ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇಲ್ಲಿನ ಆರ್. ಎನ್.ಶೆಟ್ಟಿ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಪ್ರಥಮ ಪಿ.ಯು.ಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಗಾರ್ಗಿದೇವಿ ರಾಜ್ಯಮಟ್ಟದ ಪ್ರತಿಭಾ ಕಾರಂಜಿ ಭರತನಾಟ್ಯ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದಿರುತ್ತಾರೆ.
ಭರತನಾಟ್ಯ ಪ್ರವೀಣೆ ವಿದ್ಯಾರ್ಥಿನಿ ಗಾರ್ಗಿದೇವಿಯ ಈ ಅಮೋಘ ಸಾಧನೆಯನ್ನು ಶ್ಲಾಘಿಸಿ, ಕಾಲೇಜಿನ ಸಂಚಾಲಕರಾದ ಬಿ. ಎಂ. ಸುಕುಮಾರ್ ಶೆಟ್ಟಿ, ಕಾರ್ಯದರ್ಶಿ, ಆಡಳಿತ ಮಂಡಳಿ ಸದಸ್ಯರು, ಪ್ರಾಂಶುಪಾಲರು ಹಾಗೂ ಬೋಧಕ-ಬೋಧಕೇತರ ಸಿಬ್ಬಂಧಿಗಳು ಅಭಿನಂದನೆಗಳನ್ನು ಸಲ್ಲಿಸಿರುತ್ತಾರೆ.










