Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಮೂಡುಬಿದಿರೆ ತಾಲೂಕು ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಅಬ್ದುಲ್ ಹಮೀದ್ ಪಕ್ಕಲಡ್ಕ ಆಯ್ಕೆ
    alvas nudisiri

    ಮೂಡುಬಿದಿರೆ ತಾಲೂಕು ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಅಬ್ದುಲ್ ಹಮೀದ್ ಪಕ್ಕಲಡ್ಕ ಆಯ್ಕೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಮೂಡುಬಿದಿರೆ:
    ಫೆ.21ರಂದು ಕಡಂದಲೆಯ ಶ್ರೀ ನಾರಾಯಣಗುರು ಸಭಾಭವನದಲ್ಲಿ ನಡೆಯಲಿರುವ ಮೂಡುಬಿದಿರೆ ತಾಲೂಕು ದ್ವಿತೀಯ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಹಿರಿಯ ಸಾಹಿತಿ ಮಿಜಾರಿನ ಅಬ್ದುಲ್ ಹಮೀದ್ ಪಕ್ಕಲಡ್ಕ ಅವರು ಆಯ್ಕೆಯಾಗಿರುತ್ತಾರೆ ಎಂಬುದಾಗಿ ಕ.ಸಾ.ಪ ಮೂಡುಬಿದಿರೆ ತಾಲೂಕು ಅಧ್ಯಕ್ಷರಾದ ಕೆ. ವೇಣುಗೋಪಾಲ ಶೆಟ್ಟಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    Click Here

    Call us

    Click Here

    ಮಂಗಳೂರು ತಾಲೂಕಿನ ಕಂಕನಾಡಿ ಗ್ರಾಮದ ಪಕ್ಕಲಡ್ಕದ ಅಹಮ್ಮದ್ ಕೆಪಿ ಹಾಗೂ ಫಾತಿಮಾ ದಂಪತಿಯ ಸುಪುತ್ರರಾಗಿ 1947ರಲ್ಲಿ ಜನಿಸಿದ ಅವರು ಬಿ.ಕಾಂ ಪದವೀಧರರು. 1968ರಲ್ಲಿ ರಾಜ್ಯ ಸರಕಾರದ ಅರಣ್ಯ ಇಲಾಖೆಯಲ್ಲಿ ದ್ವಿತೀಯ ದರ್ಜೆ ಸಹಾಯಕರಾಗಿ ತನ್ನ ವೃತ್ತಿ ಜೀವನವನ್ನು ಪ್ರಾರಂಭಿಸಿದ ಅವರು ನಂತರ ಪ್ರಥಮ ದರ್ಜೆ ಸಹಾಯಕರಾಗಿ ಹಾಗೂ ಅಧೀಕ್ಷರಾಗಿಯೂ ಭಡ್ತಿ ಪಡೆದು 37 ವರ್ಷಗಳ ತನ್ನ ಸಾರ್ಥಕ ಸೇವೆಯನ್ನು ಮುಗಿಸಿ 2005ರಲ್ಲಿ ನಿವೃತ್ತರು.

    ಕೃಷಿಯ ಜೊತೆ ಸಾಹಿತ್ಯ ಕೃಷಿಯಲ್ಲಿಯೂ ತೊಡಗಿಸಿಕೊಂಡಿರುವ ಅವರು ಸಣ್ಣ ಕಥಾ ರಚನೆಯಲ್ಲಿ ವಿಶೇಷ ಆಸಕ್ತಿಯನ್ನು ಹೊಂದಿದವರು. ಈಗಾಗಲೇ ‘ಪಾದದಡಿಯ ಸ್ಪರ್ಗ’, ‘ಬಿಳಿಗೋಡೆ’, ‘ಅಲೆಮಾರಿ’, ‘ಭ್ರಮೆ’ ‘ಒಂಟಿತೆಪ್ಪ’, ‘ನೆನಪುಗಳು ಸಾಯುವುದಿಲ್ಲ’, ‘ಮೋಹಕ್ಷಯ’ ಮತ್ತು ‘ಹಾದಿಯೇ ಇಲ್ಲದ ಹಾದಿ’ ಎಂಬ ಇವರ ಎಂಟು ಕಥಾಸಂಕಲನಗಳು ಪ್ರಕಟಗೊಂಡಿವೆ. ‘ಪಾದದಡಿಯ ಸ್ಪರ್ಗ’ ಕಥಾಸಂಕಲನವು ಶ್ರೀಮತಿ ಝುಬೇದ ಗುರುಪುರ ಇವರಿಂದ ‘ಕಾಲಡಿರೆ ಸ್ವರ್ಗ’ ಎಂಬ ಹೆಸರಿನಲ್ಲಿ ಬ್ಯಾರಿ ಭಾಷೆಗೆ ಅನುವಾದಗೊಂಡಿದೆ.

