ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಕರ್ನಾಟಕ ರಾಜ್ಯ ಕಾರ್ಮಿಕ ಪರಿಷತ್ ವತಿಯಿಂದ ನೀಡಲಾಗುವ ಪ್ರತಿಷ್ಠಿತ “ಯುವ ವಿಭೂಷಣ” ರಾಜ್ಯ ಮಟ್ಟದ ಪ್ರಶಸ್ತಿಗೆ ಬೈಂದೂರು ಭಾಗದ ಸಮಾಜಮುಖಿ ಮತ್ತು ಧಾರ್ಮಿಕ ಮುಖಂಡರಾದ ಪ್ರದೀಪ್ ಶೆಟ್ಟಿ ಕಾರಿಕಟ್ಟೆ ಅವರು ಭಾಜನರಾಗಿದ್ದಾರೆ.
ಬೆಂಗಳೂರಿನ ರಾಜಾಜಿನಗರದಲ್ಲಿ ಶನಿವಾರದಂದು ನಡೆದ ಈ ಪ್ರಶಸ್ತಿ ಪ್ರದಾನ ಸಮಾರಂಭವು ಸಾಧನೆ ಮತ್ತು ಸಂಸ್ಕೃತಿಗೆ ಸಂದ ಗೌರವವಾಗಿದೆ. ಬೈಂದೂರು ಭಾಗದಲ್ಲಿ ತಮ್ಮದೇ ಆದ ಜನಪ್ರಿಯತೆ ಹಾಗೂ ಛಾಪನ್ನು ಮೂಡಿಸಿರುವ ಪ್ರದೀಪ್ ಶೆಟ್ಟಿ ಅವರ ಸಮಾಜಮುಖಿ ಸಾಧನೆಯನ್ನು ಗುರುತಿಸಿ, ಕರ್ನಾಟಕ ರಾಜ್ಯ ಕಾರ್ಮಿಕ ಪರಿಷತ್ತಿನ ರಾಜ್ಯಾಧ್ಯಕ್ಷರಾದ ಡಾ. ರವಿ ಶೆಟ್ಟಿ ಬೈಂದೂರು ಅವರು ಈ ಪ್ರಶಸ್ತಿಯನ್ನು ಘೋಷಿಸಿ ಗೌರವಿಸಿದರು.
ಕಾರ್ಯಕ್ರಮದಲ್ಲಿ ಜಯ ಕರ್ನಾಟಕ ಸಂಘಟನೆಯ ಮುಖಂಡರಾದ ಗುಣರಂಜನ್ ಶೆಟ್ಟಿ, ಜೈ ಕರ್ನಾಟಕ ಸಂಸ್ಥೆಯ ಕಾರ್ಯದರ್ಶಿ ಪ್ರವೀಣ್ ಕುಮಾರ್ ಶೆಟ್ಟಿ, ಕರ್ನಾಟಕ ರಾಜ್ಯ ಕಾರ್ಮಿಕ ಪರಿಷತ್ತಿನ ಮಹಿಳಾ ಘಟಕದ ಅಧ್ಯಕ್ಷರಾದ ಪೂಜಾ ಶೆಟ್ಟಿ, ಶೈಲೇಶ್ ಪೂಜಾರಿ ಹಾಗೂ ಪರಿಷತ್ತಿನ ಎಲ್ಲಾ ಪದಾಧಿಕಾರಿಗಳು ಮತ್ತು ಗಣ್ಯರು ಉಪಸ್ಥಿತರಿದ್ದರು.










