Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಗಂಗೊಳ್ಳಿ ಶ್ರೀ ವೀರೇಶ್ವರ ದೇವಸ್ಥಾನದಲ್ಲಿ ಹಿಂದೂ ಸಂಗಮ ಕಾರ್ಯಕ್ರಮ
    ಊರ್ಮನೆ ಸಮಾಚಾರ

    ಗಂಗೊಳ್ಳಿ ಶ್ರೀ ವೀರೇಶ್ವರ ದೇವಸ್ಥಾನದಲ್ಲಿ ಹಿಂದೂ ಸಂಗಮ ಕಾರ್ಯಕ್ರಮ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಈ ಜಗತ್ತಿನಲ್ಲಿರುವುದು ಒಂದೇ ಧರ್ಮ, ಅದು ಹಿಂದು ಧರ್ಮ ನಾವು ನಮ್ಮ ಜೀವನವನ್ನು ಚೆನ್ನಾಗಿ ನಿರ್ವಹಿಸಿಕೊಂಡು ಹೋಗುತ್ತಿರುವಾಗ ನಮ್ಮ ಆಚರಣೆಗಳಿಂದ ಉಳಿದ ನಮ್ಮವರಿಗೆ ತೊಂದರೆಯಾಗದಂತೆ ಬದುಕುವುದೇ ಧರ್ಮ. ಉಳಿದೆಲ್ಲವುಗಳು ಮತಗಳು. ಜಾತಿ ಪದ್ಧತಿ ಮತ್ತು ಅಸೂಯೆ ನಮ್ಮ ಧರ್ಮಕ್ಕೆ ದೊಡ್ಡ ಕಂಟಕಗಳು. ಜಾತಿ ಜಾತಿ ಹೆಸರಿನಲ್ಲಿ ಹಿಂದುಗಳನ್ನು ಒಡೆದು ಹಾಕಲಾಗುತ್ತಿದೆ. ನಾವೆಲ್ಲ ಒಂದು ನಾವೆಲ್ಲರೂ ಹಿಂದು ಎಂಬುದನ್ನು ಗಮನದಲ್ಲಿಟ್ಟುಕೊಳ್ಳಬೇಕು. ನಮ್ಮ ಸಂಸ್ಕೃತಿ, ಧರ್ಮಕ್ಕೆ ಜೀವ ಕೊಡಲೂ ಸಿದ್ಧರಾಗಿರಬೇಕು ಎಂದು ಬೈಂದೂರು ಯಳಜಿತ್‌ನ ಶ್ರೀ ರಾಮಕೃಷ್ಣಾಶ್ರಮದ ಶ್ರೀ ಸತ್ಯಸ್ವರೂಪಾನಂದ ಸ್ವಾಮೀಜಿ ಹೇಳಿದರು.

    Click Here

    Call us

    Click Here

    ಹಿಂದು ಸಂಗಮ ಆಯೋಜನ ಸಮಿತಿ ಗಂಗೊಳ್ಳಿ ಮಂಡಲ ಇದರ ವತಿಯಿಂದ ಗಂಗೊಳ್ಳಿಯ ಶ್ರೀ ವೀರೇಶ್ವರ ದೇವಸ್ಥಾನದ ವಠಾರದಲ್ಲಿ ಭಾನುವಾರ ಆಯೋಜಿಸಲಾಗಿದ್ದ ಹಿಂದು ಸಂಗಮ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿ ಮಾತನಾಡಿದರು.

