ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ: ವಿಪರೀತ ಮದ್ಯ ಸೇವನೆ ಚಟ ಹೊಂದಿದ್ದ ಗುಜ್ಜಾಡಿ ಗ್ರಾಮದ ಕೊಡಪಾಡಿಯ ನಿವಾಸಿ ಸುಧಾಕರ ಶೇರುಗಾರ (37) ಅವರು ಫೆ.24 ರಂದು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರು ಕೊಡಪಾಡಿಯ ತಂದೆಯ ಮನೆಯಲ್ಲಿದ್ದು, ಹೊಟೇಲ್ ನಲ್ಲಿ ಕೆಲಸ ಮಾಡಿಕೊಂಡಿದ್ದರು.
ವಿಪರೀತ ಮದ್ಯ ಸೇವನೆ ಚಟದಿಂದ ಆರೋಗ್ಯದಲ್ಲಿ ಏರುಪೇರಾಗಿ ಅನಾರೋಗ್ಯದಿಂದ ಅಥವಾ ಬೇರೆ ಯಾವುದೋ ಕಾರಣದಿಂದ ಜೀವನದಲ್ಲಿ ಜುಗುಪ್ಪೆಗೊಂಡು ಆತ್ಮಹತ್ಯೆ ಮಾಡಿಕೊಂಡಿರಬಹುದು ಎನ್ನಲಾಗಿದೆ.
ಈ ಬಗ್ಗೆ ಗಂಗೊಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.










