Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಜಿಲ್ಲೆಯಲ್ಲಿ ಸಿ.ಎನ್.ಜಿ ಗ್ಯಾಸ್ ವಿತರಣಾ ಸಮಸ್ಯೆಗಳನ್ನು ಕೂಡಲೇ ಪರಿಹರಿಸಿ: ಸ್ವರೂಪ ಟಿ.ಕೆ
    ಉಡುಪಿ ಜಿಲ್ಲೆ

    ಜಿಲ್ಲೆಯಲ್ಲಿ ಸಿ.ಎನ್.ಜಿ ಗ್ಯಾಸ್ ವಿತರಣಾ ಸಮಸ್ಯೆಗಳನ್ನು ಕೂಡಲೇ ಪರಿಹರಿಸಿ: ಸ್ವರೂಪ ಟಿ.ಕೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಉಡುಪಿ:
    ಜಿಲ್ಲೆಯಲ್ಲಿ ಸಿ.ಎನ್.ಜಿ ಗ್ರಾಹಕರಿಗೆ ಸಿ.ಎನ್.ಜಿ ಗ್ಯಾಸ್ ವಿತರಣಾ ಕೇಂದ್ರಗಳಲ್ಲಿ ವಾಹನಗಳು ಗಂಟೆಗಟ್ಟಲೆ ಕಾಯುವ ಪರಿಸ್ಥಿತಿ ಉಂಟಾಗಿದೆ. ಈ ಸಮಸ್ಯೆಯನ್ನು ಕೂಡಲೇ ಪರಿಹರಿಸಿ ಸುಗಮವಾಗಿ ಗ್ಯಾಸ್ ಲಭ್ಯವಾಗುವಂತೆ ನೋಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ ಸೂಚನೆ ನೀಡಿದರು.

    Click Here

    Call us

    Click Here

    ಅವರು ಶುಕ್ರವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಿ.ಎನ್.ಜಿ ಗ್ಯಾಸ್ ಸರಬರಾಜಿನಲ್ಲಿ ಉಂಟಾಗುವ ಸಮಸ್ಯೆಯನ್ನು ಚರ್ಚಿಸುವ ಸಲುವಾಗಿ ಆಯೋಜಿಸಲಾದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿ ಸಿ.ಎನ್. ಜಿ ಗ್ಯಾಸ್ ಬಳಸಿ ವಾಹನ ಚಾಲನೆ ಮಾಡುತ್ತಿರುವ ಆಟೋ ಚಾಲಕರು ಸೇರಿದಂತೆ ಮತ್ತಿತರರ ವಾಹನಗಳಿಗೆ ಗ್ಯಾಸ್ ತುಂಬಿಸಲು ಬಂಕ್ ಗಳ ಮುಂದೆ ಎರಡು-ಮೂರು ಗಂಟೆಗಿಂತ ಹೆಚ್ಚು ಕಾಲ ಕಾಯುವ ಪರಿಸ್ಥಿತಿ ಉಂಟಾಗಿ ಸಾರ್ವಜನಿಕರಿಗೆ ಸಮಸ್ಯೆ ಉಂಟಾಗುತ್ತಿದೆ. ಇದನ್ನು ಕೂಡಲೇ ಗೈಲ್ ಗ್ಯಾಸ್ ಕಂಪನಿ ಹಾಗೂ ಅದಾನಿ ಕಂಪನಿಯವರ ಸಮನ್ವಯದೊಂದಿಗೆ ಕಾರ್ಯ ನಿರ್ವಹಿಸಿ ಗ್ಯಾಸ್ ವಿತರಣೆಯಲ್ಲಿ ತೊಂದರೆ ಉಂಟಾಗದಂತೆ ನೋಡಿಕೊಳ್ಳಬೇಕು ಎಂದು ಸೂಚನೆ ನೀಡಿದರು.

