Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಹಟ್ಟಿಯಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಗೆ ರಾಷ್ಟ್ರಮಟ್ಟದ ಗ್ರೀನ್‌ ಸ್ಕೂಲ್ ಅವಾರ್ಡ್
    ಊರ್ಮನೆ ಸಮಾಚಾರ

    ಹಟ್ಟಿಯಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಗೆ ರಾಷ್ಟ್ರಮಟ್ಟದ ಗ್ರೀನ್‌ ಸ್ಕೂಲ್ ಅವಾರ್ಡ್

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಶುದ್ಧ ಪರಿಸರದಲ್ಲಿ ನಿರ್ಮಿತವಾದ ಹಟ್ಟಿಯಂಗಡಿಯ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯು ತನ್ನ ಪರಿಸರಸ್ನೇಹಿ ಕಾರ್ಯಗಳ ಮೂಲಕ ಸತತ ನಾಲ್ಕನೆಯ ಬಾರಿಗೆ ರಾಷ್ಟ್ರಮಟ್ಟದ ಪ್ರತಿಷ್ಠಿತ ಗ್ರೀನ್ ಸ್ಕೂಲ್ ಅವಾರ್ಡನ್ನು ತನ್ನದಾಗಿಸಿಕೊಂಡು, ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ಈ ಪ್ರಶಸ್ತಿಯನ್ನು ಪಡೆದ ಉಡುಪಿ ಜಿಲ್ಲೆಯ ಏಕೈಕ ಶಾಲೆ ಎಂಬ ಹಿರಿಮೆಗೆ ಪಾತ್ರವಾಯಿತು.

    Click Here

    Call us

    Click Here

    ವಿದ್ಯಾರ್ಥಿಗಳಲ್ಲಿ ಪರಿಸರ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಸೆಂಟರ್ ಫಾರ್ ಸೈನ್ಸ್ ಅಂಡ್ ಎನ್ವಿರಾನ್ಮೆಂಟ್ (ಸಿಎಸ್‌ಇ) ಈ ಪ್ರಶಸ್ತಿ ಪ್ರದಾನ ಕಾರ್ಯಕ್ರಮವನ್ನು ಆಯೋಜಿಸುತ್ತಾ ಬಂದಿದೆ. ಈ ಬಾರಿ 20,000 ಕ್ಕೂ ಹೆಚ್ಚು ಶಾಲೆಗಳು ಸ್ಪಧೆಯಲ್ಲಿ ಭಾಗವಹಿಸಿದ್ದವು. ಶುದ್ಧ ಗಾಳಿ, ಇಂಧನ, ಆಹಾರ, ಭೂಮಿ, ನೀರು, ತ್ಯಾಜ್ಯದ ವ್ಯವಸ್ಥಿತ ನಿರ್ವಹಣೆಯ ಮಾನದಂಡದಲ್ಲಿ ಈ ಪ್ರಶಸ್ತಿಯನ್ನು ನೀಡಲಾಗುತ್ತದೆ.

    ನವದೆಹಲಿಯಲ್ಲಿ ನಡೆದ ದಿ ಗ್ರೀನ್ ಸ್ಕೂಲ್ಸ್ ಕಾರ್ನಿವಲ್ 2026ರ ಕಾರ್ಯಕ್ರಮದಲ್ಲಿ ಶಾಲೆಯ ಶಿಕ್ಷಕಿಯರಾದ ಸಂಗೀತಾ ಕೆ.ಆರ್. ಹಾಗೂ ವಿದ್ಯಾ ಅಮೀನ್ ಅವರು ಪ್ರಶಸ್ತಿಯನ್ನು ಸ್ವೀಕರಿಸಿದರು. ವಿದ್ಯಾರ್ಥಿಗಳಾದ ವಿಹಾನ್ ಹಂಚಿನಾಳ, ಗೌರೀಶ್ ಬಸವರಾಜ, ರಾಹುಲ್ ಉಳ್ಳೂರು, ನೇಚರ್ ಇನ್ ಫ್ರೇಮ್ಸ್ ಹಾಗೂ ದಿ ಗ್ರೀನ್ ಪಿಚ್ ಸ್ಪರ್ಧೆಗಳಲ್ಲಿ ಭಾಗವಹಿಸಿ ಸೃಜನಶೀಲತೆಯನ್ನು ಪ್ರದರ್ಶಿಸಿದರು. 