    ಅವರ ‘ಭ್ರಮೆ’ ಕಥಾಸಂಕಲನಕ್ಕೆ ವರ್ಧಮಾನ ಉದಯೋನ್ಮುಖ ಪ್ರಶಸ್ತಿ (2017), ಅಲೆಮಾರಿ ಕಥಾ ಸಂಕಲನಕ್ಕೆ ಪಿ.ಲಂಕೇಶ್ ಪ್ರಶಸ್ತಿ ಮತ್ತು ಮುಸ್ಲಿಂ ಸಾಹಿತ್ಯ ಪ್ರಶಸ್ತಿ (2009), ಒಂಟಿತೆಪ್ಪ ಕಥಾಸಂಕಲನಕ್ಕೆ ನಿರತ ಸಾಹಿತ್ಯ ಪ್ರಶಸ್ತಿ(2020), ಬಾಂಧವ್ಯ ಕಥಾಪುರಸ್ಕಾರ (2020) ಮತ್ತು ಬ್ಯಾರಿ ಸಾಹಿತ್ಯ ಅಕಾಡೆಮಿಯಿಂದ ಬ್ಯಾರಿ ಭಾಷೆಯ ಕಥೆಗೆ ಕೊಡಮಾಡುವ ಬ್ಯಾರಿ ಸಾಹಿತ್ಯ ಸ್ಪರ್ಧಾ ಪುರಸ್ಕಾರ (2020)ವೂ ಅವರಿಗೆ ಸಂದಿವೆ. ಕೃಷಿ ಆಸಕ್ತಿಯ ಜೊತೆ ಯೋಗ ಮತ್ತು ಧ್ಯಾನವನ್ನು ತನ್ನ ಜೀವನದಲ್ಲಿ ಅವರು ಅಳವಡಿಸಿಕೊಂಡಿದ್ದಾರೆ. 

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಆಳ್ವಾಸ್‌ನಿಂದ ರಾಜ್ಯ ಮಟ್ಟದ ಮಹಿಳಾ ಮಧ್ಯವರ್ಜನ ಶಿಬಿರ

    04/07/2026

    ಜುಲೈ 6ರಂದು ಯಡಾಡಿ – ಮತ್ಯಾಡಿಯಲ್ಲಿ ಕುಂದಾಪ್ರ ಕನ್ನಡ ʼವಾಲ್ಬೆಲ್ಲʼ ಕಾರ್ಯಕ್ರಮ

    04/07/2026

    ಸಿಎ ಫೌಂಡೇಶನ್ ಫಲಿತಾಂಶ ಪ್ರಕಟ: ಕಾರ್ಕಳದ ಕ್ರಿಯೇಟಿವ್  ಕಾಲೇಜಿನ 14 ವಿದ್ಯಾರ್ಥಿಗಳು ತೇರ್ಗಡೆ

    04/07/2026
    Leave A Reply Cancel Reply

    nineteen + 18 =

    Call us

    Click Here

    Call us

    Call us

    Call us
    Highest Viewed Recently
    • ಉಡುಪಿ: ವಿದ್ಯಾರ್ಥಿವೇತನ ಸೌಲಭ್ಯಕ್ಕೆ ಅರ್ಜಿ ಆಹ್ವಾನ
    • ಕೋಟ ಶ್ರೀ ಅಮೃತೇಶ್ವರಿ ದೇವಸ್ಥಾನದಲ್ಲಿ ನಾಥಪಂಥದ ಪೀರ್‌ ಯೋಗಿ ಜಗದೀಶ್‌ನಾಥ್ ಜೀ ಭೇಟಿ
    • ಆಳ್ವಾಸ್‌ನಿಂದ ರಾಜ್ಯ ಮಟ್ಟದ ಮಹಿಳಾ ಮಧ್ಯವರ್ಜನ ಶಿಬಿರ
    • ನಿವೃತ್ತ ಮುಖ್ಯೋಪಾಧ್ಯಾಯಿನಿ ನಿರ್ಮಲಾ ಕೆ.ಎಸ್. ಅವರಿಗೆ ಅಭಿನಂದನೆ
    • ಕುಂದಾಪುರ: ಮೂಡ್ಲಕಟ್ಟೆ ನರ್ಸಿಂಗ್ ಕಾಲೇಜಿನಲ್ಲಿ ಕ್ಯಾಂಪಸ್ ಪ್ಲೇಸ್ಮೆಂಟ್

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.