ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೋಟ: ರಸ್ತೆ ದಾಟುತ್ತಿದ್ದ ಮಹಿಳೆಗೆ ಬೈಕ್ ಡಿಕ್ಕಿಯಾಗಿ ಗಂಭೀರ ಗಾಯಗೊಂಡ ಘಟನೆ ಕೋಟದಲ್ಲಿ ಸಂಭವಿಸಿದೆ. ಮಣೂರು ಬಾಳೆಬೆಟ್ಟು ನಿವಾಸಿ ಉಷಾ ಗಾಣಿಗ (53) ಗಂಭೀರ ಗಾಯಗೊಂಡವರು.
ಅವರು ಕೋಟ ಬಸ್ ನಿಲ್ದಾಣದ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆ ದಾಟಲು ನಿಂತಿದ್ದಾಗ ಕುಂದಾಪುರ ಕಡೆಯಿಂದ ಬ್ರಹ್ಮಾವರ ಕಡೆ ಸಂಚರಿಸುತ್ತಿದ್ದ ಬೈಕ್ ಚಾಲಕ ಅತೀ ವೇಗ ಹಾಗೂ ಅಜಾಗರೂಕತೆಯಿಂದ ಬೈಕ್ ಚಲಾಯಿಸಿ ಢಿಕ್ಕಿ ಹೊಡೆದಿದ್ದ ಪರಿಣಾಮ ಉಷಾ ಅವರು ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದಾರೆ.
ತಕ್ಷಣ ಅವರನ್ನು ಜೀವನ್ ಮಿತ್ರ ಆ್ಯಂಬುಲೆನ್ಸ್ ನಲ್ಲಿ ಕೋಟೇಶ್ವರ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಯಿತು.
ಈ ಬಗ್ಗೆ ಕೋಟ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.










