ಬೈಂದೂರು: ಇಲ್ಲಿಗೆ ಸಮೀಪದ ನಾಕಟ್ಟೆಯಲ್ಲಿ ಬೈಕ್ ಹಾಗೂ ಕಾರು ನಡುವೆ ನಡೆದ ಅಪಘಾತದಲ್ಲಿ ಬೈಕ್ ಸವಾರರು ಗಂಭೀರವಾಗಿ ಗಾಯಗೊಂಡ ಘಟನೆ ವರದಿಯಾಗಿದೆ.
ಶಿರೂರು ಕಡೆಯಿಂದ ಕುಂದಾಪುರ ಕಡೆಗೆ ತೆರಳುತ್ತಿದ್ದ ಕಾರು ಓವರಟೇಕ್ ಮಾಡುವ ಭರದಲ್ಲಿ ನಾಕಟ್ಟೆ ಸಮೀಪ ಎದುರಿನಿಂದ ಬರುತ್ತಿದ್ದ ಬೈಕಿಗೆ ಢಿಕ್ಕಿ ಹೊಡೆದಿತ್ತು. ಢಿಕ್ಕಿಯ ರಭಸಕ್ಕೆ ಬೈಕಿನಲ್ಲಿದ್ದ ಮಂಜುನಾಥ ಹಾಗೂ ಸೀತಾರಾಮ ಎಂಬುವವರ ಕಾಲಿಗೆ ಗಂಭೀರ ಗಾಯಗಳಾಗಿದ್ದು, ಈರ್ವರನ್ನೂ ಕುಂದಾಪುರ ಖಾಸಗಿ ಆಸ್ಪತ್ರೆಗೆ ದಾಖಲಿಸಿಲಾಗಿದೆ. ಕಾರಿನ ಮುಂಭಾಗ ಹಾಗೂ ಬೈಕ್ ನುಜ್ಜುಗುಜ್ಜಾಗಿದ್ದು ಬೈಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.









