ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಕರ್ನಾಟಕ ಸರ್ಕಾರ ಉಡುಪಿ ಜಿಲ್ಲಾ ಅಂಧತ್ವ ನಿವಾರಣಾ ವಿಭಾಗ ಉಡುಪಿ ಜಿಲ್ಲೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಪ್ರಾಥಮಿಕ ಆರೋಗ್ಯ ಕೇಂದ್ರ ಹಾಲಾಡಿ, ಗ್ರಾಮ ಪಂಚಾಯತ್ ಹಾಲಾಡಿ, ಜೆಸಿಐ ಹಾಲಾಡಿ- ವಾರಾಹಿ, ಪಾರ್ವತಿ ಮಹಾಬಲ ಶೆಟ್ಟಿ ಸ್ಮಾರಕ ಕಣ್ಣಿನ ಆಸ್ಪತ್ರೆ, ಶಿರೂರು-ಮುದ್ದುಮನೆ ಇವರ ಸಂಯುಕ್ತ ಆಶ್ರಯದಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರವು ಮಂಗಳವಾರದಂದು ಹಾಲಾಡಿಯ ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಯಿತು.

ಹಾಲಾಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಅಶೋಕ್ ಶೆಟ್ಟಿ ಚೋರಾಡಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಹಾಲಾಡಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಹೇಮಂತ್, ಶಿರೂರು ಮುದ್ದುಮನೆಯ ಪಾರ್ವತಿ ಮಹಾಬಲ ಶೆಟ್ಟಿ ಸ್ಮಾರಕ ಕಣ್ಣಿನ ಆಸ್ಪತ್ರೆಯ ನೇತ್ರ ತಜ್ಞ ಡಾ. ಮನೋಜ್ ಭಟ್, ಪಾರ್ವತಿ ಮಹಾಬಲ ಶೆಟ್ಟಿ ಸ್ಮಾರಕ ಕಣ್ಣಿನ ಆಸ್ಪತ್ರೆಯ ಸಂಚಾಲಕ ಯು. ಶಂಕರ ಶೆಟ್ಟಿ, ಗ್ರಾ.ಪಂ. ಸದಸ್ಯರಾದ ಜನಾರ್ಧನ ಹಾಲಾಡಿ, ಗುರುಪ್ರಸಾದ ಶೆಟ್ಟಿ, ಜೆಸಿಐ ಹಾಲಾಡಿ ಘಟಕದ ಅಧ್ಯಕ್ಷರಾದ ಪ್ರದೀಪ ಹಾಲಾಡಿ, ಲೇಡಿ ಜೆಸಿಐ ಅಧ್ಯಕ್ಷೆ ಅವಶ್ಯ ಶೆಟ್ಟಿ, ನಾಗೇಶ ಕಿಣಿ ಮತ್ತು ಜೆಸಿಐ ಸದಸ್ಯರು ಉಪಸ್ಥಿತರಿದ್ದರು.
78 ಜನ ನಾಗರಿಕರು ಶಿಬಿರದ ಪ್ರಯೋಜನ ಪಡೆದಿದ್ದು, 28 ಜನರಿಗೆ ವಿಶೇಷ ತಪಾಸಣೆ ಮತ್ತು 21 ಜನರಿಗೆ ಉಚಿತ ಶಸ್ತ್ರ ಚಿಕಿತ್ಸೆಗೆ ಆಯ್ಕೆ ಮಾಡಲಾಯಿತು.










