Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಮೊಗವೀರ ಯುವ ಸಂಘಟನೆ ಹೆಮ್ಮಾಡಿ ಘಟಕದ ನೂತನ ಪದಾಧಿಕಾರಿಗಳ ಪದಪ್ರದಾನ
    ಊರ್ಮನೆ ಸಮಾಚಾರ

    ಮೊಗವೀರ ಯುವ ಸಂಘಟನೆ ಹೆಮ್ಮಾಡಿ ಘಟಕದ ನೂತನ ಪದಾಧಿಕಾರಿಗಳ ಪದಪ್ರದಾನ

    Updated:09/02/2026No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಸಂಘಟನೆಯ ಮೂಲಕ ಸಮಾಜದ ಏಳ್ಗೆ ಸಾಧ್ಯವಿದೆ. ಸ್ವಾಭಿಮಾನವನ್ನು ಯಾರಿಗೂ ಒತ್ತೆ ಇಡುವುದು ಬೇಡ. ಹೋಬಳಿಗಳೊಂದಿಗೆ ಉತ್ತಮ ಬಾಂಧವ್ಯ ಇರಿಸಿಕೊಂಡು ಸಮಾಜದ ಸಾಮಾಜಿಕ, ಶೈಕ್ಷಣಿಕ ಪ್ರಗತಿಯಲ್ಲಿ ಸಹಭಾಗಿಗಳೋಣ. ಯುವ ಸಂಘಟನಾ ಶಕ್ತಿಯ ಮೂಲಕ ಮತ್ತೊಮ್ಮೆ ಹೆಮ್ಮಾಡಿ ಘಟಕ ಬಲಿಷ್ಠ ಘಟಕವಾಗಿ ಮೂಡಿಬರಲಿ ಎಂದು ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ ಪ್ರವರ್ತಕರಾದ ನಾಡೋಜ ಡಾ. ಜಿ. ಶಂಕರ್ ಹೇಳಿದರು.

    ಅವರು ಹೆಮ್ಮಾಡಿ ಮೀನುಗಾರರ ಪ್ರಾಥಮಿಕ ಮೀನುಗಾರರ ಸಹಕಾರ ಸಂಘದ ಮತ್ಸ್ಯಜ್ಯೋತಿ ಸಭಾಂಗಣದಲ್ಲಿ ನಡೆದ ಮೊಗವೀರ ಯುವ ಸಂಘಟನೆ ಉಡುಪಿ ಜಿಲ್ಲೆ, ಹೆಮ್ಮಾಡಿ ಘಟಕದ ವಾರ್ಷಿಕ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ಪದಪ್ರದಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಮಾರ್ಚ್ 1ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ನಿರ್ಮಾಣದ ಸಲುವಾಗಿ ಸಾಮೂಹಿಕ ಗುರು ಪಾದ ಕಾಣಿಕೆ ಸಮರ್ಪಣಾ ಕಾರ್ಯಕ್ರಮ ನಡೆಯಲಿದೆ. ಅದರಲ್ಲಿ ತಾವೆಲ್ಲರೂ ಪಾಲ್ಗೊಳ್ಳುವ ಮೂಲಕ ಸಮಾಜದ ಒಗ್ಗಟ್ಟನ್ನು ಬಿಂಬಿಸಬೇಕು. ಅದೇ ರೀತಿ ಬಗ್ವಾಡಿಯಲ್ಲೂ ಕೂಡಾ ಗುರುಪೀಠ ಸ್ಥಾಪನೆ ಮಾಡಲಾಗುವುದು ಎಂದರು.

    Click Here

    Call us

    Click Here

    ಮೊಗವೀರ ಯುವ ಸಂಘಟನೆಯ ನಿಕಟಪೂರ್ವ ಅಧ್ಯಕ್ಷ  ದಿನೇಶ ಬಿ. ಕಾಂಚನ್ ಬಾಳಿಕೆರೆ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಪ್ರವೀಣ ಮೊಗವೀರ ಗಂಗೊಳ್ಳಿ, ನೂತನ ಕಾರ್ಯದರ್ಶಿ ಜಯಂತ್ ಕುಂದರ್ ಬಾಳಿಕೆರೆ, ನೂತನ ಕೋಶಾಧಿಕಾರಿ ಸಂತೋಷ್ ಆರ್. ಮೊಗವೀರ ಸುಳ್ಸೆ ಅವರಿಗೆ ಅಧಿಕಾರ ಹಸ್ತಾಂತರಿಸಲಾಯಿತು.

