Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಯಕ್ಷಕಲಾವಿದ ಗೋಪಾಲ ಆಚಾರ್‌ಗೆ ಯಕ್ಷರತ್ನ ಮೊಳಹಳ್ಳಿ ಹೆರಿಯ ನಾಯ್ಕ ಇಂಡಿಕಾ ಪುರಸ್ಕಾರ ಪ್ರದಾನ
    ಊರ್ಮನೆ ಸಮಾಚಾರ

    ಯಕ್ಷಕಲಾವಿದ ಗೋಪಾಲ ಆಚಾರ್‌ಗೆ ಯಕ್ಷರತ್ನ ಮೊಳಹಳ್ಳಿ ಹೆರಿಯ ನಾಯ್ಕ ಇಂಡಿಕಾ ಪುರಸ್ಕಾರ ಪ್ರದಾನ

    No Comments
    Facebook Twitter Pinterest LinkedIn WhatsApp Reddit Tumblr Email
    ???????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕೋಟ:
    ಕರಾವಳಿ ಭಾಗದಲ್ಲಿ ಇಂಡಿಕಾ ಸಂಸ್ಥೆ ಜನಸಾಮಾನ್ಯರೊಂದಿಗೆ ಸ್ಪಂದಿಸುವ ಜತೆಗೆ ಸಾಂಸ್ಕೃತಿಕ ಕಲಾರಾಧನೆಗೆ ಹೆಚ್ಚಿನ ಒತ್ತು ನೀಡುತ್ತಿದೆ. ಇದು ಶ್ಲಾಘನೀಯ ಕಾರ್ಯವಾಗಿದೆ ಎಂದು ಮಾಜಿ ಸಚಿವ ಕೆ. ಜಯಪ್ರಕಾಶ್ ಹೆಗ್ಡೆ ಹೇಳಿದರು.

    Click Here

    Call us

    Click Here

    ಅವರು ಭಾನುವಾರ ಕೋಟದ ಮಣೂರು ಪಡುಕರೆ ಸಂಯುಕ್ತ ಪ್ರೌಢಶಾಲಾ ಗೀತಾನಂದ ರಂಗ ಮಂದಿರದಲ್ಲಿ ಇಂಡಿಕಾ ಕಲಾ ಬಳಗ ಮಣೂರು ಪಡುಕರೆ ಇದರ 16ನೇ ವರ್ಷದ ಇಂಡಿಕಾ ಸಂಭ್ರಮ-2026 ಯಕ್ಷರತ್ನ ಮೊಳಹಳ್ಳಿ ಹೆರಿಯ ನಾಯ್ಕ ಇಂಡಿಕಾ ಪುರಸ್ಕಾರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಸಂತೋಷ್ ಮೇಷ್ಟ್ರು  ಇಂಡಿಕಾ ಸಂಸ್ಥೆ ಹುಟ್ಟುಹಾಕಿದ ಸದಾ ಸಮಾಜದ ಬಗ್ಗೆ ತುಡಿತ ಹೊಂದಿದ್ದರು. ಅವರ ಅಕಾಲಿಕ ನಿಧನದ ನಂತರವು ಮುಂದುವೆರೆಸಿ ಅವರ ನೆನಪನ್ನು ಸದಾ ಕಾಲ ಉಳಿಯುವಂತೆ ಮಾಡಿರುವುದು ಅವರಿಗೆ ದೊಡ್ಡ ಗೌರವ ಸಲ್ಲಿಸಿದಂತೆ ಅಂತಯೇ ತೀರ್ಥಹಳ್ಳಿ ಗೋಪಾಲ್ ಆಚಾರ್ ಎನ್ನುವ ಹಿರಿಯಯಕ್ಷಕಲಾವಿದರನ್ನು ಗುರುತಿಸಿ ಪುರಸ್ಕಾರ ನೀಡಿದ್ದು ಅತ್ಯಂತ ಪ್ರಶಂಸನೀಯ ಕಾರ್ಯವಾಗಿದೆ ಎಂದರು.

    ಸಭೆಯ ಅಧ್ಯಕ್ಷತೆಯನ್ನು ಇಂಡಿಕಾ ಕಲಾ ಬಳಗದ ಅಧ್ಯಕ್ಷ ಎಂ. ಜಯರಾಮ ಶೆಟ್ಟಿ ವಹಿಸಿದ್ದರು. ಇದೇ ವೇಳೆ ಯಕ್ಷರತ್ನ ಹೆರಿಯ ನಾಯ್ಕ ಇಂಡಿಕಾ ಪುರಸ್ಕಾರವನ್ನು ಹಿರಿಯ ಯಕ್ಷಕಲಾವಿದ ತೀರ್ಥಹಳ್ಳಿ ಗೋಪಾಲ ಆಚಾರ್ ಅವರಿಗೆ ಗಣ್ಯರು ಪ್ರದಾನಿಸಿದರು.

