ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: 360 ವರ್ಷ ಪುರಾತನವಾದ ಪುರಾಣ ಪ್ರಸಿದ್ಧ ಗಂಗೊಳ್ಳಿಯ ಮಲ್ಯರ ಮಠ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಕಾಲಂಪ್ರತಿ ಜರಗುವ ಬ್ರಹ್ಮರಥೋತ್ಸವದ ಧಾರ್ಮಿಕ ವಿಧಿವಿಧಾನಗಳು ಧ್ವಜಅವರೋಹಣದೊಂದಿಗೆ ಬುಧವಾರ ಮುಕ್ತಾಯವಾಯಿತು.

ಬುಧವಾರ ಸಂಜೆ ಅವಭೃತ ಉತ್ಸವ, ಧ್ವಜ ಅವರೋಹಣ, ಶ್ರೀದೇವರಿಗೆ ವಿಶೇಷ ಪೂಜೆ ಮತ್ತಿತರ ಧಾರ್ಮಿಕ ಕಾರ್ಯಕ್ರಮಗಳು ಶ್ರೀ ಸಂಸ್ಥಾನ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠಾಧೀಶ ಶ್ರೀಮದ್ ವಿದ್ಯಾಧೀಶ ಶ್ರೀಪಾದ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ದೇವಳದ ಪ್ರಧಾನ ಅರ್ಚಕ ಎಸ್.ವೆಂಕಟರಮಣ ಆಚಾರ್ಯ ಮತ್ತು ದೇವಳದ ತಾಂತ್ರಿಕ ಜಿ. ವಸಂತ ಭಟ್ ನೇತೃತ್ವದಲ್ಲಿ ಶಾಸ್ತ್ರೋಕ್ತವಾಗಿ ನಡೆಯಿತು. ರಾತ್ರಿ ಪಂಚಗಂಗಾವಳಿ ನದಿಯಲ್ಲಿ ಶ್ರೀ ದೇವರ ನಿರಾಟ ಉತ್ಸವ ಜರುಗಿತು.
ದೇವಳದ ಆಡಳಿತ ಮಂಡಳಿ ಸದಸ್ಯರು, ಅರ್ಚಕರು, ಪುರೋಹಿತರು, ಸಮಾಜಬಾಂಧವರು, ಊರಿನ ಹತ್ತು ಸಮಸ್ತರು ಮೊದಲಾದವರು ಉಪಸ್ಥಿತರಿದ್ದರು.










