Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಜಿಲ್ಲಾ ಮಾನವ ಅಭಿವೃದ್ಧಿ ವರದಿ ಮತ್ತು ಸುಸ್ಥಿರ ಜಿಲ್ಲಾ ಅಭಿವೃದ್ಧಿ ಯೋಜನೆ ಸಿದ್ಧಪಡಿಸಲು ನಿಖರ ದತ್ತಾಂಶ ನೀಡಿ: ಜಿಲ್ಲಾಧಿಕಾರಿ
    ಉಡುಪಿ ಜಿಲ್ಲೆ

    ಜಿಲ್ಲಾ ಮಾನವ ಅಭಿವೃದ್ಧಿ ವರದಿ ಮತ್ತು ಸುಸ್ಥಿರ ಜಿಲ್ಲಾ ಅಭಿವೃದ್ಧಿ ಯೋಜನೆ ಸಿದ್ಧಪಡಿಸಲು ನಿಖರ ದತ್ತಾಂಶ ನೀಡಿ: ಜಿಲ್ಲಾಧಿಕಾರಿ

    Updated:20/01/2026No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಉಡುಪಿ:
    ಜಿಲ್ಲಾ ಮಾನವ ಅಭಿವೃದ್ಧಿ ವರದಿ- 2025 ಮತ್ತು ಸಮಗ್ರ ಹಾಗೂ ಸುಸ್ಥಿರ ಜಿಲ್ಲಾ ಅಭಿವೃದ್ಧಿ ಯೋಜನೆ- 2031 ವರದಿಯನ್ನು ಸಿದ್ಧಪಡಿಸಲು ಅಧಿಕಾರಿಗಳು ಕಾಳಜಿ ವಹಿಸುವುದರೊಂದಿಗೆ ನಿಖರ ದತ್ತಾಂಶವನ್ನು ಕಾಲಮಿತಿಯ ಒಳಗೆ ನೀಡಬೇಕು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಕರೆ ನೀಡಿದರು.

    Click Here

    Call us

    Click Here

    ಅವರು ಸೋಮವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್ ಡಾ.ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ಉಡುಪಿ ಜಿಲ್ಲಾ ಮಾನವ ಅಭಿವೃದ್ಧಿ ವರದಿ- 2025 ಮತ್ತು ಸಮಗ್ರ ಹಾಗೂ ಸುಸ್ಥಿರ ಜಿಲ್ಲಾ ಅಭಿವೃದ್ಧಿ ಯೋಜನೆ- 2031 ವರದಿಯನ್ನು ಸಿದ್ಧಪಡಿಸುವ ಕುರಿತು ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳಿಗೆ ನಡೆದ ಒಂದು ದಿನದ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಉಡುಪಿ ಜಿಲ್ಲಾ ಮಾನವ ಅಭಿವೃದ್ಧಿ ವರದಿ- 2025 ಮತ್ತು ಸಮಗ್ರ ಹಾಗೂ ಸುಸ್ಥಿರ ಜಿಲ್ಲಾ ಅಭಿವೃದ್ಧಿ ಯೋಜನೆ- 2031 ವರದಿಯು ಅತೀ ಪ್ರಾಮುಖ್ಯ ದಾಖಲೆಯಾಗಿದ್ದು, ಎಲ್ಲಾ ಇಲಾಖಾಧಿಕಾರಿಗಳು ಇದರ ತಯಾರಿಕೆಯ ಪ್ರಕ್ರಿಯೆಯಲ್ಲಿ ತಮ್ಮನ್ನು ಸಂಪೂರ್ಣವಾಗಿ ತೊಡಗಿಸಿಕೊಂಡು ಸಂಬಂಧಿಸಿದ ದಾಖಲೆಗಳನ್ನು ಕ್ಲಪ್ತ ಸಮಯದಲ್ಲಿ ಒದಗಿಸುವುದರೊಂದಿಗೆ ಗ್ರಾಮ ಪಂಚಾಯತ್ ಹಂತದಿಂದಲೇ ಮಾನವ ಅಭಿವೃದ್ಧಿಗೆ ಒತ್ತು ನೀಡುವಂತದ್ದಾಗಿರಬೇಕು ಎಂದರು.