    ಜಿಲ್ಲೆಯಲ್ಲಿ ಸಿ.ಎನ್.ಜಿ ಬಳಸುವ ವಾಹನಗಳ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದ್ದು ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ಗ್ಯಾಸ್ ವಿತರಣೆಗೆ ಅಗತ್ಯವಿರುವ ಇಲ್ಲಾ ರೀತಿಯ ಕಾರ್ಯ ಚಟುವಟಿಕೆ ಕೈಗೊಂಡು ಬೇಡಿಕೆಗೆ ಅನುಗುಣವಾಗಿ ಪೂರೈಸಬೇಕು ಎಂದು ಅದಾನಿ ಕಂಪನಿ ಪ್ರತಿನಿಧಿಗೆ ಸೂಚಿಸಿದರು. ಮಂಗಳೂರಿನ ಗ್ಯಾಸ್ ಡಿಪೋದಲ್ಲಿ ಟ್ಯಾಂಕರ್‌ಗಳಿಗೆ ಗ್ಯಾಸ್ ತುಂಬಿಸುವಾಗ ಉಡುಪಿ ಜಿಲ್ಲೆಯ ವಾಹನಗಳಿಗೆ ಆದ್ಯತೆ ನೀಡಿ ಸರತಿ ಸಾಲಿನ ಪ್ರಕಾರ  ಗ್ಯಾಸ್ ತುಂಬಿಸಲು ಆದ್ಯತೆ ನೀಡಬೇಕು. ಸಾಧ್ಯವಾದಲ್ಲಿ ನಿಗದಿತ ವೇಳೆಯನ್ನು ನೀಡಿ ಗ್ಯಾಸ್ ಟ್ಯಾಂಕರ್‌ಗಳಿಗೆ ಭರ್ತಿ ಮಾಡಲು ಅವಕಾಶ ಮಾಡಿಕೊಡಬೇಕು ಎಂದರು.

    ಉಡುಪಿ-ಚಿಕ್ಕಮಗಳೂರು ಲೋಕಸಭಾ ಸಂಸದ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ, ಜಿಲ್ಲೆಯಲ್ಲಿ ಸಿ.ಎನ್.ಜಿ ಗ್ಯಾಸ್ ಅಸಮರ್ಪಕ ವಿತರಣೆಯಿಂದಾಗಿ ಆಟೋ ಸೇರಿದಂತೆ ಮತ್ತಿತರ ವಾಹನ ಚಾಲಕರಿಗೆ ಗ್ಯಾಸ್ ತುಂಬಿಸಲು ದಿನಗಟ್ಟಲೆ ನಿಲ್ಲುವ ಪರಿಸ್ಥಿತಿ ಉಂಟಾಗಿದೆ. ಇದರಿಂದ ಕೆಲವರ ವೃತ್ತಿ ಜೀವನದಲ್ಲಿ ತೊಂದರೆ ಉಂಟಾಗುತ್ತಿದೆ. ಸಮರ್ಪಕ ವಿತರಣೆಗೆ ಮುಂದಾಗಬೇಕು ಎಂದು ತಿಳಿಸಿದರು.

    ಕಳೆದ ಸಭೆಯಲ್ಲಿ ಅದಾನಿ ಕಂಪನಿಯವರು ತಮ್ಮದೇ ಸ್ವಂತ ಗ್ಯಾಸ್ ತುಂಬುವ ಡಿಪೋ ವನ್ನು ಶೀಘ್ರವೇ ಪ್ರಾರಂಭಿಸುವುದಾಗಿ ತಿಳಿಸಿದ್ದರು. ಆದರೆ ಇದುವರೆಗೂ ಆಗಿಲ್ಲ. ಇದನ್ನು ಕೂಡಲೇ ಪ್ರಾರಂಭಿಸಲು ಮುಂದಾಗಿ ಜನರಿಗೆ ಗ್ಯಾಸ್ ಸರಬರಾಜಿನಲ್ಲಿ ವ್ಯತ್ಯಾಯ ಉಂಟಾಗದಂತೆ ನೋಡಿಕೊಳ್ಳಬೇಕು ಎಂದ ಅವರು, ಪ್ರಸ್ತುತ 17 ಗ್ಯಾಸ್ ಟ್ಯಾಂಕರ್ ವಾಹನಗಳು ಬಳಕೆ ಮಾಡಿ ಮಂಗಳೂರಿನಿಂದ ತರಲಾಗುತ್ತಿದೆ. ಈ ವಾಹನಗಳ ಸಂಖ್ಯೆಯನ್ನು ಮತ್ತಷ್ಟು ಹೆಚ್ಚಿಸಿದ್ದಲ್ಲಿ ಸಿ.ಎನ್.ಸಿ ಸುಗಮ ಗ್ಯಾಸ್ ಸರಬರಾಜಿಗೆ ಅನುಕೂಲವಾಗಲಿದೆ. ಇದಕ್ಕೆ ಅದಾನಿ ಕಂಪನಿಯವರು ಒತ್ತು ನೀಡಬೇಕು ಎಂದರು.

