Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ವಂದೇ ಮಾತರಂ ಕೋಸ್ಟಲ್‌ ಸೈಕ್ಲೋಥಾನ್‌ ರ‍್ಯಾಲಿ ಯಶಸ್ವಿಗೊಳಿಸಿ: ಅಪರ ಜಿಲ್ಲಾಧಿಕಾರಿ
    ಉಡುಪಿ ಜಿಲ್ಲೆ

    ವಂದೇ ಮಾತರಂ ಕೋಸ್ಟಲ್‌ ಸೈಕ್ಲೋಥಾನ್‌ ರ‍್ಯಾಲಿ ಯಶಸ್ವಿಗೊಳಿಸಿ: ಅಪರ ಜಿಲ್ಲಾಧಿಕಾರಿ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಉಡುಪಿ:
    ಕೇಂದ್ರ ಕೈಗಾರಿಕಾ ಭದ್ರತಾ ಪಡೆ ವತಿಯಿಂದ ವಂದೇ ಮಾತರಂ ಕೋಸ್ಟಲ್ ಸೈಕ್ಲೋಥಾನ್ -2026 ರ‍್ಯಾಲಿಯು ಇದೇ ಫೆಬ್ರವರಿ 18 ರಂದು ಜಿಲ್ಲೆಯಲ್ಲಿ ಸಂಚರಿಸಲಿದೆ. ಈ ಸೈಕ್ಲಿಂಗ್ ರ‍್ಯಾಲಿಯನ್ನು ಯಶಸ್ವಿಗೊಳಿಸಲು ಅಗತ್ಯ ಪೂರ್ವ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ ಸೂಚನೆ ನೀಡಿದರು.

    Click Here

    Call us

    Click Here

    ಅವರು ಮಂಗಳವಾರ ನಗರದ ಮಣಿಪಾಲ ರಜತಾದ್ರಿಯ ತಮ್ಮ ಕಚೇರಿಯಲ್ಲಿ ಸಿ.ಐ.ಎಸ್.ಎಫ್ ವಂದೇ ಮಾತರಂ ಕೋಸ್ಟಲ್ ಸೈಕ್ಲೋಥಾನ್ ಕಾರ್ಯಕ್ರಮ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ವಂದೇ ಮಾತರಂ ಗೀತೆಯು 150 ವರ್ಷ ಪೂರೈಸಿರುವ ಹಿನ್ನೆಲೆ, ಕೇಂದ್ರ ಕೈಗಾರಿಕಾ ಭದ್ರತಾ ಪಡೆ (ಸಿ.ಐ.ಎಸ್.ಎಫ್) ವತಿಯಿಂದ ವಂದೇ ಮಾತರಂ ಕೋಸ್ಟಲ್ ಸೈಕ್ಲೋಥಾನ್ -2026 ಅನ್ನು ಹಮ್ಮಿಕೊಳ್ಳಲಾಗಿದ್ದು, ದೇಶದ ಪಶ್ಚಿಮ ಸಮುದ್ರ ತೀರದಲ್ಲಿ ಕರಾವಳಿ ಸಮುದಾಯಗಳು, ಸಂಸ್ಕೃತಿ ಮತ್ತು ರಾಷ್ಟ್ರೀಯ ಸಂಕಲ್ಪವನ್ನು ಒಟ್ಟುಗೂಡಿಸುವ ಉದ್ದೇಶದಿಂದ ಕೋಸ್ಟಲ್ ಸೈಕ್ಲೋಥಾನ್ ಸ್ಪರ್ಧೆಯನ್ನು ಆಯೋಜಿಸಿದ್ದು, ರ‍್ಯಾಲಿಗೆ ಈಗಾಗಲೆ ಜನವರಿಯಲ್ಲಿ ಗುಜರಾತ್ ಮತ್ತು ಪಶ್ಚಿಮ ಬಂಗಾಳದಲ್ಲಿ ಏಕಕಾಲಕ್ಕೆ ಚಾಲನೆ ನೀಡಲಾಗಿರುತ್ತದೆ. ‍ರ‍್ಯಾಲಿಯು ಸುಮಾರು 6,500 ಕಿ.ಮೀ. ಸಂಚರಿಸುವುದರೊಂದಿಗೆ ಕೇರಳದ ಕೊಚ್ಚಿಯಲ್ಲಿ ಫೆಬ್ರವರಿ 21 ರಂದು ಕೊನೆಗೊಳ್ಳಲಿದೆ ಎಂದರು.

    ಜಿಲ್ಲೆಯಲ್ಲಿ ರ‍್ಯಾಲಿಯು ಬೈಂದೂರು ತಾಲೂಕಿನ ಶಿರೂರಿನಿಂದ ಪ್ರಾರಂಭವಾಗಿ ಕುಂದಾಪುರ-ಬ್ರಹ್ಮಾವರ-ಉಡುಪಿ- ಕಾಪು- ಹೆಜಮಾಡಿ ಮೂಲಕ ಸಂಚರಿಸಿ ಮುಂದೆ ಹಾದುಹೋಗಲಿದೆ. ಈ ರ‍್ಯಾಲಿಯನ್ನು ಸಾರ್ವಜನಿಕರು, ಸಮುದಾಯದ ಜನರು, ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ಯಶಸ್ವಿಗೊಳಿಸಬೇಕು ಎಂದರು.  

