ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ತಾಲೂಕಿನ ಗೋಪಾಡಿ ಗ್ರಾಮದ ಮೂಡುಗೋಪಾಡಿಯ ವೆಂಕಟೇಶ ಮರಕಾಲ ಅವರ ಪುತ್ರ ನಾಗರಾಜ್ ಕುಂದರ್ (38) ಅವರು ಯಾವುದೋ ಕಾರಣಕ್ಕೆ ಜೀವನದಲ್ಲಿ ಜಿಗುಪ್ಸೆಗೊಂಡು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಶುಕ್ರವಾರ ಸಂಭವಿಸಿದೆ.
ಅವರು ಅವಿವಾಹಿತರಾಗಿದ್ದು, ರೆಡಿಮೇಡ್ ಪಾಗರ ಮಾಡುವ ಕೆಲಸ ಮಾಡಿಕೊಂಡಿದ್ದರು. ಈ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.










