Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ನಮ್ಮ ಸ್ವಚ್ಛ ಪರಿಸರದ ರಕ್ಷಣೆಯೇ ನಾವು ಪ್ರತಿಕ್ಷಣವೂ ದೇಶಕ್ಕೆ ನೀಡಬೇಕಾದ ಕೊಡುಗೆ: ಕೆ. ರಂಜನ್ ಕಲ್ಕೂರ
    ಊರ್ಮನೆ ಸಮಾಚಾರ

    ನಮ್ಮ ಸ್ವಚ್ಛ ಪರಿಸರದ ರಕ್ಷಣೆಯೇ ನಾವು ಪ್ರತಿಕ್ಷಣವೂ ದೇಶಕ್ಕೆ ನೀಡಬೇಕಾದ ಕೊಡುಗೆ: ಕೆ. ರಂಜನ್ ಕಲ್ಕೂರ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಇಲ್ಲಿನ ಹಟ್ಟಿಯಂಗಡಿಯ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯಲ್ಲಿ 77ನೇ ಗಣರಾಜ್ಯೋತ್ಸವವನ್ನು ಅತ್ಯಂತ ಸಂಭ್ರಮದಿಂದ ಆಚರಿಸಲಾಯಿತು.

    Click Here

    Call us

    Click Here

    ಕಲ್ಕೂರ ರೆಫ಼್ರಿಜರೇಶನ್ ಮತ್ತು ಕಿಚನ್ ಇಕ್ವಿಪ್ ಮೆಂಟ್ ಪ್ರೈವೇಟ್ ಲಿಮಿಟೆಡ್ ತಂಗದಗಡಿ ಅಂಬಾಗಿಲು ಉಡುಪಿ ಸಂಸ್ಥೆಯ ಆಡಳಿತ ನಿರ್ದೇಶಕರಾದ ಕೆ. ರಂಜನ್ ಕಲ್ಕೂರ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಿ ಧ್ವಜಾರೋಹಣ ಮಾಡಿ, ವಿದ್ಯಾರ್ಥಿಗಳಿಂದ ಗೌರವ ವಂದನೆ ಸ್ವೀಕರಿಸಿದರು.

    ಈ ಸಂದರ್ಭದಲ್ಲಿ ಸಭೆಯನ್ನುದ್ದೇಶಿಸಿ ಸಂವಿಧಾನದ ಪರಿಚಯವನ್ನು ತಿಳಿಸುತ್ತಾ ಮಾತನಾಡಿದ ಕೆ. ರಂಜನ್ ಕಲ್ಕೂರ ಅವರು  ದೇಶದ ಪ್ರಜೆಗಳು ತಮ್ಮ ಹಕ್ಕುಗಳನ್ನು ಅರಿತು ಆನಂದಿಸಬೇಕು. ಕರ್ತವ್ಯಗಳನ್ನು ಎಂದೂ ಮರೆಯಬಾರದು. ಧ್ವಜದ ಬಣ್ಣಗಳು ನಮ್ಮ ತ್ಯಾಗ ಶಾಂತಿ ಮತ್ತು ಸಸ್ಯಶ್ಯಾಮಲತೆ, ಪ್ರಗತಿಗಳ ಸಂಕೇತ. ನಮ್ಮಲ್ಲಿರುವ ಭಿನ್ನತೆಯನ್ನು ಗೌರವಿಸಲು ಅರಿಯಬೇಕು. ಆದರೆ ನಾವೆಲ್ಲ ಒಂದೇ ಎಂಬ ಭಾವನೆಯನ್ನು ಮರೆಯಬಾರದು. ರಜೆಯಲ್ಲಿ ಅಜ್ಜಿಯ ಮನೆಗೆ ಮಕ್ಕಳು ಹೋಗುವಂತೆ ಇಂದು ಕಾಡಿನಿಂದ ಪ್ರಾಣಿಗಳು ನಾಡಿಗೆ ಬರುತ್ತಿವೆ. ಅವುಗಳ ಅಜ್ಜಿಮನೆಯಾದ ಕಾಡನ್ನು ನಾಶ ಮಾಡಿದುದೇ ಈ ಕಾರ್ಯಕ್ಕೆ ಕಾರಣ. ಆದ್ದರಿಂದ ಸಾಧ್ಯವಾದಷ್ಟು ಕಾಡನ್ನು ಉಳಿಸಿ ಬೆಳೆಸಬೇಕು, ಜೊತೆಗೆ ಪರಿಸರದ ಸ್ವಚ್ಛತೆಯನ್ನು ಕಾಪಾಡುವುದು ಅತ್ಯಗತ್ಯ  ಎಂದು ವಿವಿಧ ಕಥೆಗಳ ಮೂಲಕ ಮಕ್ಕಳಿಗೆ ತಿಳಿ ಹೇಳಿದರು.

