Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಎಂಐಟಿಕೆ: ಕೃತಕ ಬುದ್ಧಿಮತ್ತೆ, ಡ್ರೋನ್ ಹಾಗೂ ರೋಬೋಟಿಕ್ಸ್‌ನ ಸ್ಮಾರ್ಟ್ ಇನೋವೇಶನ್ ಕೇಂದ್ರ ಉದ್ಘಾಟನೆ 
    ಊರ್ಮನೆ ಸಮಾಚಾರ

    ಎಂಐಟಿಕೆ: ಕೃತಕ ಬುದ್ಧಿಮತ್ತೆ, ಡ್ರೋನ್ ಹಾಗೂ ರೋಬೋಟಿಕ್ಸ್‌ನ ಸ್ಮಾರ್ಟ್ ಇನೋವೇಶನ್ ಕೇಂದ್ರ ಉದ್ಘಾಟನೆ 

    Updated:13/02/2026No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಐಎಮ್‌ಜೆ ಇನ್ಸ್ಟಿಟ್ಯೂಟ್ ಅಧ್ಯಕ್ಷರಾದ ಸಿದ್ಧಾರ್ಥ ಜೆ. ಶೆಟ್ಟಿ ಅವರ ದೂರದೃಷ್ಟಿಯ ನಾಯಕತ್ವ ಮತ್ತು ಮಾರ್ಗದರ್ಶನದಡಿ, ಶೈಕ್ಷಣಿಕ ಶ್ರೇಷ್ಠತೆ, ಸಂಶೋಧನಾ ಆಧಾರಿತ ನವೀನತೆ ಹಾಗೂ ಜಾಗತಿಕ ಸಹಕಾರಗಳತ್ತ ಮುನ್ನಡೆಸುವಲ್ಲಿ ಮಹತ್ವದ ಪಾತ್ರ ವಹಿಸಿರುವ ಮೂಡ್ಲಕಟ್ಟೆ ತಾಂತ್ರಿಕ ಸಂಸ್ಥೆಯ ಸಂಶೋಧನಾ ವಿಭಾಗದ ಅಡಿಯಲ್ಲಿ ಕೃತಕ ಬುದ್ಧಿಮತ್ತೆ, ಡ್ರೋನ್ ಹಾಗೂ ರೋಬೋಟಿಕ್ಸ್‌ನ ಸ್ಮಾರ್ಟ್ ಇನೋವೇಶನ್ ಕೇಂದ್ರವನ್ನು ಗುರುವಾರ ಉದ್ಘಾಟಿಸಲಾಯಿತು.

    Click Here

    Call us

    Click Here

    ಈ ಕೇಂದ್ರವನ್ನು  ಸಂಶೋಧನೆ ಹಾಗೂ ಸಲಹಾ ವಿಭಾಗದ ಡೀನ್ ಆಗಿರುವ ಡಾ. ಇಂದ್ರ ವಿಜಯ್ ಸಿಂಗ್ ಅವರು ಮುನ್ನಡೆಸುತ್ತಿದ್ದು, ಉದಯೋನ್ಮುಖ ತಂತ್ರಜ್ಞಾನಗಳಲ್ಲಿ ಉನ್ನತ ಸಂಶೋಧನೆ, ನವೀನತೆ ಹಾಗೂ ಕೈಗಾರಿಕಾ ಸಹಕಾರವನ್ನು ಉತ್ತೇಜಿಸುವ ಉದ್ದೇಶ ಹೊಂದಿದೆ.

    ಮುಖ್ಯ ಅತಿಥಿಯಾಗಿ ತಾಕೇಶಿ ಒಗುರಾ, ಏಶಿಯ ಬಿಸ್ ನೆಸ್ ಹೆಡ್, ಕೆಟಿಸಿ ಹೋಲ್ಡಿಂಗ್ ಜಪಾನ್ ಅವರು ಆಗಮಿಸಿದ್ದು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ತಮ್ಮ ಭಾಷಣದಲ್ಲಿ ಅವರು ಜಪಾನಿನಲ್ಲಿ ವಿದ್ಯಾರ್ಥಿಗಳಿಗೆ ಲಭ್ಯವಿರುವ ಅಂತರರಾಷ್ಟ್ರೀಯ ವೃತ್ತಿ ಅವಕಾಶಗಳ ಕುರಿತು ಮಾತನಾಡಿ, ಕೃತಕ ಬುದ್ಧಿಮತ್ತೆ ಮತ್ತು ಉನ್ನತ ತಂತ್ರಜ್ಞಾನ ಕ್ಷೇತ್ರಗಳಲ್ಲಿ ಸಂಸ್ಥೆಯೊಂದಿಗೆ ಸಹಕಾರವನ್ನು ಬಲಪಡಿಸುವ ಆಸಕ್ತಿ ವ್ಯಕ್ತಪಡಿಸಿದರು.

