Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕಟ್‌ಬೇಲ್ತೂರಿನಲ್ಲಿ ರೈತರ ದಿನಾಚರಣೆ
    ಊರ್ಮನೆ ಸಮಾಚಾರ

    ಕಟ್‌ಬೇಲ್ತೂರಿನಲ್ಲಿ ರೈತರ ದಿನಾಚರಣೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪುರ: ತೆಂಗು ಬೆಳೆಗಾರರ ಫೆಡರೇಶನ್ ಕಟ್‌ಬೇಲ್ತೂರು, ರೋಟರಿ ಕ್ಲಬ್ ಕುಂದಾಪುರ, ಮಹಾವಿಷ್ಣು ಯುವಕ ಮಂಡಲ ಹರೆಗೋಡು ಕಟ್‌ಬೇಲ್ತೂರು ಹಾಗೂ ಶ್ರೀ ಜನನಿ ಸ್ವಸಹಾಯ ಸಂಘ ಹರೆಗೋಡು ಇವರ ಸಂಯುಕ್ತ ಆಶ್ರಯದಲ್ಲಿ ರೈತರ ದಿನಾಚರಣೆ ಕಾರ್ಯಕ್ರಮ ಕಟ್‌ಬೇಲ್ತೂರಿನ ಮಹಾವಿಷ್ಣು ಯುವಕ ಮಂಡಲದ ವಠಾರದಲ್ಲಿ ಜರಗಿತು.

    Click Here

    Call us

    Click Here

    ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕುಂದಾಪುರ ರೋಟರಿ ಕ್ಲಬ್‌ನ ಮಾಜಿ ಅಧ್ಯಕ್ಷ ಕೆ.ಆರ್.ನಾಯ್ಕ್, ಇತ್ತೀಚಿನ ದಿನಗಳಲ್ಲಿ ಜನರು ಕೃಷಿ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಹಿಂದೇಟು ಹಾಕುತ್ತಿದ್ದಾರೆ. ಹೊಲಗದ್ದೆಗಳಲ್ಲಿ ಕೆಲಸ ಮಾಡಲು ಜನರ ಅಭಾವ ಸೃಷ್ಟಿಯಾಗುತ್ತಿದೆ. ಯುವ ಜನರು ಪಟ್ಟಣ ಪ್ರದೇಶಗಳತ್ತ ವಲಸೆ ಹೋಗುತ್ತಿರುವುದರಿಂದ ಹಳ್ಳಿಗಳಲ್ಲಿ ಕೃಷಿ ಚಟುವಟಿಕೆಗಳು ಕ್ಷೀಣಿಸುತ್ತಿದೆ. ಇದು ಮುಂದಿನ ದಿನಗಳಲ್ಲಿ ಗಂಭೀರ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದರು.

    ಕಟ್‌ಬೇಲ್ತೂರು ತೆಂಗು ಬೆಳೆಗಾರರ ಫೆಡರೇಶನ್‌ನ ಅಧ್ಯಕ್ಷ ಚಂದ್ರ ನಾಯ್ಕ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕುಂದಾಪುರ ರೋಟರಿ ಕ್ಲಬ್ ಅಧ್ಯಕ್ಷ ಪ್ರಕಾಶ್ಚಂದ್ರ ಶೆಟ್ಟಿ, ತೆಂಗು ಬೆಳೆಗಾರರರ ಫೆಡರೇಶನ್‌ನ ಕಾರ್ಯದರ್ಶಿ ನರಸಿಂಹ ಗಾಣಿಗ ಶುಭ ಹಾರೈಸಿದರು. ಕೃಷಿಕರಾದ ಸೇಸು ಗಾಣಿಗ, ಬಾಬು ಪೂಜಾರಿ, ನಾಗೇಶ ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು.
    ಸ್ವಸಹಾಯ ಸಂಘದ ಸದಸ್ಯೆ ಸುನೀತಾ ಸ್ವಾಗತಿಸಿದರು. ಸುಕುಮಾರ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಯುವಕ ಮಂಡಲದ ಅಧ್ಯಕ್ಷ ರವೀಶ್ ಡಿ.ಎಚ್. ವಂದಿಸಿದರು.

    Share. Facebook Twitter Pinterest LinkedIn Tumblr Telegram Email
    ಸುನಿಲ್ ಹೆಚ್. ಜಿ. ಬೈಂದೂರು
    • Website
    • Facebook
    • X (Twitter)
    • LinkedIn

    ಸುನಿಲ್ ಬೈಂದೂರು ಅವರು 'ಕುಂದಾಪ್ರ ಡಾಟ್ ಕಾಂ' ಅಂತರ್ಜಾಲ ಸುದ್ದಿತಾಣದ ಮುಖ್ಯ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಎಂ.ಕಾಂ ಸ್ನಾತಕೋತ್ತರ ಪದವಿ ಪೂರೈಸಿದ್ದಾರೆ. 2009ರಲ್ಲಿ ಪದವಿ ವಿದ್ಯಾರ್ಥಿಯಾಗಿದ್ದಾಗ ಸಾಹಿತ್ಯ ಕೃಷಿ ಗುರುತಿಸಿ '14ನೇ ಕರಾವಳಿ ವಿದ್ಯಾರ್ಥಿ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆ', 2014ರಲ್ಲಿ 'ಆದಿ ಗ್ರಾಮೋತ್ಸವ ಯುವ ಗೌರವ', ಪತ್ರಿಕೋದ್ಯಮ ಕ್ಷೇತ್ರದ ಸಾಧನೆಗಾಗಿ 2016ರಲ್ಲಿ 'ಕರ್ನಾಟಕ ಜ್ಯೋತಿ ರಾಜ್ಯ ಪ್ರಶಸ್ತಿ' ಪ್ರಶಸ್ತಿ'ಗೆ ಭಾಜನರಾಗಿದ್ದಾರೆ. 2012ರಿಂದ ಕುಂದಾಪ್ರ ಡಾಟ್ ಕಾಂ ಸುದ್ದಿತಾಣವನ್ನು ಮುನ್ನಡೆಸುತ್ತಿದ್ದಾರೆ.

    Related Posts

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026

    ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    21/05/2026

    ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ

    21/05/2026
    Leave A Reply Cancel Reply

    8 + sixteen =

    Call us

    Click Here

    Call us

    Call us

    Call us
    Highest Viewed Recently
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.