    ಮೊಗವೀರ ಯುವ ಸಂಘಟನೆ ಉಡುಪಿ ಜಿಲ್ಲಾ ಅಧ್ಯಕ್ಷ ಜಯಂತ್ ಅಮೀನ್ ಕೋಡಿ ನೂತನ ಪದಾಧಿಕಾರಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ಮೊಗವೀರ ಮಹಾಜನ ಸೇವಾ ಸಂಘ ರಿ., ಬಗ್ವಾಡಿ  ಹೋಬಳಿ ಮುಂಬಯಿ-ಕುಂದಾಪುರ ಶಾಖೆ ಅಧ್ಯಕ್ಷ ಉದಯಕುಮಾರ್ ಹಟ್ಟಿಯಂಗಡಿ, ಜಿಲ್ಲಾ ಸಂಘಟನೆ ಕಾರ್ಯದರ್ಶಿ ರವೀಂದ್ರ ಪುತ್ರನ್, ಮೊಗವೀರ ಯುವ ಸಂಘಟನೆ ಉಡುಪಿ ಜಿಲ್ಲಾ ಘಟಕದ ನಿಕಟಪೂರ್ವ ಅಧ್ಯಕ್ಷ ರಾಜೇಂದ್ರ ಸುವರ್ಣ ಹಿರಿಯಡ್ಕ, ಮಾಜಿ ಅಧ್ಯಕ್ಷ ಸದಾನಂದ ಬಳ್ಕೂರು,ಜಿಲ್ಲಾ ಸಂಘಟನೆಯ ನಿಯೋಜಿತ ಅಧ್ಯಕ್ಷ ರವೀಶ ಕೊರವಡಿ, ನಿಯೋಜಿತ ಪ್ರಧಾನ ಕಾರ್ಯದರ್ಶಿ ಶೇಖರ ತೋಳಾರ್, ಕಟ್ ಬೇಲ್ತೂರು ಗ್ರಾ.ಪಂ ಮಾಜಿ ಅಧ್ಯಕ್ಷ ನಾಗರಾಜ ಪುತ್ರನ್ ಉಪಸ್ಥಿತರಿದ್ದರು.

    ಈ ಸಂದರ್ಭದಲ್ಲಿ  ಜಿಲ್ಲಾ ಘಟಕದ ಅಧ್ಯಕ್ಷ ಜಯಂತ್ ಅಮೀನ್ ಕೋಡಿ, ಕಾರ್ಯದರ್ಶಿ ರವೀಂದ್ರ ಪುತ್ರನ್ ಹಾಗೂ ಹೆಮ್ಮಾಡಿ ಘಟಕದ ನಿಕಟಪೂರ್ವ ಅಧ್ಯಕ್ಷ ದಿನೇಶ ಕಾಂಚನ್, ಕಾರ್ಯದರ್ಶಿ ಜಗದೀಶ ಎಮ್. ನೆಂಪು, ಕೋಶಾಧಿಕಾರಿ ವಿಜಯ ಪಿ. ಕಾಂಚನ್ ನಾಡ ಅವರನ್ನು ಸನ್ಮಾನಿಸಲಾಯಿತು.

    ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಪ್ರವೀಣ ಮೊಗವೀರ ಗಂಗೊಳ್ಳಿ ಅವರು ಮಾತನಾಡಿ, ನಾಡೋಜ ಜಿ. ಶಂಕರ್ ಮಾರ್ಗದರ್ಶನದಲ್ಲಿ  ಸಂಘಟನೆಯನ್ನು ಬಲಗೊಳಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸುತ್ತೇವೆ. ಮುಂದೆಯೂ ಕೂಡಾ ಸಮಾಜಬಾಂಧವರು ಸಹಕಾರ ನೀಡಿ ಸಂಘಟನೆ ಬಲಿಷ್ಠಗೊಳಿಸುವಲ್ಲಿ ಪ್ರೋತ್ಸಾಹಿಸಬೇಕು ಎಂದರು.

    ಭಾಸ್ಕರ ಬಟ್ಟೆಕುದ್ರು ಪ್ರಾರ್ಥನೆಗೈದರು. ಮೊಗವೀರ ಮಹಾಜನ ಸೇವಾ ಸಂಘ ರಿ., ಬಗ್ವಾಡಿ ಹೋಬಳಿ ಕುಂದಾಪುರ ಶಾಖೆಯ ಕಾರ್ಯದರ್ಶಿ ಪ್ರಭಾಕರ ಸೇನಾಪುರ ಸ್ವಾಗತಿಸಿದರು. ಹೆಮ್ಮಾಡಿ ಘಟಕದ ಸ್ಥಾಪಕಧ್ಯಕ್ಷ ಉದಯ ಕುಮಾರ್ ಹಟ್ಟಿಯಂಗಡಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಕಾರ್ಯದರ್ಶಿ ಜಗದೀಶ ಎಮ್.ನೆಂಪು ವರದಿ ಮಂಡಿಸಿದರು. ಕೋಶಾಧಿಕಾರಿ ವಿಜಯ ಪಿ. ಕಾಂಚನ್ ನಾಡ ಲೆಕ್ಕಪತ್ರ ಮಂಡಿಸಿದರು. ಹೆಮ್ಮಾಡಿ ಘಟಕದ ಗೌರವಾಧ್ಯಕ್ಷ ಲೋಹಿತಾಶ್ವ ಆರ್. ಕುಂದರ್ ಕಾರ್ಯಕ್ರಮ ನಿರ್ವಹಿಸಿ, ವಂದಿಸಿದರು. ಕಾರ್ಯಕ್ರಮ ಪೂರ್ವದಲ್ಲಿ ಸುಶಾಂತ್ ಉಪ್ಪಿನಕುದ್ರು ಹಾಗೂ ಶ್ರೇಯ ಕಂಚುಗೋಡು ಅವರಿಂದ ಸಂಗೀತ ಕಾರ್ಯಕ್ರಮ ನಡೆಯಿತು.

    Click here

    Click here

    Click here

    Click Here

    Call us

    Call us

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು

    21/05/2026

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026

    ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    21/05/2026
    Leave A Reply Cancel Reply

    fifteen − 14 =

    Call us

    Click Here

    Call us

    Call us

    Call us
    Highest Viewed Recently
    • ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.