    ಗೌರವಾನ್ವಿತ ಅತಿಥಿಯಾಗಿದ್ದ ಅನಿಲ್ ಬಸೋತ್ರ ಕೊ ಫ಼ೌಂಡರ್ ಮತ್ತು ಸಿಇಒ ಕೆಟಿಸಿಎಚ್ ಭಾರತ, ಅವರು ಸಂಸ್ಥೆಯೊಂದಿಗೆ ಸಹಭಾಗಿತ್ವಕ್ಕೆ ಬದ್ಧತೆ ವ್ಯಕ್ತಪಡಿಸಿ, ವಿದ್ಯಾರ್ಥಿಗಳಿಗೆ ಜಾಗತಿಕ ಪರಿಚಯ ಮತ್ತು ಉದ್ಯೋಗ ಅವಕಾಶಗಳನ್ನು ಕಲ್ಪಿಸುವ ಬಗ್ಗೆ ಮಾತನಾಡಿದರು.

    ವಿಶೇಷ ಅತಿಥಿಯಾಗಿದ್ದ ವಿಷನ್ ಡಿಜಿಟಲ್ ಇಂಡಿಯಾ ಸಂಸ್ಥೆಯ ಅಧ್ಯಕ್ಷರು ಹಾಗೂ ಗ್ಲೋಬಲ್ ಡಿಜಿಟಲ್ ವಿಶ್ವವಿದ್ಯಾಲಯದ ಉಪಕುಲಪತಿಗಳಾದ ಡಾ. ಹರಿ ಕೃಷ್ಣ ಮರಂ ಸಭೆಯನ್ನುದ್ದೇಷಿಸಿ ಮಾತನಾಡಿ, ಡಿಜಿಟಲ್ ಇಂಡಿಯಾ ದೃಷ್ಟಿಕೋನಕ್ಕೆ ಹೊಂದುವಂತೆ ತಮ್ಮ ದೃಷ್ಟಿಯನ್ನು ಹಂಚಿಕೊಂಡು, ಕೃತಕ ಬುದ್ಧಿಮತ್ತೆ ಆಧಾರಿತ ನವೀನತೆ ಮತ್ತು ಭಾರತದಲ್ಲಿ ಉದ್ಯೋಗಾವಕಾಶಗಳ ಸೃಷ್ಟಿಯ ಮಹತ್ವವನ್ನು ಒತ್ತಿಹೇಳಿದರು.

    ಕಾರ್ಯಕ್ರಮದಲ್ಲಿ ಸಂಸ್ಥೆಯ ಪ್ರಾಂಶುಪಾಲರಾದ ಡಾ. ರಾಮಕೃಷ್ಣ ಹೆಗಡೆ ಅವರು ಸಂಸ್ಥೆಯ ಸಂಶೋಧನಾ ಶ್ರೇಷ್ಠತೆ ಮತ್ತು ಕೈಗಾರಿಕಾ ಸಂಪರ್ಕದ ಮೇಲಿನ ಒತ್ತುವರಿಯನ್ನು ವಿವರಿಸಿದರು.

    ಐಎಂಜೆ ಸಂಸ್ಥೆಗಳ ಶೈಕ್ಷಣಿಕ ನಿರ್ದೇಶಕರಾದ ಡಾ. ಎಸ್. ಎನ್. ಭಟ್ ಅವರು ತಮ್ಮ ಅಧ್ಯಕ್ಷೀಯ ಭಾಷಣದಲ್ಲಿ, ಈ ಕಾರ್ಯಕ್ರಮವನ್ನು ಶ್ಲಾಘಿಸಿ, ಸ್ಮಾರ್ಟ್ ಇನೋವೇಶನ್ ಕೇಂದ್ರ ಸ್ಥಾಪನೆಗಾಗಿ ಸಂಶೋಧನಾ ವಿಭಾಗವನ್ನು ಅಭಿನಂದಿಸಿದರು.

