ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯಕಾರಿಣಿ ಸಮಿತಿಗೆ ಖಾಲಿ ಇದ್ದ ಎರಡು ಸಮಿತಿ ಸದಸ್ಯರ ಹುದ್ದೆಗಳನ್ನು ಮಂಗಳವಾರ ಉಡುಪಿ ಪತ್ರಿಕಾ ಭವನದಲ್ಲಿ ನಡೆದ ಸಮಿತಿ ಸಭೆಯಲ್ಲಿ ಆಯ್ಕೆ ಮಾಡಲಾಯಿತು.
ಸಂಘದ ಅಧ್ಯಕ್ಷ ಸುಬ್ರಹ್ಮಣ್ಯ ಜಿ. ಕುರ್ಯ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸಮಿತಿ ಸದಸ್ಯರುಗಳಾಗಿ ಉಡುಪಿಯ ಅಜಿತ್ ಆರಾಡಿ ಹಾಗೂ ಬೈಂದೂರಿನ ಉದಯ ಶಂಕರ್ ಪಡಿಯಾರ್ ಅವರನ್ನು ಸರ್ವಾನುಮತಿಯಿಂದ ಆಯ್ಕೆ ಮಾಡಲಾಯಿತು.
ಈ ಸಂದರ್ಭದಲ್ಲಿ ಸಂಘದ ಪ್ರಧಾನ ಕಾರ್ಯದರ್ಶಿ ನಝೀರ್ ಪೊಲ್ಯ, ಕೋಶಾಧಿಕಾರಿ ಹರೀಶ್ ಕುಂದರ್, ರಾಜ್ಯ ಸಮಿತಿ ಸದಸ್ಯ ಅಸ್ಟೋ ಮೋಹನ್, ನಿಕಟಪೂರ್ವ ಅಧ್ಯಕ್ಷ ರಾಜೇಶ್ ಶೆಟ್ಟಿ ಅಲೆವೂರು ಮೊದಲಾದವರು ಉಪಸ್ಥಿತರಿದ್ದರು.