    ಸಮಗ್ರ ಹಾಗೂ ಸುಸ್ಥಿರ ಜಿಲ್ಲಾ ಅಭಿವೃದ್ಧಿ ಯೋಜನೆ – 2031 ವರದಿಗಾಗಿ ಹಲವು ಅಂಶಗಳ ಮಾಹಿತಿಯನ್ನು ಸಂಗ್ರಹಿಸಲಾಗುತ್ತಿದ್ದು, ಶಿಕ್ಷಣ, ಆರೋಗ್ಯ, ಪೋಷಣಾ ಸ್ಥಿತಿ, ಮೂಲಸೌಕರ್ಯ, ಸಾಮಾಜಿಕ ಒಳಗೊಳ್ಳುವಿಕೆ ಹಾಗೂ ಪರಿಸರದ ಸುಸ್ಥಿರತೆ ಸೇರಿದಂತೆ ವಿವಿಧ ಮಾನವ ಅಭಿವೃದ್ಧಿ ಸೂಚ್ಯಂಕಗಳ ಆಧಾರದಲ್ಲಿ ಜಿಲ್ಲೆಯ ಸಮಗ್ರ ಅಭಿವೃದ್ಧಿಯನ್ನು ಸಾಧಿಸುವುದು ಈ ವರದಿಗಳ ಪ್ರಮುಖ ಗುರಿಯಾಗಿದೆ. ಅಧಿಕಾರಿಗಳು, ದತ್ತಾಂಶ ಸಂಗ್ರಹ, ವಿಶ್ಲೇಷಣೆ, ಇಲಾಖಾವಾರು ಸಹಕಾರದೊಂದಿಗೆ ಮಾಹಿತಿಯನ್ನು ಒದಗಿಸಬೇಕು. ಜಿಲ್ಲೆಯ ಸಮಗ್ರ ಹಾಗೂ ಸಮತೋಲನೆಯ ಅಭಿವೃದ್ಧಿಗೆ ಇಲಾಖೆಗಳ ನಡುವೆ ಪರಸ್ಪರ ಸಮನ್ವಯತೆ ಅಗತ್ಯ ಎಂದರು.

    ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್ ಮಾತನಾಡಿ, ಉಡುಪಿ ಜಿಲ್ಲಾ ಮಾನವ ಅಭಿವೃದ್ಧಿ ವರದಿ- 2025 ಮತ್ತು ಸಮಗ್ರ ಹಾಗೂ ಸುಸ್ಥಿರ ಜಿಲ್ಲಾ ಅಭಿವೃದ್ಧಿ ಯೋಜನೆ- 2031 ವರದಿ ನೀಡುವಾಗ ಎಲ್ಲಾ ಇಲಾಖೆಗಳು ಸಂಬಂಧಪಟ್ಟ ಮಾಹಿತಿಯೊಂದಿಗೆ ಭಾಗವಹಿಸಬೇಕು. ಇದರೊಂದಿಗೆ ಫೀಡ್ ಬ್ಯಾಕ್‌ಗಳನ್ನು ಸಹ ನೀಡಬೇಕು ಎಂದರು.

