Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಮುನಿಯಾಲು ಶ್ರೀಮನ್ನಾಗಮಂಡಲದಲ್ಲಿ ಬಿ.ಕೆ. ದೇವರಾಯ ಮಿತ್ತಬಾಗಿಲು ಅವರಿಗೆ ʼರೈತಪೀಠʼ ಪ್ರಶಸ್ತಿ
    ಊರ್ಮನೆ ಸಮಾಚಾರ

    ಮುನಿಯಾಲು ಶ್ರೀಮನ್ನಾಗಮಂಡಲದಲ್ಲಿ ಬಿ.ಕೆ. ದೇವರಾಯ ಮಿತ್ತಬಾಗಿಲು ಅವರಿಗೆ ʼರೈತಪೀಠʼ ಪ್ರಶಸ್ತಿ

    Updated:16/02/2026No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಮುನಿಯಾಲು ಸಂಜೀವಿನಿ ಗೋಧಾಮದಲ್ಲಿ ಫೆಬ್ರವರಿ 19 ರಿಂದ 21ರ ತನಕ ನಡೆಯುವ ಪಾರಂಪರಿಕ ಸಂಪ್ರದಾಯದಂತೆ ದೊಂದಿ ಬೆಳಕಿನಲ್ಲಿ ನಡೆಯುವ ಭಕ್ತಿಭಾವಪೂರ್ಣ ಏಕಪವಿತ್ರ ಶ್ರೀಮನ್ನಾಗಮಂಡಲದಲ್ಲಿ ಫೆಬ್ರವರಿ 20ರಂದು ಸಂಜೆ ಶ್ರೀನಿವಾಸ ಸಭಾಮಂಟಪದಲ್ಲಿ ರೈತಪೀಠ ಪ್ರಶಸ್ತಿ ಪ್ರದಾನ ನಡೆಯಲಿದೆ.

    Click Here

    Call us

    Click Here

    240ಕ್ಕೂ ಹೆಚ್ಚು ಭಾರತೀಯ ಭತ್ತದ ತಳಿಗಳನ್ನು ಸಂರಕ್ಷಣೆ ಮಾಡಿದ ಅಪರೂಪದ ಕೃಷಿಕ ಋಷಿ ಬಿ.ಕೆ. ದೇವರಾಯ ಮಿತ್ತಬಾಗಿಲು. ಅವರು ಮೂಡಬಿದರೆ ಎಸ್‌ ಕೆಎಫ್‌ ಸಂಸ್ಥೆ ನೀಡುವ ನೂತನ ಪ್ರಥಮ ರೈತಪೀಠ ಪ್ರಶಸ್ತಿಯನ್ನು ಸ್ವೀಕರಿಸುವರು. ತಮ್ಮ ಬದುಕನ್ನೇ ಕೃಷಿ ಕಾಯಕಕ್ಕೆ ಅರ್ಪಿಸಿರುವ ರೈತರ ತ್ಯಾಗ, ಪರಿಶ್ರಮ ಮತ್ತು ರೈತರ ಮಹತ್ವವನ್ನು ಗುರುತಿಸುವ ಮಹತ್ವದ ಉದ್ದೇಶದಿಂದ “ರೈತಪೀಠ” ಎಂಬ ಗೌರವ ಪ್ರಶಸ್ತಿಯನ್ನು ಸ್ಥಾಪಿಸಿ ರೈತರನ್ನು ಗೌರವಿಸುವುದು ನಮ್ಮ ಮುಖ್ಯ ಉದ್ದೇಶ.

    ನಮ್ಮ ಯುವ ಸಮುದಾಯ ಕೃಷಿಯತ್ತ ಆಕರ್ಷಿತರಾಗಬೇಕು, ಕೃಷಿಯನ್ನೂ ಕೂಡ ಕಾರ್ಪೋರೇಟ್‌ ವ್ಯವಸ್ಥೆಯ ಹಂತಕ್ಕೆ ಬೆಳೆಸಬೇಕು, ಮುನಿಯಾಲಿನ ಗೋಧಾಮ ಎಂಬ ಕೃಷಿಲೋಕವನ್ನು ಕಂಡು ಯುವಕರು ಕೃಷಿಯಲ್ಲಿ ತೊಡಗಿ ಸುಂದರ ಬದುಕು ಕಟ್ಟಿಕೊಳ್ಳಬೇಕು ಎಂದು ಪ್ರಕೃತಿಯಿಂದ ಪ್ರಕೃತಿಗೆ ಎಂಬ ವಿನೂತನ ಪರಿಕಲ್ಪನೆಯಲ್ಲಿ‌ ಶ್ರೀಮನ್ನಾಗಮಂಡಲದಲ್ಲಿ ರೈತಪೀಠ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ ಎಂದು ಮುನಿಯಾಲು ಗೋಧಾಮ ಮತ್ತು ಮೂಡಬಿದರೆ ಎಸ್‌ ಕೆಎಫ್‌ ಸಮೂಹ ಸಂಸ್ಥೆಯ ಸಂಸ್ಥಾಪಕ ಡಾ. ಜಿ. ರಾಮಕೃಷ್ಣ ಆಚಾರ್‌ ತನ್ನ ವಿನೂತನ ಯೋಜನೆಯ ಮಾಹಿತಿ ನೀಡಿದರು. 

