ ಉಪಾಧ್ಯಾ ಉಪಸ್ಥಿತರಿದ್ದರು.

    Click here

    Click here

    Click here

    Call us

    Call us

    ಇದೇ ವೇಳೆ ಡಾ. ಬಾಲಕೃಷ್ಣ ನಕ್ಷತ್ರಿ ಹಾಗೂ ಪಿ. ಸದಾಶಿವ ಮಧ್ಯಸ್ಥ ಅವರ ವತಿಯಿಂದ ವಿದ್ಯಾನಿಧಿ ಆಯ್ದ ವಿದ್ಯಾರ್ಥಿಗಳಿಗೆ ವಿತರಿಸಲಾಯಿತು.

    ಯುವ ವೇದಿಕೆಯ ಗೌರವಾಧ್ಯಕ್ಷ ಪಿ.ವೈ. ಕೃಷ್ಣಪ್ರಸಾದ್ ಹೇರ್ಳೆ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಯುವ ವೇದಿಕೆಯ ಕಾರ್ಯದರ್ಶಿ ಶ್ರೀಕಾಂತ ಐತಾಳ್ ವರದಿ ವಾಚಿಸಿದರು. ಕಾರ್ಯಕ್ರಮವನ್ನು ಗೌರವ ಸಲಹೆಗಾರ ಕೆ. ಶಶಿಧರ ಮಯ್ಯ ನಿರೂಪಿಸಿದರು. ನಿಯೋಜಿತ ಕಾರ್ಯದರ್ಶಿ ಸುಧೀಂದ್ರ ಐತಾಳ್ ವಂದಿಸಿದರು.

    ಕಾರ್ಯಕ್ರಮದ ನಂತರ ಪಿಂಗಾರ್ ಕಲಾವಿದರ್ ಬೆದ್ರ ಅವರಿಂದ ಕದಂಬ ನಾಟಕ ಪ್ರದರ್ಶನಗೊಂಡಿತು.

    Kota
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಬ್ರಹ್ಮಾವರ: ಮಟಪಾಡಿ ದಿ. ಶಿವರಾಮ ಶೆಟ್ಟಿ ಅವರ 10ನೇ ವರ್ಷದ ಪುಣ್ಯಸ್ಮರಣೆ

    04/02/2026

    ತ್ರಾಸಿ: ವಾಕಿಂಗ್‌ ವೇಳೆ ವೃದ್ಧೆಯ ಕುತ್ತಿಗೆಯಿಂದ ಚಿನ್ನದ ಸರ ಎಳೆದುಕೊಂಡು ಪರಾರಿಯಾದ ಕಳ್ಳ

    04/02/2026

    ಸಾಲಿಗ್ರಾಮದಲ್ಲಿ ಬೃಹತ್ ಹಿಂದೂ ಸಂಗಮ, ಶೋಭಾಯಾತ್ರೆ

    04/02/2026
    Leave A Reply Cancel Reply

    one + three =

    Call us

    Click Here

    Call us

    Call us

    Call us
    Highest Viewed Recently
    • ಬ್ರಹ್ಮಾವರ: ಮಟಪಾಡಿ ದಿ. ಶಿವರಾಮ ಶೆಟ್ಟಿ ಅವರ 10ನೇ ವರ್ಷದ ಪುಣ್ಯಸ್ಮರಣೆ
    • ಜೀವನದಲ್ಲಿ ಉಚ್ಚ ಆದರ್ಶಗಳನ್ನು ಮತ್ತು ಉನ್ನತ ಗುರಿಯನ್ನಿಟ್ಟುಕೊಳ್ಳಿ: ಸ್ವಾಮಿ ಯುಗೇಶಾನಂದ
    • 70ನೇ ರಾಷ್ಟ್ರೀಯ ಜೂನಿಯರ್ ಬಾಲ್ ಬ್ಯಾಡ್ಮಿಂಟನ್: ಆಳ್ವಾಸ್ ಕಾಲೇಜಿನ ಬಾಲಕಿಯರು ಚಾಂಪಿಯನ್ಸ್
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಸಾಫ್ಟ್ ಸ್ಕಿಲ್ಸ್ ತರಬೇತಿ
    • ತ್ರಾಸಿ: ವಾಕಿಂಗ್‌ ವೇಳೆ ವೃದ್ಧೆಯ ಕುತ್ತಿಗೆಯಿಂದ ಚಿನ್ನದ ಸರ ಎಳೆದುಕೊಂಡು ಪರಾರಿಯಾದ ಕಳ್ಳ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.