    ಸೆಂಟರ್ ಫಾರ್ ಸೈನ್ಸ್ ಅಂಡ್ ಎನ್ವಿರಾನ್‌ಮೆಂಟ್ (ಸಿಎಸ್‌ಇ) ನ ಮಹಾ ನಿರ್ದೇಶಕರಾದ ಸುನೀತಾ ನರೇನ್ ಪ್ರಶಸ್ತಿಯನ್ನು ಹಸ್ತಾಂತರಿಸಿದರು.

    ಗ್ರೀನ್ ಸ್ಕೂಲ್ ಅವಾರ್ಡ್ ನಮ್ಮ ಸಂಸ್ಥೆಗೆ ತಂದ ಅತ್ಯುನ್ನತ ಗೌರವವಾಗಿದ್ದು, ನಮ್ಮ ಸಂಸ್ಥೆಯಲ್ಲಿರುವ ಸುಸಜ್ಜಿತ ವ್ಯವಸ್ಥೆಗಳೇ ಈ ಪ್ರಶಸ್ತಿ ಪಡೆಯುವಲ್ಲಿ ಪ್ರದಾನ ಪಾತ್ರ ವಹಿಸಿವೆ. ಸಮಾಜದಲ್ಲಿ ಮರಗಳ ನಾಶ ನಿರಂತರವಾಗಿ ಸಾಗುತ್ತಿದ್ದು, ಅರಣ್ಯ ಸಂರಕ್ಷಣೆಯ ಬಗ್ಗೆ ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸುವ ಕೆಲಸ ಶಾಲೆಗಳಲ್ಲಿ ನಿರಂತರವಾಗಿ ನಡೆಸಬೇಕಾಗಿದೆ. ವಿದ್ಯಾರ್ಥಿಗಳಿಗೆ ಸಸ್ಯ ಪ್ರೀತಿಯನ್ನು ಹುಟ್ಟಿಸುವ ಉದ್ದೇಶದಿಂದ ಕೈದೋಟವನ್ನು, ವಿವಿಧ ಸಸ್ಯಗಳಿಂದ ಕೂಡಿದ ವನಗಳನ್ನು ನಿರ್ಮಿಸಿದ್ದು, ಅಲ್ಲಿ ಬೆಳೆದಿರುವ ತರಕಾರಿಗಳನ್ನು, ಔಷಧೀಯ ವಸ್ತುಗಳನ್ನು ನಿತ್ಯದ ಅಡುಗೆಗೆ ಬಳಸಲಾಗುತ್ತಿದೆ. ಶೈಕ್ಷಣಿಕ ಚಟುವಟಿಕೆಗಳ ಪ್ರತಿ ಹಂತದಲ್ಲಿಯೂ ವಿದ್ಯಾರ್ಥಿಗಳಿಗೆ ಪರಿಸರ ಸಂರಕ್ಷಣೆಯ ಅಗತ್ಯತೆಯ ಕುರಿತಾಗಿ ಮಾಹಿತಿ ಒದಗಿಸಿ, ಅವರಲ್ಲಿ ಅರಿವು ಮೂಡಿಸಲಾಗುತ್ತಿದೆ – ಶರಣ ಕುಮಾರ ಶ್ರೀ ಸಿದ್ಧಿ ಶೈಕ್ಷಣಿಕ ಪ್ರತಿಷ್ಠಾನದ ಕಾರ್ಯದರ್ಶಿಗಳು ಹಾಗೂ  ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯ ಪ್ರಾಂಶುಪಾಲರು

    Click here

    Click here

    Click here

    Click Here

    Call us

    Call us

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು

    21/05/2026

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026

    ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    21/05/2026
    Leave A Reply Cancel Reply

    three × 2 =

    Call us

    Click Here

    Call us

    Call us

    Call us
    Highest Viewed Recently
    • ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.