ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ತಾಲೂಕಿನ ವತ್ತಿನಕಟ್ಟೆ ಶ್ರೀ ಮಹಾಸತಿ ಅಮ್ಮನವರ ದೇವಸ್ಥಾನದಲ್ಲಿ ವಾರ್ಷಿಕ ವರ್ಧಂತ್ಯೋತ್ಸವ ಹಾಗೂ ಭಜನೋತ್ಸವ ಕಾರ್ಯಕ್ರಮ ಗುರುವಾರದಂದು ನಡೆಯಿತು.

ಬೆಳಿಗೆ 7:30ಕ್ಕೆ ಭಜನಾ ದೀಪ ಸ್ಥಾಪನೆ ಶ್ರೀದೇವಿಗೆ ಕಲಶಾಭಿಷೆಕ ಚಂಡಿಕಾಹೋಮ, ನಾಗದೇವರ ಸನ್ನಿಧಿಯಲ್ಲಿ ಕಲಾಹೋಮ ಮಹಾಪೂಜೆ ನಡೆಯಿತು. ದೇವಸ್ಥಾನದ ಪ್ರಧಾನ ಅರ್ಚಕ ಕೃಷ್ಣಮೂರ್ತಿ ನಾವಡ ಇವರ ನೇತ್ರತ್ವದಲ್ಲಿ ವಿವಿಧ ಪೂಜಾ ವಿಧಿ ವಿಧಾನಗಳು ನಡೆಯಿತು.
ಈ ಸಂದರ್ಭದಲ್ಲಿ ಆಡಳಿತ ಮಂಡಳಿ ಅಧ್ಯಕ್ಷರು ಪದಾಧಿಕಾರಿಗಳು ಸರ್ವ ಸದಸ್ಯರು ಹಾಗೂ ಭಕ್ತಾಧಿಗಳು ಹಾಜರಿದ್ದರು.