    Click here

    Click here

    Click here

    Click Here

    Call us

    Call us

    ಜಿಲ್ಲೆಯ ಸಿ.ಎನ್.ಜಿ ಗ್ಯಾಸ್ ವಿತರಣಾ ಘಟಕಗಳಲ್ಲಿ ಗ್ಯಾಸ್ ತುಂಬಿಸಲು ವಾಹನಗಳು ಗಂಟೆಗಟ್ಟಲೆ ನಿಂತು ತುಂಬಿಸುವ ಅನಿವಾರ್ಯ ಉಂಟಾಗಿದೆ ಹಾಗೂ ಗ್ಯಾಸ್ ತುಂಬುವಾಗ ಒತ್ತಡದ ಕೊರತೆಯಿಂದ ಸಮಸ್ಯೆ ಉಂಟಾಗುತ್ತಿದೆ ಎಂದು ವಾಹನ ಚಾಲಕರು ತಮ್ಮ ಅಹವಾಲು ತೋಡಿಕೊಂಡರು.

    ಸಭೆಯಲ್ಲಿ ಶಾಸಕ ಕುಂದಾಪುರ ಶಾಸಕ ಎ. ಕಿರಣ್ ಕುಮಾರ್ ಕೊಡ್ಗಿ, ಗೈಲ್ ಗ್ಯಾಸ್ ಹಾಗೂ ಅದಾನಿ ಗ್ಯಾಸ್ ಕಂಪನಿಯ ಮುಖ್ಯಸ್ಥರುಗಳು, ಆಟೋ ರಿಕ್ಷಾ ಚಾಲಕರುಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಉಡುಪಿ: ಮಹಾತ್ಮ ಗಾಂಧಿ ಮೆಮೋರಿಯಲ್‌ ಸಂಧ್ಯಾ ಕಾಲೇಜಿನಲ್ಲಿ ವಿದ್ಯಾರ್ಥಿ ಕ್ಷೇಮಪಾಲನಾ ಮಂಡಳಿ ದಿನಾಚರಣೆ

    20/05/2026

    ಕೆಎಂಡಿಸಿ ಸಾಲ: ಒಟಿಎಸ್ ಮೂಲಕ ಬಡ್ಡಿ ಮನ್ನಾ

    20/05/2026

    ಮೆಟ್ರಿಕ್ ನಂತರ ವಿದ್ಯಾರ್ಥಿ ನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ

    20/05/2026
    Leave A Reply Cancel Reply

    19 + 9 =

    Call us

    Click Here

    Call us

    Call us

    Call us
    Highest Viewed Recently
    • ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ
    • ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ
    • ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ
    • ಆಳ್ವಾಸ್‌ನ ‘ಲಿಪಿ’ ಮುದ್ರಣಾಲಯ ಲೋಕಾರ್ಪಣೆ
    • ಮಕ್ಕಳ ಸಾಹಿತ್ಯ ಉತ್ಸವದ ಆಶುಲೇಖನ ಸ್ಪರ್ಧೆಯಲ್ಲಿ ಸಮೃದ್ಧಿ ವಿ. ಪೂಜಾರಿ ದ್ವಿತೀಯ ಸ್ಥಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.