    ಜಿಲ್ಲಾ ಮಾನವ ಅಭಿವೃದ್ಧಿ ವರದಿಗೆ ಹೆಚ್ಚಿನ ಬೇಡಿಕೆ ಇದ್ದು, ಇದು ಭವಿಷ್ಯದ ಯೋಜನೆಗಳನ್ನು ರೂಪಿಸಲು ರೆಫರ್ ಮಾಡಬಹುದಾಗಿದೆ. ಈ ಸಾಲಿನ ಜಿಲ್ಲಾ ಮಾನವ ಅಭಿವೃದ್ಧಿ ವರದಿ ಭಿನ್ನವಾಗಿದ್ದು,  ಸುಸ್ಥಿರ ಅಭಿವೃದ್ಧಿ ಬೆಳವಣಿಗೆ ಅಭಿವೃದ್ಧಿಗೆ ಇದು ಸಹಕಾರಿಯಾಗಲಿದೆ. ಜನಸಾಮಾನ್ಯರಿಗೆ ಅವರ ಕೈಗೆಟುವ ಹಾಗೆ ಹೆಚ್ಚಿನ ಆಯ್ಕೆಗಳಿದ್ದಲ್ಲಿ ಮಾನವ ಅಭಿವೃದ್ಧಿ ಸಾಧ್ಯವಾಗಲಿದೆ. ಶಿಕ್ಷಣ, ಆರೋಗ್ಯ, ಜನರ ಜೀವನ ಮಟ್ಟದ ಮೇಲೆ ಅಭಿವೃದ್ಧಿಯ ಅಂಶಗಳು ಒಳಪಟ್ಟಿವೆ ಎಂದರು.

    Click here

    Click here

    Click here

    Click Here

    Call us

    Call us

    ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ ನಿವೃತ್ತ ಜಂಟಿ ನಿರ್ದೇಶಕ ಶ್ರೀನಿವಾಸ್ ರಾವ್‌ ಮಾತನಾಡಿ, ಜಿಲ್ಲಾ ಮಾನವ ಅಭಿವೃದ್ಧಿ ವರದಿಗೆ ಅತ್ಯಂತ ಮಹ್ವತ್ವವಾದ ಮೌಲ್ಯವಿದೆ. ಜಿಲ್ಲೆ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಅಚ್ಚುಕಟ್ಟಾಗಿ ಸ್ಪಷ್ಟ ಮಾಹಿತಿ ನೀಡಿದ್ದಲ್ಲಿ ಇದು ಜಿಲ್ಲೆಯು ಅಭಿವೃದ್ಧಿ ಹೊಂದಲು ಸಹಕಾರಿಯಾಗಲಿದೆ ಎಂದರು.

    ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಯೋಜನೆ ರೂಪಿಸುವಾಗ ಎದುರಾಗುವ ಸಮಸ್ಯೆಗಳನ್ನು ಸಹ ತಿಳಿಸಬಹುದು. ಹೊಸ ವಿನೂತನ ಯೋಜನೆಗಳನ್ನೂ ಸಹ ಗುರುತಿಸಿ, ಮಾಹಿತಿ ನೀಡಬಹುದು. ಜೊತೆಗೆ ವರದಿಯೊಂದಿಗೆ ಜನರನ್ನು ಆಕರ್ಷಿಸುವಂತಹ ಸ್ಥಳೀಯ ಕಲೆ, ಸಂಸ್ಕೃತಿ, ವೇಷಭೂಷಣಗಳನ್ನು ಒಳಗೊಂಡ ಛಾಯಾಚಿತ್ರಗಳನ್ನು ನೀಡಿದ್ದಲ್ಲಿ ವರದಿಗೆ ಹೆಚ್ಚಿನ ಮಹತ್ವ ದೊರೆಯಲಿದೆ ಎಂದರು. 

    ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಉದಯ್ ಕುಮಾರ್, ಯೋಜನೆಯ ಅನುಷ್ಠಾನಾಧಿಕಾರಿಗಳು, ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    21/05/2026

    ಜೂ.1 ರಿಂದ 61 ದಿನಗಳ ಕಾಲ ಯಾಂತ್ರೀಕೃತ ಮೀನುಗಾರಿಕೆ ನಿಷೇಧ

    21/05/2026

    ಉಡುಪಿ: ಮಹಾತ್ಮ ಗಾಂಧಿ ಮೆಮೋರಿಯಲ್‌ ಸಂಧ್ಯಾ ಕಾಲೇಜಿನಲ್ಲಿ ವಿದ್ಯಾರ್ಥಿ ಕ್ಷೇಮಪಾಲನಾ ಮಂಡಳಿ ದಿನಾಚರಣೆ

    20/05/2026
    Leave A Reply Cancel Reply

    16 + fourteen =

    Call us

    Click Here

    Call us

    Call us

    Call us
    Highest Viewed Recently
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.