ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಜಿಲ್ಲೆಯಲ್ಲಿ ಹೋಳಿ ಹಬ್ಬದ ಆಚರಣೆಯ ಹಿನ್ನೆಲೆ ಕಾನೂನು ಸುವ್ಯವಸ್ಥೆ ಮತ್ತು ಸಾರ್ವಜನಿಕ ಶಾಂತಿ ಕಾಪಾಡುವ ಹಿತದೃಷ್ಟಿಯಿಂದ, ಗಂಗೊಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಗಂಗೊಳ್ಳಿ ಮತ್ತು ಗುಜ್ಜಾಡಿ ಗ್ರಾಮ ವ್ಯಾಪ್ತಿಯಲ್ಲಿ ಹಾಗೂ ಕುಂದಾಪುರ ನಗರ ಠಾಣೆಯ ಕಸಬಾ, ವಡೇರಹೋಬಳಿ ಹಾಗೂ ಹಂಗಳೂರು ಗ್ರಾಮ ವ್ಯಾಪ್ತಿಯಲ್ಲಿ ಮಾರ್ಚ್ 5 ರಂದು ಬೆಳಗ್ಗೆ 6 ಗಂಟೆಯಿಂದ ರಾತ್ರಿ 12 ಗಂಟೆಯವರೆಗೆ ಮದ್ಯ ಮಾರಾಟದ ಸನ್ನದುಗಳನ್ನು ಹೊಂದಿರುವ ಬಾರ್ & ರೆಸ್ಟೋರೆಂಟ್ ಮತ್ತು ವೈನ್ ಶಾಪ್‌ಗಳ ಮದ್ಯ ಮಾರಾಟವನ್ನು ನಿಷೇಧಿಸಿ, ಅಬಕಾರಿ ಸನ್ನದುಗಳನ್ನು ಮುಚ್ಚಲು ಆದೇಶಿಸಿದೆ.
ಈ ಹಿನ್ನಲೆಯಲ್ಲಿ ಮೇಲೆ ತಿಳಿಸಲಾದ ದಿನಾಂಕದಂದು ಗಂಗೊಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಗಂಗೊಳ್ಳಿ, ಗುಜ್ಜಾಡಿ ಹಾಗೂ ಕುಂದಾಪುರ ನಗರ ಠಾಣೆಯ ಕಸಬಾ, ವಡೇರಹೋಬಳಿ ಮತ್ತು ಹಂಗಳೂರು ಗ್ರಾಮಗಳ ವ್ಯಾಪ್ತಿಯಲ್ಲಿ ಒಣದಿನ (Dry Day) ಎಂದು ಘೋಷಿಸಿ, ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾ ದಂಡಾಧಿಕಾರಿಯು ಆಗಿರುವ ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ ಅದೇಶಿಸಿರುತ್ತಾರೆ.










