ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಕೋಟೇಶ್ವರ ಸಮೀಪ ಬೀಜಾಡಿಯಲ್ಲಿ ರಸ್ತೆ ದಾಟುತ್ತಿದ್ದ ವೇಳೆ ಕಾರು ಡಿಕ್ಕಿಯಾಗಿ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬುಧವಾರ ರಾತ್ರಿ ಸಂಭವಿಸಿದೆ.
ಮೃತಪಟ್ಟ ವ್ಯಕ್ತಿ ಮೂಡುಗೋಪಾಡಿ ರೋಶನಿ ಧಾಮದ ನಿವಾಸಿ ರಮೇಶ (60) ಎಂದು ಗುರುತಿಸಲಾಗಿದೆ. ಅವರು ಕೂಲಿ ಕೆಲಸ ಮುಗಿಸಿ ಮನೆಗೆ ಹಿಂದಿರುಗುವಾಗ ರಾಷ್ಟ್ರೀಯ ಹೆದ್ದಾರಿ ದಾಟುವ ವೇಳೆ ಅಪಘಾತ ಸಂಭವಿಸಿದೆ.
ಘಟನಾ ಸ್ಥಳಕ್ಕೆ ಕುಂದಾಪುರ ಸಂಚಾರಿ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.