    ಹಿಂದು ಧರ್ಮ ಉಳಿಸಿಕೊಳ್ಳಲು ಕಾರ್ಯಪ್ರವೃತರಾಗದೆ, ಪಾಶ್ಚಾತ್ಯ ಸಂಸ್ಕೃತಿಗೆ ಮೊರೆ ಹೋಗಿ ಆ ದಿಸೆಯಲ್ಲಿ ಮುಂದುವರಿದರೆ ಮೂರೇ ತಲೆಮಾರಿನಲ್ಲಿ ಈ ಧರ್ಮ ನಶಿಸಿಹೋಗುತ್ತದೆ ಎಂದು ಸ್ವಾಮಿ ವಿವೇಕಾನಂದರೂ ಎಚ್ಚರಿಸಿದ್ದರು. ನಿಮ್ಮ ಮಕ್ಕಳನ್ನು ಪುನ: ದಾಸ್ಯಕ್ಕೆ ಬಲಿಕೊಡುತ್ತೀರಾ ಅಥವಾ ಹಿಂದು ಧರ್ಮ, ಸಂಸ್ಕೃತಿಗಾಗಿ ಹೋರಾಡುತ್ತೀರಾ? ಎಂದು ಹೇಳಿದ ಅವರು ಸಮಾಜದಲ್ಲಿ ನಮ್ಮ ನಮ್ಮ ಮಕ್ಕಳಿಗೆ ನಮ್ಮ ಸಂಸ್ಕೃತಿಯನ್ನು ಹೇಳಿಕೊಡಬೇಕು. ನಮ್ಮ ಸಂಸ್ಕೃತಿ, ನಮ್ಮ ಧರ್ಮವನ್ನು ಮುಂದಿನ ಪೀಳಿಗೆಗೆ ಮುಟ್ಟಿಸಬೇಕು. ಅಹಿಂಸೆಯಿಂದ ನಮ್ಮ ಧರ್ಮ, ಸಂಸ್ಕೃತಿಯನ್ನು ಉಳಿಸಿಕೊಳ್ಳಲು ಕಾರ್ಯಪ್ರವೃತ್ತರಾಗಬೇಕು. ಇಲ್ಲದಿದ್ದರೆ ಮುಂದೊಂದು ದಿನ ನಿಮ್ಮ ಮಕ್ಕಳೇ ದಾಸ್ಯಕ್ಕೆ ಬಲಿಯಾಗುತ್ತಾರೆ. ನಮ್ಮ ಧರ್ಮದ ಬೇರುಗಳು ಗಟ್ಟಿಯಾಗುತ್ತಾ ಹೋದರೆ ಸಮಸ್ಯೆಗಳೇ ಇರುವುದಿಲ್ಲ ಎಂದು ನುಡಿದರು.

    ವಾಗ್ಮಿ ಪ್ರಶಾಂತ ಅರೆಶಿರೂರು ಬೌದ್ಧಿಕ್ ನೀಡಿದರು. ಹಿಂದು ಸಂಗಮ ಆಯೋಜನ ತಾಲೂಕು ಸಮಿತಿ ಅಧ್ಯಕ್ಷ ಸುಬ್ರಹ್ಮಣ್ಯ ಶೆಟ್ಟಿ, ತಾಲೂಕು ಸಮಿತಿ ಉಪಾಧ್ಯಕ್ಷ ಗೋಪಾಲ ಬೀಜಾಡಿ, ಶ್ರೀ ವೀರೇಶ್ವರ ದೇವಸ್ಥಾನದ ಪ್ರಧಾನ ಅರ್ಚಕ ರವೀಶ್ ಭಟ್ ಮತ್ತು ಸ್ವಯಂಸೇವಿಕಾ ಸಮಿತಿ ಸದಸ್ಯೆ ಸವಿತಾ ಯು. ದೇವಾಡಿಗ ಉಪಸ್ಥಿತರಿದ್ದರು.

    ಹಿಂದು ಸಂಗಮ ಆಯೋಜನ ಸಮಿತಿ ಗಂಗೊಳ್ಳಿ ಮಂಡಲ ಅಧ್ಯಕ್ಷ ಗೋವಿಂದ್ರಾಯ ಶೇರುಗಾರ್ ಸ್ವಾಗತಿಸಿ, ಪ್ರಾಸ್ತಾವಿಕ ಮಾತುಗಳನ್ನಾಡಿದರು. ಉಪನ್ಯಾಸಕ ನರೇಂದ್ರ ಎಸ್. ಗಂಗೊಳ್ಳಿ ಕಾರ್ಯಕ್ರಮ ನಿರ್ವಹಿಸಿದರು. ಕಾರ್ಯಕ್ರಮಕ್ಕೂ ಮುನ್ನ ಗಂಗೊಳ್ಳಿ ಶ್ರೀ ರಾಮ ಮಂದಿರ ಬಳಿಯಿಂದ ಶ್ರೀ ವೀರೇಶ್ವರ ದೇವಸ್ಥಾನದವರೆಗೆ ಬೃಹತ್ ಶೋಭಾಯಾತ್ರೆ ನಡೆಯಿತು.

    Click here

    Click here

    Click here

    Click Here

    Call us

    Call us

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ

    21/05/2026

    ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು

    21/05/2026

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026
    Leave A Reply Cancel Reply

    eleven + three =

    Call us

    Click Here

    Call us

    Call us

    Call us
    Highest Viewed Recently
    • ಕಾಳಾವರ ವರದರಾಜ ಎಂ. ಶೆಟ್ಟಿ ಸ.ಪ್ರ.ದ ಕಾಲೇಜಿನಲ್ಲಿ ಪ್ರತಿಭಾ ದಿನಾಚರಣೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ
    • ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ
    • ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ
    • ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.