ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಬೈಂದೂರು ಪೊಲೀಸ್ ಠಾಣಾ ವ್ಯಾಪ್ತಿಯ ಪರಿಶಿಷ್ಟ ಜಾತಿ/ ಪಂಗಡದ ಮುಖಂಡರುಗಳು ಹಾಗೂ ಗ್ರಾಮಸ್ಥರಿಗೆ ಮಾಸಿಕ ಎಸ್‌ಸಿ ಎಸ್‌ಟಿ ಕುಂದು ಕೊರತೆ ಸಭೆ ಬೈಂದೂರು ವೃತ್ತ ನಿರೀಕ್ಷಕರಾದ ಶಿವಕುಮಾರ್ ಬಿ. ಅವರ ನೇತೃತ್ವದಲ್ಲಿ ಭಾನುವಾರ ನಡೆಯಿತು.

ಸಭೆಯಲ್ಲಿ ಕುಂದುಕೊರತೆ ಬಗ್ಗೆ ವಿಚಾರಿಸಿ ಆಹವಾಲುಗಳನ್ನು ಸ್ವೀಕರಿಸಿ ಸಂಬಂಧಪಟ್ಟ ಇಲಾಖೆಗಳಿಗೆ ಪತ್ರ ವ್ಯವಹಾರ ಮಾಡುವುದಾಗಿ ತಿಳಿಸಿದರು.
ಇದೇ ವೇಳೆ ಸೈಬರ್ ಅಪರಾಧ, ಸಂಚಾರಿ ನಿಯಮಗಳು, ತುರ್ತು ಸಂದರ್ಭದಲ್ಲಿ 112 ದೂರವಾಣಿ ಕರೆ ಹಾಗೂ ಇನ್ನಿತರ ಬಗ್ಗೆ ಮಾಹಿತಿ ನೀಡಿದರು.










