ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಕುಂಭಾಶಿ ಗ್ರಾಮದ ಕೊರವಡಿಯ ಪಡಿಯನ ಮನೆಯ ನಿವಾಸಿ ಶೀನ ಮರಕಾಲ ಅವರ ಪುತ್ರ ಸಂತೋಷ್ (38) ಪಂಚಗಂಗಾವಳಿ ನದಿಗೆ ಬೋಟಿನಿಂದ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ನಾಪತ್ತೆಯಾದ ಘಟನೆ ಸೋಮವಾರ ಬೆಳಗಿನ ಜಾವ ಸಂಭವಿಸಿದೆ.
ಸಂತೋಷ್ ಅವರು ಗಂಗೊಳ್ಳಿಯ ಗುರು ಜಟ್ಟಿಗೇಶ್ವರ ಬೋಟಿನಲ್ಲಿ ಮೀನುಗಾರಿಕೆ ಕೆಲಸ ಮಾಡಿಕೊಂಡಿದ್ದು, ಜ.19ರ ಬೆಳಗ್ಗೆ ಮೀನುಗಾರಿಕೆ ಮುಗಿಸಿ, ವಾಪಾಸು ಬಂದರಿಗೆ ಬರುವ ವೇಳೆ ಈ ಅವಘಡ ಸಂಭವಿಸಿದೆ. ಕೂಡಲೇ ಬೋಟಿನಲ್ಲಿದ್ದವರೆಲ್ಲ ಹುಡುಕಾಟ ನಡೆಸಿದರೂ ಪತ್ತೆಯಾಗಿಲ್ಲ.
ಸಂತೋಷ್ ಅವರ ಸಂಬಂಧಿ ರಾಘವೇಂದ್ರ ಅವರು ನೀಡಿದ ದೂರಿನಂತೆ ಪ್ರಕರಣ ದಾಖಲಾಗಿದೆ.










