Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಉತ್ತಮ ನಾಯಕತ್ವ ಕೌಶಲ್ಯಗಳನ್ನು ಯುವಜನರು ಅಳವಡಿಸಿಕೊಳ್ಳಿ: ಬಸ್ರೂರು ರಾಜೀವ್ ಶೆಟ್ಟಿ
    ಉಡುಪಿ ಜಿಲ್ಲೆ

    ಉತ್ತಮ ನಾಯಕತ್ವ ಕೌಶಲ್ಯಗಳನ್ನು ಯುವಜನರು ಅಳವಡಿಸಿಕೊಳ್ಳಿ: ಬಸ್ರೂರು ರಾಜೀವ್ ಶೆಟ್ಟಿ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಉಡುಪಿ:
    ದೇಶದ ಭವಿಷ್ಯವನ್ನು ರೂಪಿಸುವಲ್ಲಿ ಮಹತ್ವದ ಪಾತ್ರ ವಹಿಸಲಿರುವ ಯುವಜನರಲ್ಲಿ ಸೃಜನಶೀಲತೆ ಮತ್ತು ನಾಯಕತ್ವ ಕೌಶಲ್ಯಗಳನ್ನು ಅಭಿವೃದ್ಧಿ ಪಡಿಸುವ ಉದ್ದೇಶದಿಂದ ಸೃಜನಶೀಲತೆ ಮತ್ತು ವ್ಯಕ್ತಿ ವಿಕಸನ ಶಿಬಿರವನ್ನು ಆಯೋಜಿಸಲಾಗಿದ್ದು, ಯುವಜನತೆ ತರಬೇತಿಯ ಲಾಭ ಪಡೆದುಕೊಂಡು ಸಮಾಜಕ್ಕೆ ಉತ್ತಮ ಕೊಡುಗೆ ನೀಡುವಂತಾಗಬೇಕು ಎಂದು ರಾಜ್ಯ ರೆಡ್‌ಕ್ರಾಸ್ ಸಭಾಪತಿ ಬಸ್ರೂರು ರಾಜೀವ್ ಶೆಟ್ಟಿ ಹೇಳಿದರು.

    Click Here

    Call us

    Click Here

    ಅವರು ಗುರುವಾರ ನಗರದ ಬ್ರಹ್ಮಗಿರಿಯ ಭಾರತೀಯ ರೆಡ್‌ಕ್ರಾಸ್ ಸಭಾಂಗಣದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಭಾರತೀಯ ರೆಡ್‌ಕ್ರಾಸ್ ಘಟಕ ಉಡುಪಿ ಜಿಲ್ಲೆ ಇವರ ಸಹಯೋಗದಲ್ಲಿ ಆಯೋಜಿಸಲಾದ ಎರಡು ದಿನಗಳ ಸೃಜನಶೀಲತೆ ಮತ್ತು ವ್ಯಕ್ತಿ ವಿಕಸನ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು. ಸಮಾಜದಲ್ಲಿ ಯಾವುದೇ ಕರ್ತವ್ಯ ನಿರ್ವಹಿಸುವಾಗ ನಾಯಕತ್ವ ಗುಣ ಅತೀ ಮುಖ್ಯವಾಗಿರುತ್ತದೆ. ದೇಶದಲ್ಲಿ 18 ರಿಂದ 35 ವರ್ಷದೊಳಗಿನ ಯುವಜನರ ಸಂಖ್ಯೆಯು ಸುಮಾರು ಶೇ. 60-65 ರಷ್ಟು ಇದ್ದು, ಬಲಿಷ್ಠ ರಾಷ್ಟ್ರ ನಿರ್ಮಾಣಕ್ಕೆ ಯುವಸಮುದಾಯವು ತಮ್ಮದೇ ರೀತಿಯಲ್ಲಿ ಕೊಡುಗೆ ನೀಡುವಂತಾಗಬೇಕು ಎಂದರು. 

    ಸೃಜನಶೀಲತೆಯು ಪ್ರತಿಯೊಬ್ಬ ವ್ಯಕ್ತಿಯಲ್ಲಿ ಅಂತರ್ಗತವಾಗಿರುತ್ತದೆ. ಆ ಶಕ್ತಿಯನ್ನು ಹೊರಸೂಸಲು ಪರಿಣಾಮಕಾರಿ ತರಬೇತಿ ಅಗತ್ಯವಾಗಿದೆ. ತರಬೇತಿಯಿಂದ ಸೃಜನಶೀಲತೆಯು ಪಕ್ವಗೊಳ್ಳುತ್ತದೆ. ಶಿಕ್ಷಣದ ಜೊತೆಗೆ ವ್ಯಕ್ತಿ ವಿಕಸನ ಶಿಬಿರವು ವ್ಯಕ್ತಿಯ ವ್ಯಕ್ತಿತ್ವ ಅಭಿವೃದ್ಧಿಗೆ ಕಾರಣವಾಗುತ್ತದೆ. ಇಂದಿನ ಯುವಜನತೆ ಸರಿಯಾದ ದಿಕ್ಕಿನಲ್ಲಿ ಸಾಗಿದರೆ ಉಜ್ವಲ ಭವಿಷ್ಯ ತಮ್ಮದಾಗಿಸಿಕೊಳ್ಳಬಹುದು. ಈ ನಿಟ್ಟಿನಲ್ಲಿ ಸಮಾಜಕ್ಕೆ ಒಳಿತು ಮಾಡುವ, ಇತರರ ಕಷ್ಟಗಳಿಗೆ ಸ್ಪಂದಿಸುವ, ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಹಾಗೂ ಉತ್ತಮ ಸಂವಹನ ಕೌಶಲ್ಯವನ್ನು ಹೊಂದುವುದರೊಂದಿಗೆ ಸರಿ ತಪ್ಪುಗಳನ್ನು ಧೈರ್ಯವಾಗಿ ಹೇಳುವ, ಎಲ್ಲರೊಂದಿಗೂ ಮುಕ್ತವಾಗಿ ಬೆರೆಯುವ ಗುಣವನ್ನು ನಾಯಕನಾದವರು ಹೊಂದಿರಬೇಕು ಎಂದರು. 

    ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ತೆಂಕನಿಡಿಯೂರು ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಪ್ರಾಂಶುಪಾಲ ಪ್ರೊ. ನಿತ್ಯಾನಂದ ವಿ.ಗಾಂವಕರ ಮಾತನಾಡಿ, ಪ್ರತಿಯೊಬ್ಬ ಮನುಷ್ಯನಲ್ಲಿಯೂ ಸೃಜನಶೀಲತೆ ಅಡಗಿರುತ್ತದೆ. ಯುವಸಮುದಾಯವನ್ನು ಉತ್ತಮ ದಾರಿಯಲ್ಲಿ ಕೊಂಡೊಯ್ಯುವ ನಿಟ್ಟಿನಲ್ಲಿ ಹಾಗೂ ಯುವಜನರ ಸರ್ವಾಂಗೀಣ ಅಭಿವೃದ್ಧಿಗಾಗಿ ತರಬೇತಿ ಶಿಬಿರವನ್ನು ಆಯೋಜಿಸಲಾಗಿದ್ದು, ಯುವ ರೆಡ್‌ಕ್ರಾಸ್ ಸ್ವಯಂಸೇವಕರು ಇದರ ಸದುಪಯೋಗ ಪಡೆದುಕೊಳ್ಳುವಂತೆ ತಿಳಿಸಿದರು.

    ಸಂಪನ್ಮೂಲ ವ್ಯಕ್ತಿಗಳಾದ ಎಸಿಟಿಯ ಡೀನ್ ಟ್ರೈನಿಂಗ್ ಡಾ. ವಿವೇಕಾನಂದ ತರಬೇತಿಯ ಸ್ವರೂಪವನ್ನು ವಿವರಿಸಿದರು.

    Click here

    Click here

    Click here

    Click Here

    Call us

    Call us

    ಕಾರ್ಯಕ್ರಮದಲ್ಲಿ ರೆಡ್‌ಕ್ರಾಸ್ ಆಡಳಿತ ಮಂಡಳಿಯ ಸದಸ್ಯ ಚಂದ್ರಶೇಖರ್, ಸಂಪನ್ಮೂಲ ವ್ಯಕ್ತಿಗಳಾದ ಎಸಿಟಿ ಕೇಂದ್ರ ಹುಬ್ಬಳ್ಳಿಯ ಮುಖ್ಯಸ್ಥೆ ಯಶವಂತಿ, ಜಿಲ್ಲೆಯ ವಿವಿಧ ತಾಲೂಕುಗಳ ಶೈಕ್ಷಣಿಕ ಸಂಸ್ಥೆಗಳ ವಿದ್ಯಾರ್ಥಿಗಳು ಮತ್ತು ಯುವಕರು, ರೆಡ್‌ಕ್ರಾಸ್ ಹಾಗೂ ಡಿಡಿಆರ್‌ಸಿ ಸಿಬ್ಬಂದಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

    ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ. ರೋಶನ್ ಕುಮಾರ್ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿ, ಸ್ವಾಗತಿಸಿ ವಂದಿಸಿದರು, ರೆಡ್‌ಕ್ರಾಸ್ ಘಟಕದ ಗೌರವ ಕಾರ್ಯದರ್ಶಿ ಡಾ. ಗಣನಾಥ ಎಕ್ಕಾರು ನಿರೂಪಿಸಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    21/05/2026

    ಜೂ.1 ರಿಂದ 61 ದಿನಗಳ ಕಾಲ ಯಾಂತ್ರೀಕೃತ ಮೀನುಗಾರಿಕೆ ನಿಷೇಧ

    21/05/2026

    ಉಡುಪಿ: ಮಹಾತ್ಮ ಗಾಂಧಿ ಮೆಮೋರಿಯಲ್‌ ಸಂಧ್ಯಾ ಕಾಲೇಜಿನಲ್ಲಿ ವಿದ್ಯಾರ್ಥಿ ಕ್ಷೇಮಪಾಲನಾ ಮಂಡಳಿ ದಿನಾಚರಣೆ

    20/05/2026
    Leave A Reply Cancel Reply

    eighteen − 13 =

    Call us

    Click Here

    Call us

    Call us

    Call us
    Highest Viewed Recently
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ
    • ಜೂ.1 ರಿಂದ 61 ದಿನಗಳ ಕಾಲ ಯಾಂತ್ರೀಕೃತ ಮೀನುಗಾರಿಕೆ ನಿಷೇಧ
    • ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.