    ವಿಶೇಷ ಅಭಿನಂದನೆಯ ಭಾಗವಾಗಿ ರಾಜ್ಯ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯಕ್ಷಕಲಾವಿದ ಕೋಟ ಸುರೇಶ್ ಬಂಗೇರ,ಮಕ್ಕಳ ತಜ್ಞ ಡಾ. ಸುಧಾಕರ್ ಹಂದೆ,ಸಾಧಕ ವಿದ್ಯಾರ್ಥಿಗಳಾದ ಪೂರ್ವಿ ಆರ್ ಎಸ್., ಶ್ರೀನಿಧಿ ಮರಕಾಲ ಇವರುಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು.

    ಇದೇ ವೇಳೆ ಅಶಕ್ತರಿಗೆ ನೆರವು ಗಣ್ಯರ ಸಮ್ಮುಖದಲ್ಲಿ ಹಸ್ತಾಂತರಿಸಲಾಯಿತು. ಕುಂದಾಪುರ ಪ್ರಸಿದ್ಧ ಮನೋವೈದ್ಯ ಡಾ. ಪ್ರಕಾಶ್ ಸಿ. ತೋಳಾರ್ ಅವರು ಆಶಯದ ನುಡಿಗಳನ್ನಾಡಿದರು. ಉದ್ಯಮಿ ಬಿಜು ನಾಯರ್ ಅಭಿನಂದನಾ ನುಡಿಗಳನ್ನಾಡಿದರು.

    Click here

    Click here

    Click here

    Click Here

    Call us

    Call us

    ಮುಖ್ಯ ಅಭ್ಯಾಗತರಾಗಿ ಉದ್ಯಮಿ ಮೊಳಹಳ್ಳಿ ದಿನೇಶ್ ಹೆಗ್ಡೆ, ಹಿರಿಯ ಕೃಷಿಕ ದಾರೋಜ್ಜಿಮನೆ ಆನಂದ ಮರಕಾಲ, ಸಾಮಾಜಿಕ ಕಾರ್ಯಕರ್ತರಾದ ದಿನೇಶ್ ಗಾಣಿಗ, ಪಂಚವರ್ಣದ ಸ್ಥಾಪಕಾಧ್ಯಕ್ಷ ಶೇವಧಿ ಸುರೇಶ್ ಗಾಣಿಗ, ಗೆಳೆಯರ ಬಳಗ ಇದರ ಅಧ್ಯಕ್ಷ ಕೆ.ತಾರಾನಾಥ ಹೊಳ್ಳ, ಮಾಜಿ ತಾ.ಪಂ ಅಧ್ಯಕ್ಷೆ ಜ್ಯೋತಿ ಉದಯ್ ಕುಮಾರ್, ಇಂಡಿಕಾ ಕಲಾ ಬಳಗದ ಪ್ರಮುಖರಾದ ನಾಗರಾಜ್ ಮಣೂರು ಉಪಸ್ಥಿತರಿದ್ದರು.

    ಇಂಡಿಕಾ ಬಳಗದ ಸಂಚಾಲಕ ಪ್ರಭಾಕರ್ ಪಡುಕರೆ ಸ್ವಾಗತಿಸಿದರು. ಸಂಸ್ಥೆಯ ಮಾರ್ಗದರ್ಶಕ ಟಿ. ಮಂಜುನಾಥ್ ಗಿಳಿಯಾರು ಪ್ರಾಸ್ತಾವಿಕ ನುಡಿಗಳನ್ನಾಡಿದರು.

    ಕಾರ್ಯಕ್ರಮವನ್ನು ಬಳಗದ ಸಂತೋಷ್ ಕಾಂಚನ್ ನಿರೂಪಿಸಿದರು. ಪತ್ರಕರ್ತ ರವೀಂದ್ರ ಕೋಟ ವಂದಿಸಿದರು.ಸಾಂಸ್ಕೃತಿಕ ಕಾರ್ಯಕ್ರಮದ ಭಾಗವಾಗಿ ಯಶಸ್ವಿ ಕಲಾವೃಂದ ಕೊಮೆ ಇವರಿಂದ ಗಾನ ವೈಭವ, ಸ್ಥಳೀಯ ಅಂಗನವಾಡಿ ಮಕ್ಕಳಿಂದ ನೃತ್ಯ ವೈವಿದ್ಯ, ಪಿಂಗಾರ್ ಕಲಾವಿದರು ಬೆದ್ರ ಅವರಿಂದ ಓಂಕಾರ ನಾಟಕ ಪ್ರದರ್ಶನಗೊಂಡಿತು.

    Kota
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026

    ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    21/05/2026

    ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ

    21/05/2026
    Leave A Reply Cancel Reply

    one × two =

    Call us

    Click Here

    Call us

    Call us

    Call us
    Highest Viewed Recently
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.