    ಮಹಾರಾಷ್ಟ್ರ ಕೊಲ್ಲಾಪುರ ಸಿದ್ದಗಿರಿ ಮಠದ ಪೂಜ್ಯಶ್ರೀ ಅದೃಶ್ಯ ಕಾಡಸಿದ್ದೇಶ್ವರ ಮಹಾಸ್ವಾಮೀಜಿ, ಬೆಳಗಾವಿ ನಿಡಸೋಸಿ ಶ್ರೀ ದುರದುಂಡೀಶ್ವರ ಸಿದ್ಧಸಂಸ್ಥಾನ ಮಠದ ಪೂಜ್ಯಶ್ರೀ ನಿಜಲಿಂಗೇಶ್ವರ ಸ್ವಾಮೀಜಿ ದಿವ್ಯ ಸಾನಿಧ್ಯದಲ್ಲಿ ನಡೆಯಲಿದೆ. ಅಧ್ಯಕ್ಷತೆಯನ್ನು ಮೂಡಬಿದರೆ ಆಳ್ವಾಸ್ ಎಜುಕೇಶನ್ ಫೌಂಡೇಶನ್ ಅಧ್ಯಕ್ಷ  ಡಾ. ಎಂ. ಮೋಹನ್ ಆಳ್ವ ವಹಿಸಲಿದ್ದಾರೆ.

    ಕಾರ್ಕಳದ ಕಾಂಗ್ರೆಸ್‌ ನಾಯಕ ಮುನಿಯಾಲು ಉದಯ ಕೃಷ್ಣಯ್ಯ ಶೆಟ್ಟಿ, ಚಾರಿಟೇಬಲ್‌ ಟ್ರಸ್ಟ್‌ ಅಧ್ಯಕ್ಷ ಉದಯ ಕುಮಾರ್‌ ಶೆಟ್ಟಿ, ಗೋಧಾಮದ ಪ್ರವರ್ತಕ  ಡಾ. ಜಿ. ರಾಮಕೃಷ್ಣ ಆಚಾರ್, ಮಂಗಳೂರು ವಿಶ್ವಕರ್ಮ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ. ಹರೀಶ ಆಚಾರ್ಯ ಜಲಕದಕಟ್ಟೆ, ಮಂಗಳೂರು ಎಸ್ ಕೆ ಜಿ ಐ  ಕೋ-ಆಪರೇಟಿವ್ ಸೊಸೈಟಿ ಅಧ್ಯಕ್ಷ ಪೆರ್ಡೂರು ಉಪೇಂದ್ರ ಆಚಾರ್ಯ ಉಪಸ್ಥಿತರಿರುತ್ತಾರೆ.

    Click here

    Click here

    Click here

    Click Here

    Call us

    Call us

    ಗೋಧಾಮದ ಪ್ರವರ್ತಕ ಡಾ. ಜಿ. ರಾಮಕೃಷ್ಣ ಆಚಾರ್ಯ ಅವರ ಸಾಧನೆ ಯಶೋಗಾತೆಯನ್ನು ದಾಖಲಿಸಿದ ಡಾ. ನರೇಂದ್ರ ರೈ ದೆರ್ಲ ರಚಿಸಿರುವ ” ರೈತಪೀಠ ಇದು ಈ ನೆಲದ ಜ್ಞಾನಪೀಠ”  ಕೃತಿಯ ಬಿಡುಗಡೆ ನಡೆಯಲಿದೆ.

    21 ರಂದು ಶನಿವಾರ ಸಂಜೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು:
    ಫೆ.21ರಂದು ಬೆಳಗ್ಗಿನಿಂದ ವಿದ್ವಾನ್‌ ಶ್ರೀ ಕೊರಂಗ್ರಪಾಡಿ ಕುಮಾರಗುರು ತಂತ್ರಿಯವರ ನೇತ್ರತ್ವದಲ್ಲಿ ಏಕಪವಿತ್ರ ಶ್ರೀಮನ್ನಾಗಮಂಡಲದ ಆಶ್ಲೇಷಾ ಬಲಿದಾನ ವಿವಿಧ ಧಾರ್ಮಿಕ ಕಾರ್ಯಗಳು ನಡೆಯಲಿದೆ. ಸಂಜೆ ದುರ್ಗಾನಮಸ್ಕಾರ ಪೂಜೆ, ರಾತ್ರಿ 8 ರಿಂದ ಹಾಲಿಟ್ಟು ಸೇವೆ ಏಕಪವಿತ್ರ  ಶ್ರೀಮನ್ನಾಗಮಂಡಲ ಸೇವೆ ನಡೆಯಲಿದೆ. ಮಧ್ಯಾಹ್ನ 12.30ರಿಂದ ಶ್ರೀ ಭವಾನಿ ಭೋಜನಾಲಯದಲ್ಲಿ ಶ್ರೀಮನ್ನಾಗಮಂಡಲದ ಸಂಪನ್ನದವರೆಗೆ ಮಹಾಅನ್ನಸಂತರ್ಪಣೆ ನಡೆಯಲಿದೆ.

