ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೋಟ: ಕಾರಂತ ಪ್ರತಿಷ್ಠಾನ ರಿ. ಕೋಟ, ಕೋಟತಟ್ಟು ಗ್ರಾಮ ಪಂಚಾಯತ್, ಅಮೃತೇಶ್ವರಿ ಮಹಿಳಾ ಮೀನುಗಾರರ ಸಹಕಾರಿ ಸಂಘ ಕೋಟ, ನೆನಪು ಮತ್ತು ಉಸಿರು ಕೋಟ ಸಹಯೋಗದೊಂದಿಗೆ ವಿಶ್ವಮಹಿಳಾ ದಿನಾಚರಣೆ ಅಂಗವಾಗಿ ಮಾರ್ಚ್ 15 ರಂದು ಅಪರಾಹ್ನ ಕೋಟದ ಕಾರಂತ ಥೀಮ್ ಪಾರ್ಕ್‌ನಲ್ಲಿ ನಡೆಯುವ ಉಡುಪಿ ಜಿಲ್ಲಾ ಮಟ್ಟದ 4ನೇ ಮಹಿಳಾ ಕಾಲಮಿತಿ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಸವಿತಾ ಮಾಧವ ಶಾಸ್ತ್ರಿಯನ್ನು ಆಯ್ಕೆ ಮಾಡಲಾಗಿದೆ.
ಪ್ರತಿಷ್ಠಾನದ ಗೌರವಾಧ್ಯಕ್ಷರಾದ ಆನಂದ ಸಿ. ಕು೦ದರ್, ಕಾರ್ಯದರ್ಶಿ ನರೇಂದ್ರ ಕುಮಾರ್ ಕೋಟ, ಪಂಚಾಯತ್ ಪಿಡಿಓ ರವೀ೦ದ್ರ ರಾವ್, ಕಾರ್ಯದರ್ಶಿ ಸುಮತಿ ಅಂಚನ್, ಕಾರ್ಯಕ್ರಮ ನಿರ್ದೇಶಕಿ ಸುಶೀಲಾ ಸೋಮಶೇಖರ್ ತಿಳಿಸಿದ್ದಾರೆ.
ಸವಿತಾ ಮಾಧವ ಶಾಸ್ತಿ ಅವರು ಈ ತನಕ ಮೂರು ಕಥಾ ಸಂಕಲನ ಪ್ರಕಟಗೊಂಡಿವೆ. ಅವರು ಬರೆದಿರುವ ನೂರಾರು ಕಥೆಗಳು, ಹಾಸ್ಯ ಬರಹಗಳು ನಾಡಿನ ಪ್ರಸಿದ್ಧ ಪತ್ರಿಕೆಯಲ್ಲಿ ಪ್ರಕಟಗೊಂಡಿದೆ. ಹಲವಾರು ರಾಜ್ಯ ಮಟ್ಟದ ಸಾಹಿತ್ಯಕ ಸ್ಪರ್ಧೆಯಲ್ಲಿ ಪುರಸ್ಕಾರಗಳಿಸಿದ್ದಾರೆ.
ಅವರ ಕಥೆ ತೆಲುಗಿಗೆ ಅನುವಾದಗೊಂಡಿದ್ದು, ಅವರ ಕಥೆಯನ್ನು ಕೆನಡಾ ದೇಶದ ತಂಡ ಕಿರುಚಿತ್ರ ನಿರ್ಮಿಸುತ್ತಿದ್ದಾರೆ. ಪತಿ ಉದ್ಯಮಿ ಮಾಧವ ಶಾಸ್ತ್ರಿ, ಮಕ್ಕಳು ವೈಭವಿ, ಸಾನ್ವಿಯೊಂದಿಗೆ ನೆಲೆಸಿದ್ದಾರೆ.










