Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕೇಂದ್ರ ಪ್ರವಾಸೋದ್ಯಮ ಇಲಾಖೆಯಿಂದ ಜಾಗತಿಕ ಮಟ್ಟದಲ್ಲಿ ಜಿಲ್ಲೆಯ ಪ್ರವಾಸಿ ತಾಣಗಳ ಅಭಿವೃದ್ಧಿ: ಸಂಸದ ಕೋಟ
    ಉಡುಪಿ ಜಿಲ್ಲೆ

    ಕೇಂದ್ರ ಪ್ರವಾಸೋದ್ಯಮ ಇಲಾಖೆಯಿಂದ ಜಾಗತಿಕ ಮಟ್ಟದಲ್ಲಿ ಜಿಲ್ಲೆಯ ಪ್ರವಾಸಿ ತಾಣಗಳ ಅಭಿವೃದ್ಧಿ: ಸಂಸದ ಕೋಟ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಉಡುಪಿ:
    ದೇಶದಲ್ಲಿ ಸುಸ್ಥಿರ ಹಾಗೂ ಜವಾಬ್ದಾರಿಯುತ ಪ್ರವಾಸೋದ್ಯಮ ಅಭಿವೃದ್ಧಿ ಪಡಿಸುವ ಉದ್ದೇಶದಿಂದ ಕೇಂದ್ರ ಪ್ರವಾಸೋದ್ಯಮ ಇಲಾಖೆಯು ಜಾಗತಿಕ ಮಟ್ಟದಲ್ಲಿ 50 ಕ್ಕೂ ಹೆಚ್ಚು ಪ್ರವಾಸಿ ತಾಣಗಳನ್ನು ಅಭಿವೃದ್ಧಿ ಪಡಿಸಲು ಮುಂದಾಗಿದೆ ಎಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

    Click Here

    Call us

    Click Here

    ಅವರು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕೇಂದ್ರ ಸರ್ಕಾರದ ಜಾಗತಿಕ ಪ್ರವಾಸೋದ್ಯಮ ತಾಣ ಯೋಜನೆಯ ಅನುಷ್ಠಾನ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪ್ರವಾಸೋದ್ಯಮ ಕ್ಷೇತ್ರದಲ್ಲಿ ಸುಸ್ಥಿರತೆಯನ್ನು ಮುನ್ನೆಲೆಗೆ ತರುವುದು ಮತ್ತು ನೈಸರ್ಗಿಕ, ಸಾಂಸ್ಕೃತಿಕ ಸಂಪನ್ಮೂಲಗಳನ್ನು ರಕ್ಷಿಸುವುದರೊಂದಿಗೆ ಪರಿಸರ ಸ್ನೇಹಿಯಾಗಿ ಪ್ರವಾಸೋದ್ಯಮ ತಾಣಗಳನ್ನು ಅಭಿವೃದ್ಧಿ ಪಡಿಸುವುದರ ಮೂಲಕ ಪ್ರವಾಸಿಗರನ್ನು ಆಕರ್ಷಿಸುವುದು ಹಾಗೂ ಮೂಲ ಸೌಕರ್ಯಗಳ ಅಭಿವೃದ್ಧಿಗೆ ವಿಶೇಷ ಗಮನ ಹರಿಸುವ ಗುರಿಯೊಂದಿಗೆ ಡೆಸ್ಟಿನೇಷನ್ ಡೆವಲಪ್‌ಮೆಂಟ್ ಸ್ಕೀಮ್ ಅನ್ನು ಜಾರಿಗೆ ತಂದಿದೆ ಎಂದರು.

    ಜಿಲ್ಲೆಯಲ್ಲಿ ಈ ಯೋಜನೆಗೆ ಕೋಡಿ- ಕನ್ಯಾನ, ಕೋಡಿ ಕುಂದಾಪುರ, ಬಾರ್ಕೂರು ಪೋರ್ಟ್ ಪ್ರದೇಶ ಹಾಗೂ ತ್ರಾಸಿ-ಮರವಂತೆ ಪ್ರವಾಸಿ ತಾಣಗಳನ್ನು ಗುರುತಿಸಲಾಗಿದೆ. ಈ ಯೋಜನೆಗಳಲ್ಲಿ ನವೀಕರಿಸಬಹುದಾದದ ಇಂಧನಗಳ ಬಳಕೆ, ಮೂಲ ಸೌಕರ್ಯ ಹಾಗೂ ಪ್ರವಾಸಿಗರಿಗೆ ಜಾಗತಿಕ ಅಭಿಯಾನಗಳು ಸೇರಿ, ಜಾಗತಿಕ ಮಾನದಂಡಗಳಿಗೆ ಅನುಗುಣವಾಗಿ ಜಿಲ್ಲೆಯ ಒಂದು ಪ್ರವಾಸಿ ತಾಣವನ್ನು ಆಯ್ಕೆಮಾಡಿ ಅಭಿವೃದ್ಧಿಪಡಿಸಲಾಗುವುದು ಎಂದರು.