    ಸಭಾ ಮಂಡಲದಲ್ಲಿ ದಿವ್ಯ ಸಾನಿಧ್ಯವನ್ನು ಶ್ರೀಜಗದ್ಗುರು ಮಧ್ವಾಚಾರ್ಯ ಮಹಾಸಂಸ್ಥಾನಮ್ ಸುಬ್ರಹ್ಮಣ್ಯ ಮಠದ ಪೂಜ್ಯಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ, ಉಡುಪಿ ಶ್ರೀ ಅದಮಾರು ಮಠದ ಈಶಪ್ರಿಯ ತೀರ್ಥ ಸ್ವಾಮೀಜಿ ವಹಿಸುತ್ತಾರೆ. ಅಧ್ಯಕ್ಷತೆಯನ್ನು ಮುನಿಯಾಲು ಶ್ರೀಮನ್ನಾನಾಗಮಂಡಲದ ಸೇವಾ ಸಮಿತಿ ಅಧ್ಯಕ್ಷ ದೇವಿ ಪ್ರಸಾದ ಶೆಟ್ಟಿ ಸಾಣೂರುಗುತ್ತು ವಹಿಸಲಿದ್ದಾರೆ.

    ಶಾಸಕ ಸುನಿಲ್ ಕುಮಾರ್, ಕಟಪಾಡಿ ಶ್ರೀಮದ್ ಜಗದ್ಗುರು ಆನೆಗುಂದಿ ಮಹಾಸಂಸ್ಥಾನ ಸರಸ್ವತಿ ಪೀಠದ ಅಧ್ಯಕ್ಷ ಶ್ರೀಧರಾಚಾರ್ಯ ವಡೇರ ಹೋಬಳಿ ಉಪಸ್ಥಿತರಿರುತ್ತಾರೆ. ಆಧ್ಯಾತ್ಮಿಕ ಚಿಂತಕಿ, ಅಂಕಣಕಾರರಾದ ರೂಪ ಅಯ್ಯರ್ ವಿಶೇಷ ಉಪನ್ಯಾಸ ನೀಡಲಿದ್ದಾರೆ.

    ಸಕಲ ಸಿದ್ಧತೆ – ನಾಡಹಬ್ಬದಂತೆ ಶ್ರೀಮನ್ನಾಗಮಂಡಲ ಸಜ್ಜು:
    ಮುನಿಯಾಲು ಸಂಜೀವಿನಿ ಗೋಧಾಮದಲ್ಲಿ ಫೆಬ್ರವರಿ 19ರಿಂದ 21 ರ ತನಕ ನಡೆಯುವ ಪಾರಂಪರಿಕ ಸಂಪ್ರದಾಯದಂತೆ ದೊಂದಿ ಬೆಳಕಿನಲ್ಲಿ ನಡೆಯುವ ಭಕ್ತಿಭಾವಪೂರ್ಣ ಏಕಪವಿತ್ರ ಶ್ರೀಮನ್ನಾಗಮಂಡಲದ ಯಶಸ್ಸಿಗಾಗಿ ಸಕಲ ಸಿದ್ಧತೆಗಳು ಭರದಿಂದ ನಡೆಯುತ್ತಿದೆ. ನಾಡಹಬ್ಬದಂತೆ ಊರಿಗೆ ಊರೇ ಶ್ರೀಮನ್ನಾಗಮಂಡಲಕ್ಕೆ ಸಜ್ಜಾಗಿದೆ. ಡಾ. ಜಿ. ರಾಮಕೃಷ್ಣ ಆಚಾರ್‌ ಮಾರ್ಗದರ್ಶನದಲ್ಲಿ ಅಧ್ಯಕ್ಷ ದೇವಿ ಪ್ರಸಾದ ಶೆಟ್ಟಿ ಸಾಣೂರುಗುತ್ತು, ಪ್ರಧಾನ ಕಾರ್ಯದರ್ಶಿಗಳಾದ ಶ್ರೀಕಾಂತ ಶೆಟ್ಟಿ ಕಾರ್ಕಳ ಮತ್ತು ದಾಮೋಧರ ಶರ್ಮ ಬಾರ್ಕೂರು ಹಾಗೂ ಪ್ರಧಾನ ಸಮಿತಿಯ ಗೌರವಾಧ್ಯಕ್ಷರು, ಜೊತೆ ಕಾರ್ಯದರ್ಶಿಗಳು, ಮಾರ್ಗದರ್ಶಕರು ಮತ್ತು ವಿವಿಧ ಉಪಸಮಿತಿಗಳು ಅಭೂತಪೂರ್ವ ಮುನಿಯಾಲು ಶ್ರೀಮನ್ನಾಗಮಂಡಲದ ಯಶಸ್ಸಿಗೆ ಶ್ರಮಿಸುತ್ತಿದ್ದಾರೆ.

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026

    ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    21/05/2026

    ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ

    21/05/2026
    Leave A Reply Cancel Reply

    fifteen + two =

    Call us

    Click Here

    Call us

    Call us

    Call us
    Highest Viewed Recently
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.