    Click here

    Click here

    Click here

    Click Here

    Call us

    Call us

    ಸ್ಮಾರ್ಟ್ ಇನೋವೇಶನ್ ಕೇಂದ್ರದ ಸಮಗ್ರ ಅವಲೋಕನವನ್ನು ಸ್ರಜನ್ ಕುಲಾಲ್ ಅವರು ನೀಡಿದರು. ಅವರು ಕೇಂದ್ರದ ದೃಷ್ಟಿ, ಉದ್ದೇಶಗಳು ಮತ್ತು ಕೃತಕ ಬುದ್ಧಿಮತ್ತೆ, ಡ್ರೋನ್ ತಂತ್ರಜ್ಞಾನ ಹಾಗೂ ರೋಬೋಟಿಕ್ಸ್ ಕ್ಷೇತ್ರಗಳಲ್ಲಿನ ಮುಖ್ಯ ಕೇಂದ್ರೀಕೃತ ವಲಯಗಳನ್ನು ವಿವರಿಸಿದರು.

    ಕಾರ್ಯಕ್ರಮವನ್ನು ಸಂಶೋಧನಾ ಪ್ರೋಗ್ರಾಮರ್ ಶ್ರೀ ದಿಲೀಪ್ ಅವರು ಸಮರ್ಥವಾಗಿ ನಿರ್ವಹಿಸಿದರು. ಕಾರ್ಯಕ್ರಮವು ತೃತೀಯ ವರ್ಷದ ಎಐಎಂಎಲ್ ವಿದ್ಯಾರ್ಥಿ ಅಕ್ಷಯ್ ಮತ್ತು ತಂಡದ ಪ್ರಾರ್ಥನೆಯೊಂದಿಗೆ ಆರಂಭವಾಯಿತು. ನಂತರ ಎಐಎಂಎಲ್ ವಿಭಾಗದ ಪ್ರಾಧ್ಯಾಪಕಿ ಶ್ರೀನಿಧಿ ಅವರು ಸ್ವಾಗತ ಭಾಷಣವನ್ನು ನೀಡಿದರು. ವಿದ್ಯಾರ್ಥಿ ಕಲ್ಯಾಣ ವಿಭಾಗದ ಡೀನ್ ಪ್ರಾಧ್ಯಾಪಕಿ ಅಕ್ಷತಾ ನಾಯಕ್ ಹಾಗೂ ಪ್ರಾದ್ಯಾಪಕಿ ಸುಷ್ಮ ಶೆಟ್ಟಿ ಅವರು ಅತಿಥಿಗಳನ್ನು ಪರಿಚಯಿಸಿದರು.

    ಕಾರ್ಯಕ್ರಮವನ್ನು ತೃತೀಯ ವರ್ಷದ ಸಿಎಸ್ಇ ವಿದ್ಯಾರ್ಥಿನಿ ಇಶ್ರಾತ್ ಅವರು ಸುಂದರವಾಗಿ ನಿರೂಪಿಸಿದರು. ಕಾರ್ಯಕ್ರಮವು ತೃತೀಯ ವರ್ಷದ ಎಐಎಂಎಲ್ ವಿದ್ಯಾರ್ಥಿನಿ ನಿಕಿತಾ ಅವರ ಧನ್ಯವಾದ ಭಾಷಣದೊಂದಿಗೆ ಮುಕ್ತಾಯವಾಯಿತು. ಎಲ್ಲಾ ವಿಭಾಗಗಳ ಉಪನ್ಯಾಸಕರು, ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಈ ಕಾರ್ಯಕ್ರಮಕ್ಕೆ ಸಾಕ್ಷಿಯಾಗಿದ್ದು, ತಂತ್ರಜ್ಞಾನ ನವೀನತೆ ಮತ್ತು ಸಂಶೋಧನಾ ಶ್ರೇಷ್ಠತೆಯತ್ತ ಸಂಸ್ಥೆಯ ಪ್ರಯಾಣದಲ್ಲಿ ಇದು ಮಹತ್ವದ ಹೆಜ್ಜೆಯಾಯಿತು.

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026

    ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    21/05/2026

    ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ

    21/05/2026
    Leave A Reply Cancel Reply

    ten + two =

    Call us

    Click Here

    Call us

    Call us

    Call us
    Highest Viewed Recently
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.