    ಕೇಂದ್ರ ಸರ್ಕಾರ ಈ ಯೋಜನೆಯನ್ನು ಅನುಷ್ಠಾನಗೊಳಿಸಲು 300 ಕೋಟಿ ಅನುದಾನ ನೀಡಲಿದೆ ಎಂದ ಅವರು, ಈ ಪ್ರವಾಸಿ ತಾಣದ ಅಭಿವೃದ್ಧಿಗೆ ಖಾಸಗಿ ಸಹಭಾಗಿತ್ವದ ಭಾಗವಹಿಸುವಿಕೆಯನ್ನು ಉತ್ತೇಜಿಸಲಾಗುವುದು, ಇದಕ್ಕೆ ಅಗತ್ಯವಿರುವ ಭೂಮಿಯನ್ನೂ ಸಹ ಒದಗಿಸುವುದು ಅಗತ್ಯವಿದೆ ಎಂದರು.

    ಐ.ಪಿ.ಇ ಗ್ಲೋಬಲ್‌ನ ಹೇಮಲತಾ, ಜಿಲ್ಲೆಯಲ್ಲಿ ನ್ಯಾಷನಲ್ ಮಿಷನ್ ಫಾರ್ ಡೆವಲಪಿಂಗ್ 50 ಗ್ಲೋಬಲಿ ಕಾಂಪಿಟೇಟಿವ್ ಟೂರಿಸಂ ಡೆಸ್ಟಿನೇಷನ್ಸ್ ಅನ್ನು ಅಭಿವೃದ್ಧಿಪಡಿಸಿರುವ ಸ್ಥಳಗಳನ್ನು ಪಿ.ಪಿ.ಟಿ. ಮೂಲಕ ಪ್ರದರ್ಶಿಸಿ, ಸವಿವರವಾಗಿ ಪ್ರಸ್ತುತಪಡಿಸಿದರು.

    Click here

    Click here

    Click here

    Click Here

    Call us

    Call us

    ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಮಾತನಾಡಿ, ಉಡುಪಿ ಜಿಲ್ಲೆಯು 93ಕಿ.ಮೀ ಉದ್ದದ ಕರಾವಳಿ ತೀರ, ಪಶ್ಚಿಮ ಘಟ್ಟಗಳ ಪ್ರಕೃತಿ ಸೌಂದರ್ಯ, ಹಳ್ಳ, ಕೊಳ್ಳ, ಹೊಳೆಗಳನ್ನು ಹೊಂದಿ ಪ್ರವಾಸಿಗರನ್ನು ಹೆಚ್ಚು ಆಕರ್ಷಿತವಾಗಿ ಮಾಡಿದೆ ಎಂದರು.

    ಸಭೆಯಲ್ಲಿ ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕಿ ವಿಂಧ್ಯಾ ಎನ್.ಎಂ, ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    21/05/2026

    ಜೂ.1 ರಿಂದ 61 ದಿನಗಳ ಕಾಲ ಯಾಂತ್ರೀಕೃತ ಮೀನುಗಾರಿಕೆ ನಿಷೇಧ

    21/05/2026

    ಉಡುಪಿ: ಮಹಾತ್ಮ ಗಾಂಧಿ ಮೆಮೋರಿಯಲ್‌ ಸಂಧ್ಯಾ ಕಾಲೇಜಿನಲ್ಲಿ ವಿದ್ಯಾರ್ಥಿ ಕ್ಷೇಮಪಾಲನಾ ಮಂಡಳಿ ದಿನಾಚರಣೆ

    20/05/2026
    Leave A Reply Cancel Reply

    1 × one =

    Call us

    Click Here

    Call us

    Call us

    Call us
    Highest Viewed Recently
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ
    • ಜೂ.1 ರಿಂದ 61 ದಿನಗಳ ಕಾಲ ಯಾಂತ್ರೀಕೃತ ಮೀನುಗಾರಿಕೆ ನಿಷೇಧ
    • ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.