ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಚಿನ್ನ ಖರೀದಿಸುವ ನೆಪದಲ್ಲಿ ಅಂಗಡಿಯಿಂದ ಚಿನ್ನದ ಸರ ಎಗರಿಸಿದ್ದ ಆರೋಪಿಯನ್ನು ಬಂಧಿಸುವಲ್ಲಿ ಕುಂದಾಪುರ ಪೊಲೀಸರು ಯಶಸ್ವಿಯಾಗಿದ್ದಾರೆ.
ಅಂಗಡಿ ಸಿಬ್ಬಂದಿಗಳ ಕಣ್ಣು ತಪ್ಪಿಸಿ ಸುಮಾರು 09 ಗ್ರಾಮ ಮೌಲ್ಯದ 1,25,000 ರೂ ಬೆಲೆ ಬಾಳುವ ಚಿನ್ನದ ಸರವನ್ನು ಕಳವುಗೈದ ಆರೋಪಿ ರಮೇಶ (42) ಎಂಬಾತನ್ನು ಪೊಲೀಸರು ಬಂಧಿಸಿದ್ದಾರೆ. ಆತನಿಂದ ಕಳ್ಳತನ ಮಾಡಿದ ಚಿನ್ನದ ಚೈನ್ ಮತ್ತು ಆತನ ವಶದಲ್ಲಿದ್ದ ರೂಪಾಯಿ 33,000/- ಹಣವನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ಆರೋಪಿತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ಆರೋಪಿತನಿಗೆ ನ್ಯಾಯಾಂಗ ಬಂಧನ ವಿಧಿಸಿರುತ್ತದೆ.
ನಗರದ ಶಾಸ್ತ್ರೀಸರ್ಕಲ್ ಬಳಿಯ ಇರುವ ಎಸ್.ಪಿ.ಜಿ ಗೋಲ್ಡ್ & ಡೈಮಂಡ್ ಅಂಗಡಿಗೆ ಬಂದು ಚಿನ್ನವನ್ನು ತೆಗೆದುಕೊಳ್ಳುವ ನೆಪದಲ್ಲಿ ಅಂಗಡಿಯ ಕೆಲಸದವರಿಂದ ಚಿನ್ನದ ಸರವನ್ನು ನೋಡಿ ಅವರ ಕಣ್ಣು ತಪ್ಪಿಸಿ ಸುಮಾರು 09 ಗ್ರಾಮ ಮೌಲ್ಯದ 125000 ರೂ ಬೆಲೆ ಬಾಳುವ ಚಿನ್ನದ ಸರವನ್ನು ಕಳವುಗೈದಿದ್ದ.
ಕುಂದಾಪುರ ಪೊಲೀಸ್ ಠಾಣಾ ನಿರೀಕ್ಷಕರಾದ ಜಯರಾಮ್ ಡಿ. ಗೌಡ ಸಾರಥ್ಯದಲ್ಲಿ, ಠಾಣಾ ಪಿಎಸ್ಐ ನಂಜಾನಾಯ್ಕ್ ಎನ್ (ಕಾ&ಸು) , ಪುಷ್ಪ (ತನಿಖೆ) ಹಾಗೂ ಸಿಬ್ಬಂದಿಗಳಾದ ಸಂತೋಷ, ಮಹಾಬಲ ಶೆಟ್ಟಿಗಾರ, ಪ್ರೀನ್ಸ್, ಘನಶ್ಯಾಮ್, ಸಂತೋಷ ದೇವಾಡಿಗ, ಗೌತಮ, ಲೋಹಿತ್, ಚಂದ್ರಶೆಟ್ಟಿ ರವರ ತಂಡವು ಬಂಟ್ವಾಳ ತಾಲೂಕಿನ ಬಡಗ ಕಜೆಕಾರ್ ಗ್ರಾಮದ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ.