    ವಿದ್ಯಾರ್ಥಿನಿಯಾದ ವಿಜಯಲಕ್ಷ್ಮೀ ಈ ಸಮಯದಲ್ಲಿ ಮಾತನಾಡುತ್ತಾ  ಸ್ವಾತಂತ್ರ್ಯವೆಂದರೆ ನಮಗೆ ನಾವೇ ನಿರ್ಮಿಸಿಕೊಂಡ ಶಿಸ್ತು. ವಿದ್ಯಾರ್ಥಿಗಳಾದ ನಮಗೆ ಉತ್ತಮ ಅಧ್ಯಯನದ ಮೂಲಕ ಸಾಕ್ಷರ-ವಿದ್ಯಾವಂತ ಸಮಾಜ ನಿರ್ಮಾಣವೇ ಪ್ರಧಾನವಾದ ಕರ್ತವ್ಯವಾಗಿದೆ ಎಂದು ತಿಳಿಸಿದರು.     

    ಶ್ರೀ ಸಿದ್ಧಿ ಶೈಕ್ಷಣಿಕ ಪ್ರತಿಷ್ಠಾನದ ಕಾರ್ಯದರ್ಶಿಗಳೂ ಮತ್ತು ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯ ಪ್ರಾಂಶುಪಾಲರಾದ ಶರಣ ಕುಮಾರರ ಅಧ್ಯಕ್ಷತೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಉಪ ಪ್ರಾಂಶುಪಾಲರಾದ ರಾಮ ದೇವಾಡಿಗ, ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ಸುಜಾತ ಸದಾರಾಮ್, ಶಿಕ್ಷಕ-ಶಿಕ್ಷಕೇತರ ವೃಂದದವರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

    Click here

    Click here

    Click here

    Call us

    Call us

    ಈ ಸಂದರ್ಭದಲ್ಲಿ ವಿದ್ಯಾರ್ಥಿಗಳ ಆಕರ್ಷಕ ಪಥಸಂಚಲನ, ದೇಶಭಕ್ತಿಯನ್ನು ಮೂಡಿಸುವ ಗೀತೆಗಳ ಗಾನ ಎಲ್ಲರ ಗಮನ ಸೆಳೆಯಿತು. ಕುಮಾರ ಸಂಗಮೇಶ್ ಬಿ.ವಿ ಕಾರ್ಯಕ್ರಮಕ್ಕೆ ಸರ್ವರನ್ನು ಸ್ವಾಗತಿಸಿದರು. ಸೃಜನ್ ಆರ್. ಹೆಚ್. ಕಾರ್ಯಕ್ರಮ ನಿರೂಪಿಸಿದರು. ತಸ್ವೀ ಎಮ್. ಶೆಟ್ಟಿ  ವಂದಿಸಿದರು.

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕೋಟ ಶ್ರೀ ಅಮೃತೇಶ್ವರಿ ದೇವಸ್ಥಾನದಲ್ಲಿ ನಾಥಪಂಥದ ಪೀರ್‌ ಯೋಗಿ ಜಗದೀಶ್‌ನಾಥ್ ಜೀ ಭೇಟಿ

    04/07/2026

    ನಿವೃತ್ತ ಮುಖ್ಯೋಪಾಧ್ಯಾಯಿನಿ ನಿರ್ಮಲಾ ಕೆ.ಎಸ್. ಅವರಿಗೆ ಅಭಿನಂದನೆ

    04/07/2026

    ಕುಂದಾಪುರ: ಮೂಡ್ಲಕಟ್ಟೆ ನರ್ಸಿಂಗ್ ಕಾಲೇಜಿನಲ್ಲಿ ಕ್ಯಾಂಪಸ್ ಪ್ಲೇಸ್ಮೆಂಟ್

    04/07/2026
    Leave A Reply Cancel Reply

    4 × 2 =

    Call us

    Click Here

    Call us

    Call us

    Call us
    Highest Viewed Recently
    • ಉಡುಪಿ: ವಿದ್ಯಾರ್ಥಿವೇತನ ಸೌಲಭ್ಯಕ್ಕೆ ಅರ್ಜಿ ಆಹ್ವಾನ
    • ಕೋಟ ಶ್ರೀ ಅಮೃತೇಶ್ವರಿ ದೇವಸ್ಥಾನದಲ್ಲಿ ನಾಥಪಂಥದ ಪೀರ್‌ ಯೋಗಿ ಜಗದೀಶ್‌ನಾಥ್ ಜೀ ಭೇಟಿ
    • ಆಳ್ವಾಸ್‌ನಿಂದ ರಾಜ್ಯ ಮಟ್ಟದ ಮಹಿಳಾ ಮಧ್ಯವರ್ಜನ ಶಿಬಿರ
    • ನಿವೃತ್ತ ಮುಖ್ಯೋಪಾಧ್ಯಾಯಿನಿ ನಿರ್ಮಲಾ ಕೆ.ಎಸ್. ಅವರಿಗೆ ಅಭಿನಂದನೆ
    • ಕುಂದಾಪುರ: ಮೂಡ್ಲಕಟ್ಟೆ ನರ್ಸಿಂಗ್ ಕಾಲೇಜಿನಲ್ಲಿ ಕ್ಯಾಂಪಸ್ ಪ್ಲೇಸ್ಮೆಂಟ್

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.