    ಸೈಕ್ಲೋಥಾನ್ ರ‍್ಯಾಲಿಯ ಸ್ಪರ್ಧಾಳುಗಳನ್ನು ಸ್ಥಳೀಯ ಸಂಪ್ರದಾಯದೊಂದಿಗೆ ಅಂದು ಬೆಳಗ್ಗೆ 8.30ಕ್ಕೆ ತ್ರಾಸಿಯಲ್ಲಿ ಸ್ವಾಗತಿಸಲಿದ್ದು, ಅಲ್ಲಿ ವಿದ್ಯಾರ್ಥಿಗಳೊಂದಿಗೆ ಹಾಗೂ ಸಮುದಾಯದ ಜನರೊಂದಿಗೆ ಸಂವಾದ ನಡೆಸಲಿದ್ದಾರೆ ಎಂದ ಅವರು, ಬೆಳಗ್ಗೆ 11.30 ಕ್ಕೆ ಬ್ರಹ್ಮಾವರದ ಆಶ್ರಯ ಹೋಟೆಲ್ ಸಭಾಂಗಣದಲ್ಲಿ ಹಾಗೂ ಸಂಜೆ 3.30 ಕ್ಕೆ ಕಾಪು ತಾಲೂಕಿನ ಸರಕಾರಿ ಕಾಲೇಜಿನ ಸಭಾಂಗಣದಲ್ಲಿ ಸಮುದಾಯದ ಜನರು ಹಾಗೂ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಲಿದ್ದಾರೆ ಎಂದ ಅವರು, ರ‍್ಯಾಲಿಯ ಯಶಸ್ಸಿಗೆ ಸಾರ್ವಜನಿಕರು, ಸಮುದಾಯದವರು, ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮನವಿ ಮಾಡಿದರು.

    ರ‍್ಯಾಲಿಯು ಸುಗಮವಾಗಿ ಸಾಗಲು, ಸೈಕ್ಲಿಸ್ಟ್ಗಳು ಮತ್ತು ಅವರ ಸಿಬ್ಬಂದಿಗೆ ಸುರಕ್ಷತೆ ಒದಗಿಸಲು ಹಾಗೂ ಪ್ರಯಾಣಿಕರು ಸುಗಮ ಸಂಚಾರಕ್ಕೆ ಯಾವುದೇ ಅನಾನುಕೂಲ ಉಂಟಾಗದಂತೆ ಅಗತ್ಯವಿರುವ ಎಲ್ಲಾ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳುವಂತೆ ಪೊಲೀಸ್ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದ ಅವರು, ರ‍್ಯಾಲಿ ಸಂದರ್ಭದಲ್ಲಿ ವೈದ್ಯಕೀಯ ಸಿಬ್ಬಂದಿಗಳನ್ನು ಒಳಗೊಂಡ ಆಂಬುಲೆನ್ಸ್ ಅನ್ನು ಸ್ಥಳದಲ್ಲಿ ನಿಯೋಜಿಸಬೇಕು ಎಂದರು.

    Click here

    Click here

    Click here

    Click Here

    Call us

    Call us

    ಸಭೆಯಲ್ಲಿ ಎನ್.ಎಂ.ಪಿ.ಎ ಮಂಗಳೂರು ಸೆಂಟ್ರಲ್ ಇಂಡಸ್ಟ್ರೀಯಲ್ ಫೋರ್ಸ್ನ ರಾಜೇಂದ್ರ ಪ್ರಸಾದ್ ಪಾಠಕ್, ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಮಾರುತಿ, ಜಿಲ್ಲಾ ಏಡ್ಸ್ ನಿಯಂತ್ರಣ ಅಧಿಕಾರಿ ಡಾ. ಚಿದಾನಂದ ಸಂಜು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ರೋಶನ್ ಕುಮಾರ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    21/05/2026

    ಜೂ.1 ರಿಂದ 61 ದಿನಗಳ ಕಾಲ ಯಾಂತ್ರೀಕೃತ ಮೀನುಗಾರಿಕೆ ನಿಷೇಧ

    21/05/2026

    ಉಡುಪಿ: ಮಹಾತ್ಮ ಗಾಂಧಿ ಮೆಮೋರಿಯಲ್‌ ಸಂಧ್ಯಾ ಕಾಲೇಜಿನಲ್ಲಿ ವಿದ್ಯಾರ್ಥಿ ಕ್ಷೇಮಪಾಲನಾ ಮಂಡಳಿ ದಿನಾಚರಣೆ

    20/05/2026
    Leave A Reply Cancel Reply

    16 + 10 =

    Call us

    Click Here

    Call us

    Call us

    Call us
    Highest Viewed Recently
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ
    • ಜೂ.1 ರಿಂದ 61 ದಿನಗಳ ಕಾಲ ಯಾಂತ್ರೀಕೃತ ಮೀನುಗಾರಿಕೆ ನಿಷೇಧ
    • ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.