Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ರೈತರು ಕೃಷಿ ಚಟುವಟಿಕೆಗಳಿಗೆ ಜಮೀನಿನ ಮಣ್ಣು ಸಾಗಾಟ ಮಾಡುವಾಗ ತೊಂದರೆ ಉಂಟಾಗದಂತೆ ನೋಡಿಕೊಳ್ಳಿ: ಸಂಸದ ಕೋಟ
    ಉಡುಪಿ ಜಿಲ್ಲೆ

    ರೈತರು ಕೃಷಿ ಚಟುವಟಿಕೆಗಳಿಗೆ ಜಮೀನಿನ ಮಣ್ಣು ಸಾಗಾಟ ಮಾಡುವಾಗ ತೊಂದರೆ ಉಂಟಾಗದಂತೆ ನೋಡಿಕೊಳ್ಳಿ: ಸಂಸದ ಕೋಟ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಉಡುಪಿ:
    ರೈತರು ಕೃಷಿ ಚಟುವಟಿಕೆಗಳಿಗೆ ತಮ್ಮ ಜಮೀನಿನ ಮಣ್ಣನ್ನು ಬಳಸಲು ಸಾಗಾಣಿಕೆ ಮಾಡುತ್ತಿರುವಾಗ ತೊಂದರೆ ಆಗುತ್ತಿದೆ ಎಂಬ ದೂರುಗಳು ಬರುತ್ತಿವೆ, ಈ ಸಮಸ್ಯೆಯನ್ನು ಬಗೆಹರಿಸಿ ರೈತರಿಗೆ ತೊಂದರೆಯಾಗದಂತೆ ನೋಡಿಕೊಳ್ಳಬೇಕು ಎಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಸಂಸದ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.

    Click Here

    Call us

    Click Here

    ಅವರು ಸೋಮವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ವ್ಯಾಪ್ತಿಯಲ್ಲಿ ಕೃಷಿ ಉದ್ದೇಶಕ್ಕಾಗಿ ಮಣ್ಣು ಸಾಗಾಣಿಕೆ ಮಾಡುತ್ತಿರುವಾಗ ಅಡ್ಡಗಟ್ಟುತ್ತಿರುವ ಸಮಸ್ಯೆಯ ಬಗ್ಗೆ ಚರ್ಚಿಸಲು ಆಯೋಜಿಸಲಾದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿ ಅನೇಕ ವರ್ಷಗಳಿಂದ ರೈತರುಗಳು ತಮ್ಮ ಕೃಷಿ ಚಟುವಟಿಕೆಗಳಿಗೆ ತಮ್ಮ ಖಾಸಗಿ ಜಮೀನುಗಳಿಂದ ಮಣ್ಣುಗಳನ್ನು ಸಾಗಾಟ ಮಾಡಿ ಇನ್ನೊಂದು ಜಮೀನಿಗೆ ಬಳಸುತ್ತಿದ್ದಾರೆ. ಆದರೆ ಇನ್ಯಾವುದೋ ಅನ್ಯ ಉದ್ದೇಶಕ್ಕೆ ಬಳಸುತ್ತಿಲ್ಲ. ನಿಯಮಾನುಸಾರ ಅವರುಗಳಿಗೆ ಸಮಸ್ಯೆ ಉಂಟಾಗದಂತೆ ಎಚ್ಚರಿಕೆಯಿಂದ ಕಾರ್ಯನಿರ್ವಹಿಸಬೇಕು ಎಂದರು.

    ಶಾಸಕ ಸುನಿಲ್ ಕುಮಾರ್ ಮಾತನಾಡಿ, ರೈತರು ತಮ್ಮ ಕೃಷಿ ಜಮೀನುಗಳಿಗೆ ಮಣ್ಣು ಸಾಗಾಟ ಮಾಡುತ್ತಿರುವ ಬಗ್ಗೆ ದೂರುಗಳನ್ನು ಕೆಲವರು ತಮ್ಮ ಲಾಭಕ್ಕಾಗಿ ನೀಡುತ್ತಾರೆ. ಇದರ ಬಗ್ಗೆ ಗಂಭೀರವಾಗಿ ತೆಗೆದುಕೊಳ್ಳುವ ಅವಶ್ಯಕತೆ ಇರುವುದಿಲ್ಲ ಎಂದರು.

    ಶಾಸಕ ಎ. ಕಿರಣ್ ಕುಮಾರ್ ಕೊಡ್ಗಿ ಮಾತನಾಡಿ, ಇತ್ತೀಚೆಗೆ ಕೋಟ ವ್ಯಾಪ್ತಿಯಲ್ಲಿ ಮಣ್ಣು ಸಾಗಾಟ ಲಾರಿಯಿಂದ ಎರಡು ಅಪಘಾತ ಪ್ರಕರಣಗಳು ಆಗಿದ್ದು, ನಂತರದ ದಿನಗಳಲ್ಲಿ ರೈತರು ಮಣ್ಣು ಸಾಗಾಣಿಕೆ ಸಂಬಂಧ ದೂರುಗಳು ಬರುತ್ತಿವೆ. ಅಪಘಾತ ಪ್ರಕರಣದ ಈ ಹಿಂದೆ ಕಳೆದ ಒಂದು ವರ್ಷದಿಂದ ಈ ರೀತಿಯ ದೂರುಗಳು ಬಂದಿರುವುದಿಲ್ಲ. ರೈತರಿಗೆ ಯಾವುದೇ ರೀತಿಯ ತೊಂದರೆ ಉಂಟಾಗದಂತೆ ನೋಡಿಕೊಳ್ಳುವುದು ಸೂಕ್ತ ಎಂದರು.

    ಸಭೆಯಲ್ಲಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ, ಶಾಸಕರುಗಳಾದ ಯಶ್‌ಪಾಲ್ ಎ ಸುವರ್ಣ, ಗುರ್ಮೆ ಸುರೇಶ್ ಶೆಟ್ಟಿ ಹಾಗೂ ಗುರುರಾಜ್ ಶೆಟ್ಟಿ ಗಂಟಿಹೊಳೆ, ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಸುಧಾಕರ್ ನಾಯಕ್, ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಹಿರಿಯ ಭೂ ವಿಜ್ಞಾನಿ ವಿಂಧ್ಯ ಎನ್.ಎಮ್. ಹಾಗೂ ಮತ್ತಿತರರು ಉಪಸ್ಥಿತರಿದ್ದರು.

    Click here

    Click here

    Click here

    Click Here

    Call us

    Call us

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    21/05/2026

    ಜೂ.1 ರಿಂದ 61 ದಿನಗಳ ಕಾಲ ಯಾಂತ್ರೀಕೃತ ಮೀನುಗಾರಿಕೆ ನಿಷೇಧ

    21/05/2026

    ಉಡುಪಿ: ಮಹಾತ್ಮ ಗಾಂಧಿ ಮೆಮೋರಿಯಲ್‌ ಸಂಧ್ಯಾ ಕಾಲೇಜಿನಲ್ಲಿ ವಿದ್ಯಾರ್ಥಿ ಕ್ಷೇಮಪಾಲನಾ ಮಂಡಳಿ ದಿನಾಚರಣೆ

    20/05/2026
    Leave A Reply Cancel Reply

    4 + five =

    Call us

    Click Here

    Call us

    Call us

    Call us
    Highest Viewed Recently
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ
    • ಜೂ.1 ರಿಂದ 61 ದಿನಗಳ ಕಾಲ ಯಾಂತ್ರೀಕೃತ ಮೀನುಗಾರಿಕೆ ನಿಷೇಧ
    • ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.